ಸಾರಾಂಶ
ಜಮಖಂಡಿ ತಾಲೂಕಿನ ಹಿಪ್ಪರಗಿ ಗ್ರಾಮದ ಸಂಗಮೇಶ್ವರ ಮಹಾರಾಜರ ಪುಣ್ಯಸ್ಥಳದಲ್ಲಿ ಅ.16ರಂದು ಕೃಷ್ಣಾ ಪುಣ್ಯಸ್ನಾನ, ಕೃಷ್ಣಾ ಆರತಿ ಪ್ರಯುಕ್ತ ವಿವಿಧ ಸಾಂಸ್ಕೃತಿಕ ಧಾರ್ಮಿಕ ಕಾರ್ಯಕ್ರಮ ನಡೆಯಲಿವೆ.
ಕನ್ನಡಪ್ರಭ ವಾರ್ತೆ ಜಮಖಂಡಿ
ತಾಲೂಕಿನ ಹಿಪ್ಪರಗಿ ಗ್ರಾಮದ ಸಂಗಮೇಶ್ವರ ಮಹಾರಾಜರ ಪುಣ್ಯಸ್ಥಳದಲ್ಲಿ ಅ.16ರಂದು ಕೃಷ್ಣಾ ಪುಣ್ಯಸ್ನಾನ, ಕೃಷ್ಣಾ ಆರತಿ ಪ್ರಯುಕ್ತ ವಿವಿಧ ಸಾಂಸ್ಕೃತಿಕ ಧಾರ್ಮಿಕ ಕಾರ್ಯಕ್ರಮ ನಡೆಯಲಿವೆ. ಮಾಜಿ ಸಚಿವ ಮುರುಗೇಶ ನಿರಾಣಿ ಅವರ ಹುಟ್ಟು ಹಬ್ಬದ ಪ್ರಯುಕ್ತ ಬೆಳಗ್ಗೆ 8 ಗಂಟೆಗೆ ದೇವಸ್ಥಾನಗಳಲ್ಲಿ ವಿಶೇಷ ಪೂಜಾದಿ ಕಾರ್ಯಕ್ರಮ ನಡೆಯಲಿವೆ. 11 ಗಂಟೆಯಿಂದ ಕುಂಭಮೇಳ ಕೃಷ್ಣಾ ಪುಣ್ಯಸ್ನಾನ, ನಾಗಾಸಾಧುಗಳ ಗ್ರಾಮ ಪ್ರವೇಶ, ವಿವಿಧ ವಾದ್ಯಗಳೊಂದಿಗೆ 200ಕ್ಕೂ ಅಧಿಕ ಪಲ್ಲಕ್ಕಿಗಳ ಸ್ವಾಗತ, ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ 1.30 ರಿಂದ ಮಹಾ ಪ್ರಸಾದ, 4 ಗಂಟೆಗೆ ಮಾಜಿ ಸಚಿವ ಮುರುಗೇಶ ನಿರಾಣಿ ಅವರ ಹುಟ್ಟುಹಬ್ಬ ಕಾರ್ಯಕ್ರಮ, ಗಣ್ಯರಿಂದ ಶುಭ ಹಾರೈಕೆ, ಸಂಜೆ 6 ರಿಂದ 8 ಗಂಟೆಯವರೆಗೆ ಕಾಶಿಯ ಗಂಗಾ ಆರತಿಯ ಪಂಡಿತರ 11 ತಂಡಗಳಿಂದ ಕೃಷ್ಣಾ ಆರತಿ ನಡೆಯಲಿದೆ.ಸಾಂಸ್ಕೃತಿಕ ಕಾರ್ಯಕ್ರಮ; ರಾತ್ರಿ 8 ಗಂಟೆಯಿಂದ ನಾಡಿನ ಪ್ರಸಿದ್ಧ ಕಲಾವಿದರ ತಂಡಗಳಿಂದ ಭರತನಾಟ್ಯ, ನೃತ್ಯ, ಸಂಗೀತ, ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿವೆ. ಜನದಟ್ಟಣೆ ನಿಯಂತ್ರಿಸಲು 5 ಕಡೆಗಳಲ್ಲಿ 10 ಅಡಿ ಡಿಜಿಟಲ್ ಸ್ಕ್ರೀನ್ ಅಳವಡಿಸಲಾಗಿದ್ದು, ದೂರದಲ್ಲಿ ನಿಂತುಕೊಂಡೇ ಕಾರ್ಯಕ್ರಮ ವೀಕ್ಷಿಸಬಹುದಾಗಿದೆ. ಕಾರ್ಯಕ್ರಮದ ಸ್ಥಳವನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿದೆ. ಜನರ ಹಾಗೂ ವಾಹನ ಸಂಚಾರಕ್ಕೆ ಸೂಕ್ತವಾದ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ಬೆಳಗಿನಿಂಲೇ ಕಾರ್ಯಕ್ರಮ ಪ್ರಾರಂಭವಾಗಲಿದೆ ಎಂದು ವ್ಯವಸ್ಥಾಪಕರು ಮಾಹಿತಿ ನೀಡಿದ್ದಾರೆ.