ಬೆಂಗಳೂರು : ಕೆ.ಆರ್‌.ಮಾರ್ಕೆಟ್‌ ಫುಟ್ಪಾತ್‌ ಒತ್ತುವರಿ ಪಾಲಿಕೆಗೆ ಹೈಕೋರ್ಟ್‌ ನೋಟಿಸ್‌

| Published : Nov 22 2024, 01:18 AM IST / Updated: Nov 22 2024, 12:42 PM IST

ಬೆಂಗಳೂರು : ಕೆ.ಆರ್‌.ಮಾರ್ಕೆಟ್‌ ಫುಟ್ಪಾತ್‌ ಒತ್ತುವರಿ ಪಾಲಿಕೆಗೆ ಹೈಕೋರ್ಟ್‌ ನೋಟಿಸ್‌
Share this Article
  • FB
  • TW
  • Linkdin
  • Email

ಸಾರಾಂಶ

ನಗರದ ಕೆ.ಆರ್. ಮಾರುಕಟ್ಟೆಯಲ್ಲಿರುವ ಪಾದಚಾರಿ ಮಾರ್ಗ ಹಾಗೂ ಅಗ್ನಿ ಸುರಕ್ಷತಾ ನಿರ್ಗಮನ ಪ್ರದೇಶದಲ್ಲಿ ಅನಧಿಕೃತವಾಗಿ ನಿರ್ಮಿಸುತ್ತಿರುವ ಮಳಿಗೆಗಳನ್ನು ತೆರವುಗೊಳಿಸಲು ಆದೇಶಿಸಬೇಕು ಎಂದು ಕೋರಿ ಸಲ್ಲಿಸಿರುವ ಅರ್ಜಿ ಸಂಬಂಧ ಸರ್ಕಾರ ಹಾಗೂ ಬಿಬಿಎಂಪಿಗೆ ಹೈಕೋರ್ಟ್‌ ನೋಟಿಸ್‌ ಜಾರಿಗೊಳಿಸಿದೆ.

 ಬೆಂಗಳೂರು :  ನಗರದ ಕೆ.ಆರ್. ಮಾರುಕಟ್ಟೆಯಲ್ಲಿರುವ ಪಾದಚಾರಿ ಮಾರ್ಗ ಹಾಗೂ ಅಗ್ನಿ ಸುರಕ್ಷತಾ ನಿರ್ಗಮನ ಪ್ರದೇಶದಲ್ಲಿ ಅನಧಿಕೃತವಾಗಿ ನಿರ್ಮಿಸುತ್ತಿರುವ ಮಳಿಗೆಗಳನ್ನು ತೆರವುಗೊಳಿಸಲು ಆದೇಶಿಸಬೇಕು ಎಂದು ಕೋರಿ ಸಲ್ಲಿಸಿರುವ ಅರ್ಜಿ ಸಂಬಂಧ ಸರ್ಕಾರ ಹಾಗೂ ಬಿಬಿಎಂಪಿಗೆ ಹೈಕೋರ್ಟ್‌ ನೋಟಿಸ್‌ ಜಾರಿಗೊಳಿಸಿದೆ.

ಈ ಕುರಿತಂತೆ ಆಲ್‌ ಟ್ರೇಡರ್ಸ್‌ ಫಾರ್ಮರ್ಸ್‌ ಮರ್ಚೆಂಟ್‌ ವೆಲ್‌ಫೇರ್‌ ಅಸೋಸಿಯೇಷನ್‌ ಸಲ್ಲಿಸಿದ್ದ ಅರ್ಜಿ, ನ್ಯಾಯಮೂರ್ತಿ ಬಿ.ಎಂ. ಶ್ಯಾಮ್‌ ಪ್ರಸಾದ್ ಅವರ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು

ಕೆಲ ಕಾಲ ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ನ್ಯಾಯಪೀಠ, ರಾಜ್ಯ ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಡಿಜಿಪಿ, ಬಿಬಿಎಂಪಿ ಮುಖ್ಯ ಆಯುಕ್ತರು, ಉಪ ಆಯುಕ್ತರು (ಮಾರುಕಟ್ಟೆ) ಜಂಟಿ ಆಯುಕ್ತರು, ಪೊಲೀಸ್‌ ಆಯುಕ್ತರು ಸೇರಿ ಮತ್ತಿತರ ಪ್ರತಿವಾದಿಗಳಿಗೆ ನೋಟಿಸ್‌ ಜಾರಿ ಮಾಡಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ಕೆ.ಆರ್‌. ಮಾರುಕಟ್ಟೆಯ ಪಾದಚಾರಿ ಮಾರ್ಗ, ಸಾರ್ವಜನಿಕ ಪ್ರದೇಶ ಮತ್ತು ಅಗ್ನಿ ಸುರಕ್ಷತಾ ನಿರ್ಗಮನ ಪ್ರದೇಶದಲ್ಲಿ ಕೆಲವರು ಒತ್ತುವರಿ ಮಾಡಿ ಮಳಿಗೆಗಳನ್ನು ನಿರ್ಮಾಣ ಮಾಡುತ್ತಿದ್ದಾರೆ. ಇದರಿಂದ ಸಾರ್ವಜನಿಕರಿಗೆ ಮತ್ತು ಮಾರುಕಟ್ಟೆಯ ವ್ಯಾಪಾರಿಗಳಿಗೆ ತೀವ್ರ ತೊದರೆಯಾಗುತ್ತಿದೆ. ಈ ಒತ್ತುವರಿ ತೆರವುಗೊಳಿಸಲು ಕೋರಿ ಅರ್ಜಿದಾರರು ಬಿಬಿಎಂಪಿ ಮತ್ತು ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದ್ದರೂ, ಈವರೆಗೂ ಒತ್ತುವರಿಯನ್ನು ತೆರವುಗೊಳಿಸಿಲ್ಲ. ಆದ್ದರಿಂದ ಅರ್ಜಿದಾರರ ಮನವಿ ಪತ್ರ ಪರಿಗಣಿಸಲು ಬಿಬಿಎಂಪಿ ಮತ್ತು ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿದರು.