ಜೆಡಿಎಸ್‌ ಕೋರ್‌ಕಮಿಟಿಗೆ ಕೃಷ್ಣಾರೆಡ್ಡಿ ಅಧ್ಯಕ್ಷ

| Published : Nov 11 2025, 02:00 AM IST

ಸಾರಾಂಶ

ರಾಜ್ಯದಲ್ಲಿ ಜೆಡಿಎಸ್‌ ಪಕ್ಷ ಸಂಘಟನೆ ಮತ್ತು ಬಲವರ್ಧನೆಗೆ ಒತ್ತು ನೀಡುವ ನಿಟ್ಟಿನಲ್ಲಿ ಪಕ್ಷದ ಕೋರ್‌ ಕಮಿಟಿ ಪುನಾರಚಿಸಿದ್ದು, ಪಕ್ಷದ ಚಟುವಟಿಕೆಗಳಿಂದ ಅಂತರ ಕಾಯ್ದುಕೊಂಡಿರುವ ಹಿರಿಯ ಶಾಸಕ ಜಿ.ಟಿ.ದೇವೇಗೌಡರನ್ನು ಕೈಬಿಟ್ಟು ಮಾಜಿ ಶಾಸಕ ಎಂ.ಕೃಷ್ಣಾರೆಡ್ಡಿ ಅವರನ್ನು ಕೋರ್‌ ಕಮಿಟಿಯ ನೂತನ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ರಾಜ್ಯದಲ್ಲಿ ಜೆಡಿಎಸ್‌ ಪಕ್ಷ ಸಂಘಟನೆ ಮತ್ತು ಬಲವರ್ಧನೆಗೆ ಒತ್ತು ನೀಡುವ ನಿಟ್ಟಿನಲ್ಲಿ ಪಕ್ಷದ ಕೋರ್‌ ಕಮಿಟಿ ಪುನಾರಚಿಸಿದ್ದು, ಪಕ್ಷದ ಚಟುವಟಿಕೆಗಳಿಂದ ಅಂತರ ಕಾಯ್ದುಕೊಂಡಿರುವ ಹಿರಿಯ ಶಾಸಕ ಜಿ.ಟಿ.ದೇವೇಗೌಡರನ್ನು ಕೈಬಿಟ್ಟು ಮಾಜಿ ಶಾಸಕ ಎಂ.ಕೃಷ್ಣಾರೆಡ್ಡಿ ಅವರನ್ನು ಕೋರ್‌ ಕಮಿಟಿಯ ನೂತನ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.

ಶಾಸಕ ಎ.ಮಂಜು ಅವರನ್ನು ಈ ಕೋರ್‌ ಕಮಿಟಿ ಸಂಚಾಲಕರಾಗಿ ನಿಯೋಜಿಸಲಾಗಿದೆ. ಅಲ್ಲದೆ, ಪಕ್ಷದ ವಿವಿಧ ಸಮಿತಿಗಳಿಗೂ ಪದಾಧಿಕಾರಿಗಳ ನೇಮಕ ಮಾಡಲಾಗಿದೆ.

ಉಳಿದಂತೆ, ಮಾಜಿ ಶಾಸಕ ರಾಜಾವೆಂಕಟಪ್ಪ ನಾಯಕ ದೊರೆ, ಶಾಸಕ ಎಚ್‌.ಡಿ.ರೇವಣ್ಣ, ಸಂಸದ ಎಂ.ಮಲ್ಲೇಶ್‌ ಬಾಬು, ಮಾಜಿ ಸಚಿವರಾದ ಡಿ.ಸಿ.ತಮ್ಮಣ್ಣ, ಹನುಮಂತಪ್ಪ ಅಲ್ಕೋಡ್‌, ಎಚ್‌.ಕೆ.ಕುಮಾರಸ್ವಾಮಿ, ಸಿ.ಎಸ್‌.ಪುಟ್ಟರಾಜು, ಮಾಜಿ ಶಾಸಕರಾದ ಎಚ್‌.ಎಸ್.ಶಿವಶಂಕರ್‌, ಕೆ.ಎಂ.ತಿಮ್ಮರಾಯಪ್ಪ, ಎಂ.ಮಂಜುನಾಥ್‌, ದೊಡ್ಡಪ್ಪಗೌಡ ಎಸ್‌.ಪಾಟೀಲ್‌ ನರಿಬೋಳ್‌, ಕೆ.ಜಿ.ಪ್ರಸನ್ನಕುಮಾರ್‌, ಶಾಸಕರಾದ ಕರೆಮ್ಮ ಜಿ.ನಾಯಕ, ಕೆ.ನೇಮಿರಾಜ್‌ ನಾಯಕ್‌, ಸಮೃದ್ಧಿ ಮಂಜುನಾಥ, ಶರಣಗೌಡ ಕಂದಕೂರ, ವಿಧಾನ ಪರಿಷತ್‌ ಸದಸ್ಯ ಗೋವಿಂದರಾಜು ಮತ್ತು ಮುಖಂಡ ಸಿ.ವಿ.ಚಂದ್ರಶೇಖರ್ ಅವರನ್ನು ಕೋರ್‌ ಕಮಿಟಿ ಸದಸ್ಯರಾಗಿ ನೇಮಿಸಲಾಗಿದೆ.

ರಾಜಕೀಯ ವ್ಯವಹಾರಗಳ ಸಮಿತಿಗೆ ಎಚ್‌ಡಿಕೆ:

ಜೆಡಿಎಸ್‌ ಉನ್ನತ ಮಟ್ಟದ ರಾಜಕೀಯ ವ್ಯವಹಾರಗಳ ಸಮಿತಿ ಅಧ್ಯಕ್ಷರನ್ನಾಗಿ ಕೇಂದ್ರ ಸಚಿವ ಹಾಗೂ ಪಕ್ಷದ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಅವರನ್ನು ನೇಮಕ ಮಾಡಲಾಗಿದೆ. ಈ ಸಮಿತಿಯ ಸಂಚಾಲಕರಾಗಿ ಜೆಡಿಎಸ್‌ ಶಾಸಕಾಂಗ ಪಕ್ಷದ ಉಪ ನಾಯಕಿ ಶಾರದಾ ಪೂರ್ಯಾ ನಾಯಕ ಅವರನ್ನು ನೇಮಿಸಲಾಗಿದೆ.

ಮಾಜಿ ಸಚಿವರಾದ ಬಂಡೆಪ್ಪ ಕಾಶೆಂಪೂರ್‌, ಸಾ.ರಾ.ಮಹೇಶ್‌, ವೆಂಕಟರಾವ್‌ ನಾಡಗೌಡ, ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಸಿ.ಬಿ.ಸುರೇಶ್‌ ಬಾಬು, ಶಾಸಕರಾದ ಎಂ.ಟಿ. ಕೃಷ್ಣಪ್ಪ, ಎಸ್.ಎಲ್. ಬೋಜೇಗೌಡ, ಮಾಜಿ ಶಾಸಕ ಕೆ.ಎ. ತಿಪ್ಪೇಸ್ವಾಮಿ, ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಈ ಸಮಿತಿಯ ಸದಸ್ಯರಾಗಿದ್ದಾರೆ.

ಪ್ರಚಾರ ಸಮಿತಿಗೆ ವೈಎಸ್‌ವಿ ದತ್ತ ಅಧ್ಯಕ್ಷ:

ಜೆಡಿಎಸ್ ಪ್ರಚಾರ ಸಮಿತಿ ರಚಿಸಿದ್ದು, ಅಧ್ಯಕ್ಷರನ್ನಾಗಿ ಮಾಜಿ ಶಾಸಕ ವೈಎಸ್‌ವಿ ದತ್ತ ಅವರನ್ನು ನೇಮಕ ಮಾಡಲಾಗಿದೆ.

ಮಾಜಿ ಶಾಸಕರಾದ ಅಶ್ವಿನ್ ಕುಮಾರ್, ಸುರೇಶ್ ಗೌಡ, ಶಾಸಕ ಸಿ.ಎನ್. ಬಾಲಕೃಷ್ಣ, ವಿಧಾನ ಪರಿಷತ್ ಸದಸ್ಯರಾದ ಟಿ.ಎ.ಶರವಣ, ಟಿ.ಎನ್. ಜವರಾಯಿಗೌಡ, ಮಾಜಿ ಶಾಸಕರಾದ ಡಾ. ಕೆ.ಅನ್ನದಾನಿ, ರವೀಂದ್ರ ಶ್ರೀಕಂಠಯ್ಯ, ಶಾಸಕರಾದ ಭೀಮನಗೌಡ (ರಾಜುಗೌಡ) ಪಾಟೀಲ್, ಜಿ.ಡಿ.ಹರೀಶ್ ಗೌಡ, ಸ್ವರೂಪ್ ಪ್ರಕಾಶ್, ಎಂ.ಆರ್. ಮಂಜುನಾಥ್, ಕೆ. ವಿವೇಕಾನಂದ, ಸಿ.ಎನ್. ಮಂಜೇಗೌಡ, ಡಾ.ಸೂರಜ್ ರೇವಣ್ಣ, ಹಿರಿಯ ನಾಯಕ ಸುಧಾಕರ್ ಎಸ್.ಶೆಟ್ಟಿ ಅವರನ್ನು ಸದಸ್ಯರಾಗಿ ನೇಮಿಸಲಾಗಿದೆ.

ಶಿಸ್ತು ಪಾಲನಾ ಸಮಿತಿಗೆ ಡಿ.ನಾಗರಾಜಯ್ಯ ಅಧ್ಯಕ್ಷ:

ಮಾಜಿ ಸಚಿವ ಡಿ. ನಾಗರಾಜಯ್ಯ ಅವರನ್ನು ಜೆಡಿಎಸ್ ಶಿಸ್ತುಪಾಲನಾ ಸಮಿತಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಮಾಜಿ ಸಂಸದ ಕುಪೇಂದ್ರರೆಡ್ಡಿ, ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ, ಮಾಜಿ ಶಾಸಕರಾದ ಕೆ.ಎಸ್.ಲಿಂಗೇಶ್, ಕೆ. ಮಹದೇವ, ಆರ್. ಚೌಡರೆಡ್ಡಿ, ಪಿ.ಆರ್ ಸುಧಾಕರ್ ಲಾಲ್, ಎಲ್.ಎನ್.ನಿಸರ್ಗ ನಾರಾಯಣಸ್ವಾಮಿ, ಡಾ. ಕೆ.ಶ್ರೀನಿವಾಸಮೂರ್ತಿ, ಶಾಸಕ ಹೆಚ್.ಟಿ. ಮಂಜುನಾಥ್ ಈ ಸಮಿತಿಯ ಸದಸ್ಯರಾಗಿದ್ದಾರೆ.