ಕನ್ನಡಪ್ರಭ ವಾರ್ತೆ ರಬಕವಿ-ಬನಹಟ್ಟಿತೇರದಾಳ ಮತಕ್ಷೇತ್ರದ ಬಿಜೆಪಿ ಪಕ್ಷದಿಂದ ಪ್ರಧಾನಿ ಮೋದಿ ಜನ್ಮದಿನಾಚರಣೆ ಪ್ರಯುಕ್ತ ಸೇವಾ ಸಂಕಲ್ಪ ಅಭಿಯಾನದ ಅಂಗವಾಗಿ ಭಾನುವಾರ ಮುಂಜಾನೆ ರಬಕವಿ-ಬನಹಟ್ಟಿ ಸಮೀಪದ ಕೃಷ್ಣಾ ನದಿ ತಟದಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಕನ್ನಡಪ್ರಭ ವಾರ್ತೆ ರಬಕವಿ-ಬನಹಟ್ಟಿ

ತೇರದಾಳ ಮತಕ್ಷೇತ್ರದ ಬಿಜೆಪಿ ಪಕ್ಷದಿಂದ ಪ್ರಧಾನಿ ಮೋದಿ ಜನ್ಮದಿನಾಚರಣೆ ಪ್ರಯುಕ್ತ ಸೇವಾ ಸಂಕಲ್ಪ ಅಭಿಯಾನದ ಅಂಗವಾಗಿ ಭಾನುವಾರ ಮುಂಜಾನೆ ರಬಕವಿ-ಬನಹಟ್ಟಿ ಸಮೀಪದ ಕೃಷ್ಣಾ ನದಿ ತಟದಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ಶಾಸಕ ಸಿದ್ದು ಸವದಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರು ದೇಶ ಕಂಡ ಶ್ರೇಷ್ಠ ಪ್ರಧಾನಿಗಳಲ್ಲಿ ಒಬ್ಬರು. ಅವರ ಜನ್ಮದಿನದ ಅಂಗವಾಗಿ ವಿವಿಧ ಸೇವಾ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದ್ದು, ಅದರ ಭಾಗವಾಗಿ ಕೃಷ್ಣಾ ನದಿ ತಟವನ್ನು ಸ್ವಚ್ಛಗೊಳಿಸುವ ಕಾರ್ಯ ಕೈಗೊಳ್ಳಲಾಗಿದೆ ಎಂದರು.

ಸಾರ್ವಜನಿಕರು ಕೂಡ ನದಿ, ಜಲಮೂಲಗಳು ಹಾಗೂ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಡುವ ಮೂಲಕ ಸ್ವಚ್ಛತಾ ಅಭಿಯಾನಕ್ಕೆ ಸಹಕರಿಸಬೇಕು ಎಂದು ಮನವಿ ಮಾಡಿದರು.

ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡ ಮುಖಂಡರು ಮತ್ತು ಕಾರ್ಯಕರ್ತರು ನದಿ ತಟದಲ್ಲಿ ಬಿದ್ದಿದ್ದ ಕಸ, ಪ್ಲಾಸ್ಟಿಕ್ ತ್ಯಾಜ್ಯ ಹಾಗೂ ಇತರ ಅಶುಚಿತ್ವವನ್ನು ತೆರವುಗೊಳಿಸಿ ಪರಿಸರ ಸಂರಕ್ಷಣೆಯ ಸಂದೇಶ ಸಾರಿದರು.

ಶ್ರೀಶೈಲ ಬೀಳಗಿ, ಸುರೇಶ ಅಕ್ಕಿವಾಟ, ಧರೆಪ್ಪ ಉಳ್ಳಾಗಡ್ಡಿ, ಮಹಾದೇವ ಕೋಟ್ಯಾಳ, ಆನಂದ ಕಂಪು, ರವಿ ಕೊರ್ತಿ, ಅರುಣ ಬುದ್ನಿ, ರಾಜು ಕದಂ, ಪರಶುರಾಮ ಕಾಖಂಡಕಿ, ವಿಠ್ಠಲ ತಟ್ರಿ, ಶಂಕರ ಹುನ್ನೂರ, ಬಾಬಾಗೌಡ ಪಾಟೀಲ, ಪ್ರವೀಣ ದಬಾಡಿ, ಸದಾಶಿವ ಪರೀಟ, ಪಾಂಡು ಯರಕನ್ನವರ, ಪ್ರಭು ಪೂಜಾರಿ, ಶ್ರೀಶೈಲ ಮೂಲಿಮನಿ, ಮಾನಿಂಗ ಯಳಸಂಗ, ಬಾಲಚಂದ್ರ ನಂದೆಪ್ಪನವರ, ಶಿವಾನಂದ ದೇಸಾಯಿ, ಡಾ. ಎಸ್.ಎಸ್. ಹೂಲಿ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉತ್ಸಾಹದಿಂದ ಭಾಗವಹಿಸಿದ್ದರು.