ಸಾರಾಂಶ
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿದ್ದ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಕನಕಗಿರಿ ವಿಧಾನಸಭಾ ಕ್ಷೇತ್ರದಲ್ಲಿ ಪಾಂಚಜನ್ಯ ಮೊಳಗಿಸಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಪ್ರಮುಖ ಕಾರಣಿಭೂತರಾಗಿದ್ದರು.
ರಾಜ್ಯದಲ್ಲಿ ಕಾಂಗ್ರೆಸ್ಸನ್ನು ಅಧಿಕಾರಕ್ಕೆ ತರಲೇಬೇಕೆಂಬ ಹಠ ಹಿಡಿದಿದ್ದ ನಾಯಕರಾಮಮೂರ್ತಿ ನವಲಿ
ಕನ್ನಡಪ್ರಭ ವಾರ್ತೆ ಗಂಗಾವತಿಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿದ್ದ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಕನಕಗಿರಿ ವಿಧಾನಸಭಾ ಕ್ಷೇತ್ರದಲ್ಲಿ ಪಾಂಚಜನ್ಯ ಮೊಳಗಿಸಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಪ್ರಮುಖ ಕಾರಣಿಭೂತರಾಗಿದ್ದರು.
ರಾಜ್ಯದಲ್ಲಿ ಕಾಂಗ್ರೆಸ್ಸನ್ನು ಅಧಿಕಾರಕ್ಕೆ ತರಲೇಬೇಕೆಂಬ ಹಠ ಹಿಡಿದಿದ್ದ ಎಸ್.ಎಂ. ಕೃಷ್ಣ ತಾವು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಬಳಿಕ ತಮ್ಮ ನೇತೃತ್ವದಲ್ಲಿ ಪಾಂಚಜನ್ಯ ಎನ್ನುವ ಶಿರೋನಾಮೆಯಿಂದ ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳಿಗೆ ಸಂಚರಿಸಿ 132 ಸ್ಥಾನಗಳನ್ನು ಗೆಲ್ಲಿಸುವಲ್ಲಿ ಯಶಸ್ವಿಯಾಗಿದ್ದರು.ಕನಕಗಿರಿಯಲ್ಲಿ ಪಾಂಚಜನ್ಯ:
ಕನಕಗಿರಿ ರಾಜ್ಯದಲ್ಲಿ ತೀರಾ ಹಿಂದುಳಿದ ವಿಧಾನಸಭಾ ಕ್ಷೇತ್ರ. ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆದ್ದಿದ್ದ ಇತಿಹಾಸವೇ ಇರಲಿಲ್ಲ. ಈ ಕ್ಷೇತ್ರದ ಮೂರು ತಾಲೂಕುಗಳಿಗೆ ಅಂದರೆ ಸಿಂಧನೂರು, ಕುಷ್ಟಗಿ ಮತ್ತು ಗಂಗಾವತಿ ತಾಲೂಕುಗಳ ಕೆಲ ಗ್ರಾಮಗಳು ಕನಕಗಿರಿ ಕ್ಷೇತ್ರದ ವ್ಯಾಪ್ತಿಗೆ ಬರುತ್ತಿದ್ದವು. ಹೇಗಾದರೂ ಮಾಡಿ ತೀರಾ ಹಿಂದುಳಿದ ಕ್ಷೇತ್ರವನ್ನು ಕಾಂಗ್ರೆಸ್ ತೆಕ್ಕೆಗೆ ತೆಗೆದುಕೊಳ್ಳಬೇಕೆಂಬ ಕನಸು ಹೊಂದಿದ್ದ ಎಸ್.ಎಂ. ಕೃಷ್ಣ, ತಮ್ಮ ಪರಮ ಶಿಷ್ಯ ಮಲ್ಲಿಕಾರ್ಜುನ ನಾಗಪ್ಪ ಅವರಿಗೆ 1999ರಲ್ಲಿ ನಡೆದ ವಿಧಾನಸಭೆಗೆ ಟಿಕೆಟ್ ನೀಡಿ ಗೆಲ್ಲಿಸುವಲ್ಲಿ ಯಶಸ್ವಿಯಾಗಿದ್ದರು. ನಂತರ ತಮ್ಮ ನೇತೃತ್ವದ ಸರ್ಕಾರ ರಚನೆಯಾದಾಗ ಮಲ್ಲಿಕಾರ್ಜುನ ನಾಗಪ್ಪ ಅವರಿಗೆ ಕಂದಾಯ ಮತ್ತು ಪೌರಾಡಳಿತ ಸಚಿವ ಸ್ಥಾನ ನೀಡಿದರು.ಈ ಚುನಾವಣೆಯ ಪೂರ್ವದಲ್ಲಿ ತಾವರಗೇರಾದಲ್ಲಿ ಪಾಂಚಜನ್ಯ ಕಾರ್ಯಕ್ರಮ ನಡೆಸಿದ್ದು ಇವರ ಗೆಲುವಿಗೆ ಪೂರಕವಾಯಿತು.
ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಕೆಪಿಸಿಸಿ ಅಧ್ಯಕ್ಷರಾಗಿದ್ದ ಸಂದರ್ಭ ಪಾಂಚಜನ್ಯದ ಮೂಲಕ ರಾಜ್ಯದ ಎಲ್ಲಾ ಕ್ಷೇತ್ರಗಳಲ್ಲಿ ಪ್ರವಾಸ ಮಾಡಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಕಾರಣರಾಗಿದ್ದರು. ಕನಕಗಿರಿ ಕ್ಷೇತ್ರದ ಗೆಲುವಿಗೂ ಕಾರಣರಾಗಿದ್ದರು ಎಂದು ಮಾಜಿ ಸಚಿವ ಮಲ್ಲಿಕಾರ್ಜುನ ನಾಗಪ್ಪ ತಿಳಿಸಿದ್ದಾರೆ.