ಉಡುಪಿ: ಕೊಂಕಣ ರೈಲ್ವೆ ಕಾರ್ಪೋರೇಶನ್ ಲಿಮಿಟೆಡ್ (ಕೆಆರ್‌ಸಿಎಲ್) ಸಂಸ್ಥೆಯು ತನ್ನ ಸಾಂಸ್ತಿಕ ಸಾಮಾಜಿಕ ಜವಾಬ್ದಾರಿ (ಸಿಎಸ್ಆರ್) ನಿಧಿಯಡಿಯಲ್ಲಿ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಗೆ ಬೊಲೆರೋ ಜೀಪ್ ವಾಹನವೊಂದನ್ನು ಕೊಡುಗೆಯಾಗಿ ನೀಡಿದೆ.

ಶುಕ್ರವಾರ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಯಲ್ಲಿ ಈ ವಾಹನವನ್ನು ಕೆಆರ್‌ಸಿಎಲ್‌ ನ ಕಾರವಾರದ ಪ್ರಾದೇಶಿಕ ರೈಲ್ವೆ ಪ್ರಬಂಧಕಿ ಆಶಾ ಶೆಟ್ಟಿ ಅವರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಉಪಸ್ಥಿತಿಯಲ್ಲಿ ಅಧಿಕೃತವಾಗಿ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಹರಿರಾಮ್ ಶಂಕರ್ ಅವರಿಗೆ ಹಸ್ತಾಂತರಿಸಿದರು.