- ಖಾಸಗೀಕರಣದ ರೈತರ ಉಚಿತ ವಿದ್ಯುತ್‌ಗೆ ಕಂಟಕ । ಗ್ರಾಹಕರು, ನೌಕರರ ಶ್ರೇಯಸ್ಸಿಗೆ ಕೇಂದ್ರದ ಕ್ರಮ ವಿರುದ್ಧ
--- ವಿದ್ಯುತ್ ಸುಧಾರಣೆ ಕಾಯ್ದೆ-2026 ಗ್ರಾಹಕರಿಗೆ, ನೌಕರರಿಗೆ ಮಾರಕವಾಗಲಿದ್ದು, ಇದು ಕಾರ್ಮಿಕ ವಿರೋಧಿ ನೀತಿಯಾಗಿದೆ. ರೈತರು, ಜನಸಾಮಾನ್ಯರಿಗೆ ಹೊರೆಯಾಗಲಿದೆ.- ಎನ್.ಮಹೇಶ್, ನೌಕರರ ಸಂಘದ ಉಪಾಧ್ಯಕ್ಷ
---ಕನ್ನಡಪ್ರಭ ವಾರ್ತೆ ಚಾಮರಾಜನಗರ
ವಿದ್ಯುತ್ ಖಾಸಗೀಕರಣ ವಿರೋಧಿಸಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘದ ಆಶ್ರಯದಲ್ಲಿ ನೌಕರರು, ಅಧಿಕಾರಿಗಳು ನಗರದಲ್ಲಿ ಗುರುವಾರ ಪ್ರತಿಭಟಿಸಿದರು.
ನಗರದ ಸೆಸ್ಕ್ ಕಚೇರಿಯ ಮುಂಭಾಗ ಜಮಾಯಿಸಿದ ಅಧಿಕಾರಿಗಳು ಹಾಗೂ ನೌಕರರು, ‘ವಿದ್ಯುತ್ ಕಾಯ್ದೆಗೆ ತಿದ್ದುಪಡಿ ಬೇಡ. ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣ ಬೇಡ, ಕಾರ್ಮಿಕರ ಒಗ್ಗಟ್ಟು ಚಿರಾಯುವಾಗಲಿ’ ಎಂಬ ಘೋಷಣೆಗಳನ್ನು ಕೂಗಿದರು.
ನೌಕರರ ಸಂಘದ ಉಪಾಧ್ಯಕ್ಷ ಎನ್.ಮಹೇಶ್ ಅವರು ಮಾತನಾಡಿ, ಕೇಂದ್ರ ಸರ್ಕಾರ ವಿದ್ಯುತ್ ಕ್ಷೇತ್ರವನ್ನು ಖಾಸಗೀಕರಣ ಮಾಡಲು ಹೊರಟಿರುವುದರ ವಿರುದ್ದ ಆಲ್ ಇಂಡಿಯಾ ಎಂಜಿನಿಯರ್ ಒಕ್ಕೂಟ, ಸಂಘ-ಸಂಸ್ಥೆಗಳ ಒಂದು ದಿನದ ಮುಷ್ಕರ ಮಾಡಿರುವುದನ್ನು ಬೆಂಬಲಿಸಿ ಪ್ರತಿಭಟನೆ ಮಾಡುತ್ತಿದ್ದೇವೆ. ವಿದ್ಯುತ್ ಸುಧಾರಣೆ ಕಾಯ್ದೆ-2026 ಗ್ರಾಹಕರಿಗೆ, ನೌಕರರಿಗೆ ಮಾರಕವಾಗಲಿದ್ದು, ಇದು ಕಾರ್ಮಿಕ ವಿರೋಧಿ ನೀತಿಯಾಗಿದೆ. ರೈತರು, ಜನಸಾಮಾನ್ಯರಿಗೆ ಹೊರೆಯಾಗಲಿದೆ. ಕೃಷಿ ಉದ್ದೇಶಕ್ಕೆ ರೈತರಿಗೆ ನೀಡುತ್ತಿರುವ ಉಚಿತ ವಿದ್ಯುತ್‌ಗೆ ತೊಂದರೆ ಉಂಟಾಗುವ ಸಾಧ್ಯತೆ ಇದೆ. ಬಡವರಿಗೆ ನೀಡುತ್ತಿರುವ ಭಾಗ್ಯಜ್ಯೋತಿ, ಕುಟೀರ ಜ್ಯೋತಿ, ಉಚಿತ ವಿದ್ಯುತ್‌ಗೆ ಕಡಿವಾಣ ಬೀಳುವ ಸಾಧ್ಯತೆ’ ಎಂದು ಕಳವಳ ವ್ಯಕ್ತಪಡಿಸಿದರು.ವಿದ್ಯುತ್ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿರುವ 60,000ಕ್ಕೂ ಹೆಚ್ಚು ನೌಕರರು ಹಾಗೂ ಈ ಸಂಸ್ಥೆ ಕಟ್ಟಿ ಬೆಳಸಿದ 40 ಸಾವಿರ ಪಿಂಚಣಿದಾರರಿಗೆ ತೊಂದರೆಯಾಗಲಿದೆ. ಆದ್ದರಿಂದ ಕೇಂದ್ರ ಸರ್ಕಾರ ಯಾವುದೇ ಕಾರಣಕ್ಕೂ ವಿದ್ಯುತ್ ಖಾಸಗೀಕರಣ ಮಾಡಬಾರದು’ ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರದೀಪ್, ಎಇಇ ಮಹೇಶ್, ನೌಕರರ ಸಂಘದ ಅಧ್ಯಕ್ಷ ಮುರುಳೀಕೃಷ್ಣಸ್ವಾಮಿ, ಕಾರ್ಯದರ್ಶಿ ಸಿದ್ದರಾಜಪ್ಪ, ಎಸ್‌ಸಿಎಸ್‌ಟಿ ಕಲ್ಯಾಣ ಸಂಸ್ಥೆ ಕೇಂದ್ರ ಸಮಿತಿ ಸದಸ್ಯ ಮಂಜುನಾಥ್, ಅಧ್ಯಕ್ಷ ಪ್ರಶಾಂತ್, ಕಾರ್ಯದರ್ಶಿ ಸೋಮೇಶ್ವರ, ಎಲ್ಲ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ನೌಕರರು ಭಾಗವಹಿಸಿದ್ದರು.--
ಕೊಳ್ಳೆಗಾಲ: ನೌಕರರ ಧರಣಿಕನ್ನಡಪ್ರಭ ವಾರ್ತೆ ಕೊಳ್ಳೇಗಾಲವಿದ್ಯುತ್ ಖಾಸಗೀಕರಣ ವಿರೋಧಿಸಿ ಇಲ್ಲಿನ ಕೆಪಿಟಿಸಿಎಲ್ ನೌಕರರ ಗುರುವಾರ ಪ್ರತಿಭಟನೆ ನಡೆಸಿದರು. ಪಟ್ಟಣದ ಸೆಸ್ಕ್ ಕಚೇರಿಯ ಮುಂಭಾಗದಲ್ಲಿ ಜಮಾಯಿಸಿದ ನೂರಾರು ನೌಕಕರರು ಹಾಗೂ ಅಧಿಕಾರಿಗಳು ಖಾಸಗಿ ಕರಣವನ್ನು ಖಂಡಿಸಿ ಧಿಕ್ಕಾರ ಕೂಗುವ ಮೂಲಕ ಒಂದು ಗಂಟೆಗೂ ಹೆಚ್ಚು ಕಾಲ ಪ್ರತಿಭಟಿಸಿದರು. ಕೇಂದ್ರ ಸರ್ಕಾರದ ಕ್ರಮ ಸರಿಯಲ್ಲ, ಕೂಡಲೆ ಈಕ್ರಮ ಕೈಬಿಡಬೇಕು ಎಂದು ನೌಕರರರುಗಳು ಆಗ್ರಹಿಸಿದರು.ಈ ವೇಳೆ ಸೆಸ್ಕ್ ಇಲಾಖೆ ಕಾರ್ಯಪಾಲಕ ಅಭಿಯಂತರೆ ತಬಸ್ಸುಮ್ ಅಪ್ಜಾ, ಎಇಇ ಶ್ರೀನಿಧಿ, ರಾಜು.ಎಂ, ಲೆಕ್ಕಾಧಿಕಾರಿ ವಿನೋದ್ ಕುಮಾರ್, ಲೆಕ್ಕಾಧಿಕಾರಿ ಪ್ರಸನ್ನ, ಕೆಪಿಟಿಸಿಎಲ್ ನೌಕರರ ಸಂಘ ಅಧ್ಯಕ್ಷ ಎಚ್.ರೇವಣ್ಣ, ಕಾರ್ಯದರ್ಶಿ ಎಂ.ನಂಜುಂಡೇಗೌಡ, ಕೇಂದ್ರ ಕಾರ್ಯಕಾರಿಣಿ ಸದಸ್ಯರು ಮಹದೇವ ಇನ್ನಿತರಿದ್ದರು.---ಬೇಗೂರಲ್ಲೂ ಪ್ರತಿಭಟನೆ
ಕನ್ನಡಪ್ರಭ ವಾರ್ತೆ ಗುಂಡ್ಲುಪೇಟೆಕೇಂದ್ರ ಸರ್ಕಾರ 2026 ರ ವಿದ್ಯುತ್ ಕಾಯಿದೆ ತಿದ್ದುಪಡಿ ವಿರೋಧಿಸಿ ಗುಂಡ್ಲುಪೇಟೆ ಹಾಗೂ ಬೇಗೂರು ಸೆಸ್ಕಾಂ ಉಪ ವಿಭಾಗದ ಕಚೇರಿ ಮುಂದೆ ಪ್ರತ್ಯೇಕವಾಗಿ ಕರ್ನಾಟಕ ವಿದ್ಯುತ್ ಪ್ರಸರಣಾ ನೌಕರರ ಸಂಘ ಹಾಗೂ ಒಕ್ಕೂಟದ ಸದಸ್ಯರು ಪ್ರತಿಭಟನೆ ನಡೆಸಿದರು.ಇಂಧನ ಇಲಾಖೆಯನ್ನು ಖಾಸಗೀರಣಗೊಳಿಸಲು 2026ರ ಅಧಿವೇಶನದಲ್ಲಿ ವಿದ್ಯುತ್ ಕಾಯ್ದೆ ಮಂಡನೆಗೆ ಕೇಂದ್ರ ಸರ್ಕಾರ ಹೊರಟಿದೆ. ಇದರ ವಿರುದ್ದ ನೌಕರರು ಸಾಂಕೇತಿಕವಾಗಿ ಪ್ರತಿಭಟಿಸಿದರು.‘2016ರ ವಿದ್ಯುತ್ ಕಾಯ್ದೆ ಪ್ರಸ್ತಾಪಿತ ತಿದ್ದುಪಡಿ ಬೇಡ, ಕಾರ್ಮಿಕ ವಿರೋಧಿ ನೀತಿಗೆ ಧಿಕ್ಕಾರ, ವಿದ್ಯುತ್ ಕ್ಷೇತ್ರದಲ್ಲಿ ಹೊರ ಗುತ್ತಿಗೆ ಹಾಗೂ ಖಾಸಗೀಕರಣ ತರಲು ಹೊರಟಿರುವುದನ್ನು ನೌಕರರ ಸಂಘ ಹಾಗೂ ಒಕ್ಕೂಟ ಖಂಡಿಸುತ್ತದೆ’ ಎಂದು ನೌಕರರು ಹೇಳಿದ್ದಾರೆ.
ಕೇಂದ್ರ ಸರ್ಕಾರ ಇಂಧನ ಇಲಾಖೆಯನ್ನು ಖಾಸಗೀಕರಣ ಮಾಡಲು ಹೊರಟಿದ್ದು,ಇದು ಕಾರ್ಮಿಕರಿಗೆ ಅನ್ಯಾಯವಾಗಲಿದೆ ಹಾಗಾಗಿ ಕೇಂದ್ರ ಸರ್ಕಾರ ತಿದ್ದು ಪಡಿ ತರಬಾರದು ಎಂದು ನೌಕರರು ಆಗ್ರಹಿಸಿದರು.---ಹನೂರಲ್ಲೂ ಕೇಂದ್ರದ ವಿರುದ್ಧ ಮುಷ್ಕರ
- ನೌಕರರ ಬಲಿದಾನದಿಂದ ನಿರ್ಮಿತ ಸಂಸ್ಥೆ ಖಾಸಗೀಕರಣಕ್ಕೆ ಕಿಡಿಕನ್ನಡಪ್ರಭ ವಾರ್ತೆ ಹನೂರುಅತ್ತ ಚಾಮರಾಜನಗರದಲ್ಲಿ ಪ್ರತಿಭಟನೆ ನಡೆದರೆ, ಇತ್ತ ಹನೂರಿನಲ್ಲಿಯೂ ಸಹ ಸೆಸ್ಕಾಂ ಕಚೇರಿ ಮುಂಭಾಗ ಆವರಣದಲ್ಲಿ ಪ್ರತಿಭಟನೆ ನಡೆಯಿತು. ಕೇಂದ್ರ ಸರ್ಕಾರ ಜಾರಿ ತರಲು ಹೊರಟಿರುವ ವಿದ್ಯುತ್ ಖಾಸಗೀಕರಣವನ್ನು ವಿರೋಧಿಸಿ ಕರ್ನಾಟಕ ವಿದ್ಯುತ್ ಪ್ರಸರಣ ನೌಕರರ ಸಂಘದ ಪದಾಧಿಕಾರಿಗಳು ಸೆಸ್ಕಾಂ ಕಚೇರಿ ಮುಂಭಾಗ ಧರಣಿ ಕುಳಿತರು.ಕೇಂದ್ರ ಸರ್ಕಾರದ ವಿದ್ಯುತ್ ಖಾಸಗೀಕರಣ ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ನೌಕರರು ಧಿಕ್ಕಾರ ಕೂಗಿದರು.
ಕೆಪಿಟಿಸಿಎಲ್ ನೌಕರರ ಸಂಘದ ಅಧ್ಯಕ್ಷ ರಾಜೇಂದ್ರ ಪ್ರಸಾದ್ ಮಾತನಾಡಿ,‘ ಕೇಂದ್ರ ಸರ್ಕಾರ ವಿದ್ಯುತ್ ಇಲಾಖೆಯನ್ನು ಖಾಸಗೀಕರಣ ಮಾಡುತ್ತಿರುವುದರಿಂದ ಮುಂದಿನ ದಿನದಲ್ಲಿ ಪ್ರತಿಯೊಬ್ಬರಿಗೂ ತೊಂದರೆಯಾಗಲಿದೆ. ರಾಜ್ಯ ಸರ್ಕಾರ 200 ಯುನಿಟ್ ಉಚಿತ ವಿದ್ಯುತ್ ಕೊಟ್ಟರೆ, ಕೇಂದ್ರ ಸರ್ಕಾರ ಖಾಸಗಿಕರಣ ಮಾಡಿ ಮರಣ ಶಾಸನವನ್ನು ರಚಿಸಲು ಹೊರಟಿದೆ ಇದನ್ನು ಯಾವುದೇ ಕಾರಣಕ್ಕೂ ನಾವು ಬಿಡುವುದಿಲ್ಲ ಮುಂದಿನ ದಿನಗಳಲ್ಲಿ ಲೋಕಸಭೆಯಲ್ಲಿ ಇದು ಮಂಡನೆ ಆದರೆ ನಾವು ಉಗ್ರ ಹೋರಾಟ ಮಾಡುವುದಾಗಿ’ ಎಚ್ಚರಿಕೆ ನೀಡಿದರು.ಜೊತೆಗೆ ರೈತ ದೇಶದ ಬೆನ್ನೆಲುಬಾಗಿದ್ದು, ಅವರ ಅನ್ನಕ್ಕೆ ಕುತ್ತು ತರುವ ಬಿಲ್ ಮಂಡನೆಯಾಗಬಾರದು. ಅದನ್ನು ಕೂಡಲೇ ವಾಪಸ್ ಪಡೆದುಕೊಳ್ಳಬೇಕು ಎಂದು ಆಗ್ರಹಿಸಿದರು.ವಿದ್ಯುತ್ ಇಲಾಖೆಯು ಹಲವಾರು ನೌಕರರ ಬಲಿದಾನದಿಂದ ನಿರ್ಮಿಸಲಾಗಿರುವ ಬೃಹತ್ ಸಂಸ್ಥೆಯಾಗಿದ್ದು, ಇದನ್ನು ಖಾಸಗಿಗೆ ಕೊಡುವ ಕೇಂದ್ರದ ವಿರುದ್ಧ ಶಾಂತಿಯುತ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಕೂಡಲೇ ಬಿಲ್ ವಾಪಸ್ ಪಡೆದುಕೊಳ್ಳಬೇಕು ಎಂದು ಪ್ರಸಾದ್ ಒತ್ತಾಯಿಸಿದರು.ಪ್ರತಿಭಟನೆಯಲ್ಲಿ ಕೆಪಿಟಿಸಿಎಲ್ ನೌಕರರ ಸಂಘದ ಕಾರ್ಯದರ್ಶಿ ಮಹದೇವಸ್ವಾಮಿ, ಪದಾಧಿಕಾರಿಗಳಾದ ಮೊಹಮ್ಮದ್ ರಿಯಾಜ್, ಮಣಿಕಂಠ, ಮನೋಜ್ ಕುಮಾರ್, ನಾಗೇಂದ್ರ, ಕವಿರಾಜು, ರಘುನಂದನ್ ಸದಸ್ಯರಾದ ಅರ್ಜುನ್, ವೆಂಕಟೇಶ್ ಮೂರ್ತಿ, ನವೀನ್, ಮಂಜೇಶ್, ಶಾದಬ್, ಕಿರಿಯ ಅಭಿಯಂತರ ಮಹೇಶ್, ವೆಂಕಟೇಶ್ ಸೇರಿದಂತೆ ಹನೂರು ವಿಭಾಗದ ಎಲ್ಲಾ ನೌಕರರು ಪಾಲ್ಗೊಂಡಿದ್ದರು.---12ಸಿಎಚ್ಎನ್1312ಜಿಪಿಟಿ3
ಗುಂಡ್ಲುಪೇಟೆ ಸೆಸ್ಕಾಂ ಕಚೇರಿ ಮುಂದೆ ಕರ್ನಾಟಕ ವಿದ್ಯುತ್ ಪ್ರಸರಣಾ ನೌಕರರ ಸಂಘ ಹಾಗೂ ಒಕ್ಕೂಟದ ಸದಸ್ಯರು ಪ್ರತಿಭಟನೆ ನಡೆಸಿದರು.--------------12ಜಿಪಿಟಿ4ಗುಂಡ್ಲುಪೇಟೆ ತಾಲೂಕಿನ ಬೇಗೂರು ಸೆಸ್ಕಾಂ ಕಚೇರಿ ಮುಂದೆ ಕರ್ನಾಟಕ ವಿದ್ಯುತ್ ಪ್ರಸರಣಾ ನೌಕರರ ಸಂಘ ಹಾಗೂ ಒಕ್ಕೂಟದ ಸದಸ್ಯರು ಪ್ರತಿಭಟನೆ ನಡೆಸಿದರು.----------------
12ಕೆಜಿಎಲ್ 14---12ಸಿಎಚ್ಎನ್12