ರೈತರಿಗೆ ಶಕ್ತಿ ತುಂಬು ವೇದಿಕೆ ಕೃಷಿ ಉತ್ಸವ: ಕಿಶೋರ್‌ ಕುಮಾರ್‌

| Published : Nov 15 2025, 02:45 AM IST

ಸಾರಾಂಶ

ಉಳ್ಳಾಲ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದೊಂದಿಗೆ ವಿವಿಧ ಸಂಘಟನೆಗಳ ಸಹಕಾರದಲ್ಲಿ ಉಳ್ಳಾಲ ಕೃಷಿ ಉತ್ಸವ-ಆಹಾರ ಮೇಳ ಸಂಪನ್ನಗೊಂಡಿತು.

ಉಳ್ಳಾಲ: ಕೃಷಿ ಉತ್ಸವ, ಆಹಾರ ಮೇಳ ರೈತರಿಗೆ ಶಕ್ತಿ ತುಂಬುವ ವೇದಿಕೆಯಾಗಿದೆ. ಕೃಷಿ ಉತ್ಸವ ಮತ್ತು ಆಹಾರ ಮೇಳ ರೈತರ ಆತ್ಮವಿಶ್ವಾಸ ಹೆಚ್ಚಿಸುತ್ತವೆ ಎಂದು ವಿಧಾನಪರಿಷತ್ ಸದಸ್ಯ ಕಿಶೋರ್ ಕುಮಾ‌ರ್ ಬೊಟ್ಯಾಡಿ ಅಭಿಪ್ರಾಯಪಟ್ಟಿದ್ದಾರೆ.ರೈತಕುಡ್ಲ ಪ್ರತಿಷ್ಠಾನ ಮಂಗಳೂರು, ಕರ್ನಾಟಕ ಗೇರು ಅಭಿವೃದ್ದಿ ನಿಗಮ ಮಂಗಳೂರು, ಕೃಷಿ ಇಲಾಖೆ ಮಂಗಳೂರು, ಪೊಲದವರ ಯಾನೆ ಗಟ್ಟಿಯವರ ಸಮಾಜ ಸೇವಾ ಸಂಘ ಹಾಗೂ ಉಳ್ಳಾಲ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದೊಂದಿಗೆ ಆಯೋಜನೆಗೊಂಡ ಉಳ್ಳಾಲ ಕೃಷಿ ಉತ್ಸವ-ಆಹಾರ ಮೇಳಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಡಿ.ಎಸ್ ಗಟ್ಟಿ ಮಾತನಾಡಿ, ಜಿಲ್ಲಾಮಟ್ಟದಲ್ಲಿಯೂ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಿ, ರೈತರಲ್ಲಿ ಉತ್ಸಾಹ ಮತ್ತು ಉಲ್ಲಾಸವನ್ನು ತುಂಬುವ ನಡೆಯಲಿ ಎಂದರು. ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಮಾತನಾಡಿದರು. ಪೆರ್ಮನ್ನೂರು ಸಂತ ಸೆಬಾಸ್ತಿಯನ್ನರ ಚರ್ಚಿನ ಧರ್ಮಗುರು ಫಾ. ಸಿಪ್ರಿಯನ್ ಪಿಂಟೋ, ಪೊಲದವರ ಯಾನೆ ಗಟ್ಟಿಯವರ ಸೇವಾ ಸಮಾಜದ ಉಪಾಧ್ಯಕ್ಷ ಚಂದ್ರಶೇಖರ ಗಟ್ಟಿ ಗುಂಡ್ಯ, ಬಿಜೆಪಿ ಮಂಡಲ ಅಧ್ಯಕ್ಷ ಜಗದೀಶ ಆಳ್ವ ಕುವೆತ್ತಬೈಲ್, ಜಿಲ್ಲಾ ಉಪಾಧ್ಯಕ್ಷ ರವೀಂದ್ರ ಶೆಟ್ಟಿ ಉಳಿದೊಟ್ಟು ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್‌ ನಾಯಕ್ ಇಂದಾಜೆ ಇದ್ದರು.

ಪ್ರಗತಿ ಪರ ಕೃಷಿಕ ನಾರಾಯಣ ರೈ ಕೊಂಡಾಣ ಅವರನ್ನು ಸಮ್ಮಾನಿಸಲಾಯಿತು. ಅಖಿಲಾ ಅಗರಿ ನಿರೂಪಿಸಿದರು. ರೈತ ಕುಡ್ಲ ಪ್ರತಿಷ್ಠಾನದ ಅಧ್ಯಕ್ಷ ಭರತ್ ರಾಜ್ ಸ್ವಾಗತಿಸಿದರು. ಸುಮಲತಾ ಕೊಣಾಜೆ ಸೊರಕೆ ವಂದಿಸಿದರು.