ಸಾರಾಂಶ
ನದಿಯಲ್ಲಿ ಬಿದ್ದ ಮಣ್ಣನ್ನು ತೆರವುಗೊಳಿಸಲು ಟೆಂಡರ್ ಕರೆದರೂ ಸಹ ಯಾರು ಟೆಂಡರ್ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುತ್ತಿಲ್ಲ
ಅಂಕೋಲಾ: ತಾಲೂಕಿನ ಶಿರೂರು ಗುಡ್ಡ ಕುಸಿತ ಪ್ರದೇಶಕ್ಕೆ ಕಂದಾಯ ಸಚಿವ ಕೃಷ್ಣಭೈರೇಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ಕಾರವಾರ ಅಂಕೋಲಾ ಕ್ಷೇತ್ರದ ಶಾಸಕ ಸತೀಶ್ ಸೈಲ್ ಮಾಹಿತಿ ನೀಡಿ, ಇಲ್ಲಿಯ ಮಣ್ಣು ತೆರವು ಮಾಡಲು ನಾಲ್ಕುವರೆ ಕೋಟಿ ಅನುದಾನ ಬೇಕಾಗಿದ್ದು, ಈಗಾಗಲೇ ಎರಡುವರೆ ಕೋಟಿ ಅನುದಾನ ದೊರೆತಿದ್ದು ಮಳೆಗಾಲ ಆರಂಭವಾಗಿರುವುದರಿಂದ ನದಿಯಲ್ಲಿನ ಮಣ್ಣು ತರುವ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದರು.ಜಿಲ್ಲಾಧಿಕಾರಿ ಲಕ್ಷ್ಮಿಪ್ರೀಯಾ ಮಾತನಾಡಿ, ನದಿಯಲ್ಲಿ ಬಿದ್ದ ಮಣ್ಣನ್ನು ತೆರವುಗೊಳಿಸಲು ಟೆಂಡರ್ ಕರೆದರೂ ಸಹ ಯಾರು ಟೆಂಡರ್ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುತ್ತಿಲ್ಲ ಎಂದರು.
ಕಂದಾಯ ಸಚಿವ ಕೃಷ್ಣಭೈರೇಗೌಡ ಮಾತನಾಡಿ, ಆದಷ್ಟು ಶೀಘ್ರ ಇಲ್ಲಿನ ಮಣ್ಣು ತೆರವು ಕಾರ್ಯಾಚರಣೆ ನಡೆಸಿ ಮೇಲ್ಭಾಗದ ನಾಗರಿಕರಿಗೆ ಅನುಕೂಲ ಕಲ್ಪಿಸಿಕೊಡಿ ಎಂದು ಸೂಚಿಸಿದರು.ಉಸ್ತುವಾರಿ ಸಚಿವ ಮಂಕಾಳ ವೈದ್ಯ, ಶಾಸಕ ಭೀಮಣ್ಣ ನಾಯ್ಕ, ಡಿಸಿಸಿ ಜಿಲ್ಲಾಧ್ಯಕ್ಷ ಸಾಯಿ ಗಾಂವ್ಕಾರ್, ಮಾಜಿ ಶಾಸಕ ಕೆ.ಎಚ್.ಗೌಡ, ತಹಸೀಲ್ದಾರ್ ಡಾ. ಚಿಕ್ಕಪ್ಪ ನಾಯಕ, ವಾಸರ ಕುದ್ರಿಗೆ ಗ್ರಾಪಂ ಅಧ್ಯಕ್ಷ ಪ್ರದೀಪ್ ನಾಯಕ್ ಸೇರಿದಂತೆ ವಿವಿಧ ಅಧಿಕಾರಿಗಳು ಜನಪ್ರತಿನಿಧಿಗಳು ಮತ್ತು ಸಾರ್ವಜನಿಕರು ಹೆದ್ದಾರಿ ಪ್ರಾಧಿಕಾರದ ಎಂಜಿನಿಯರ್‌ಗಳು ಉಪಸ್ಥಿತರಿದ್ದರು.