ವಿದ್ಯಾರ್ಥಿಗಳಲ್ಲಿನ ಪ್ರತಿಭೆ ಅನಾವರಣಗೊಳಿಸಲು ಕೃಷ್ಣಮೂರ್ತಿ ಸಲಹೆ

| Published : Feb 01 2025, 12:47 AM IST

ಸಾರಾಂಶ

ಗ್ರಾಮೀಣ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಅವರಲ್ಲಿರುವ ಕೌಶಲ್ಯ ಪ್ರತಿಭೆಗಳು ಅನಾವರಣಗೊಂಡಾಗ ಶೈಕ್ಷಣಿಕ, ಸಾಂಸ್ಕೃತಿಕ ಪರಂಪರೆ ಬೆಳೆಯುವ ಜೊತೆಗೆ ಕಲಿಕೆಯ ಆಸಕ್ತಿಯೂ ಹೆಚ್ಚಾಗುತ್ತದೆ.

ಕನ್ನಡಪ್ರಭ ವಾರ್ತೆ ದೇವಲಾಪುರ

ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಅವರಲ್ಲಿರುವ ಪ್ರತಿಭೆ ಅನಾವರಣಗೊಂಡಾಗ ಗುರಿ ಸಾಧನೆಗೆ ಸಹಕಾರಿಯಾಗಲಿದೆ ಎಂದು ಶ್ರೀ ರಾಮಾಂಜನೇಯ ಸಂಘದ ಅಧ್ಯಕ್ಷ ಕೃಷ್ಣಮೂರ್ತಿ ತಿಳಿಸಿದರು.

ಸಮೀಪದ ಹರದನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾ ಸಂಭ್ರಮ ಹಾಗೂ ವಾರ್ಷಿಕೋತ್ಸವವನ್ನು ಉದ್ಘಾಟಿಸಿ ಮಾತನಾಡಿ, ಗ್ರಾಮೀಣ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಅವರಲ್ಲಿರುವ ಕೌಶಲ್ಯ ಪ್ರತಿಭೆಗಳು ಅನಾವರಣಗೊಂಡಾಗ ಶೈಕ್ಷಣಿಕ, ಸಾಂಸ್ಕೃತಿಕ ಪರಂಪರೆ ಬೆಳೆಯುವ ಜೊತೆಗೆ ಕಲಿಕೆಯ ಆಸಕ್ತಿಯೂ ಹೆಚ್ಚಾಗುತ್ತದೆ ಎಂದರು.

ಈಗ ಯಾವುದೇ ಖಾಸಗಿ ಶಾಲೆಗಳನ್ನು ಮೀರಿಸುವ ಮಟ್ಟಿಗೆ ಬೆಳೆದಿರುವ ಸರ್ಕಾರಿ ಶಾಲೆಗಳಿಗೆ ಪೋಷಕರು ಹೆಚ್ಚಿನ ಆಸಕ್ತಿ ವಹಿಸುವ ಮೂಲಕ ಸರ್ಕಾರಿ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ಸಹಕಾರ ಅಗತ್ಯ ಎಂದು ತಿಳಿಸಿದರು.

ಸಮಾರಂಭದಲ್ಲಿ ಎಸ್ ಡಿಎಂಸಿ ಅಧ್ಯಕ್ಷ ನರಸಿಂಹಮೂರ್ತಿ ಅಧ್ಯಕ್ಷತೆ ವಹಿಸಿದ್ದರು. ಶ್ರೀ ರಾಮಾಂಜನೇಯ ಕಾರ್ಯದರ್ಶಿ ಶ್ರೀನಿವಾಸ್, ಖಜಾಂಚಿ ಶ್ರೀನಿವಾಸ್, ನಿರ್ದೇಶಕ ವೆಂಕಟೇಶ್, ಪತ್ರಕರ್ತರಾದ ದೇ. ರಾ.ಜಗದೀಶ್ ಭಾಗವಹಿಸಿದ್ದರು. ನಿವೃತ್ತ ಶಿಕ್ಷಕ ಕಲೀಮ್ ಉಲ್ಲಾ ಪ್ರಧಾನ ಭಾಷಣ ಮಾಡಿದರು. ಇದೇ ವೇಳೆ ಪೋಷಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಕ್ರೀಡಾ ಚಟುವಟಿಕೆ ಆಯೋಜನೆ ಮಾಡಿದ್ದು ವಿಜೇತರಿಗೆ ಬಹುಮಾನ ವಿತರಣೆ ಮಾಡಲಾಯಿತು.

ಕರ್ನಾಟಕ ಪಬ್ಲಿಕ್ ಸ್ಕೂಲ್ ಶಾಲೆ ಮುಖ್ಯ ಶಿಕ್ಷಕ ಶಿವಕುಮಾರ್ ಹಾಗೂ ಶಿಕ್ಷಕರಾದ ಗಿರೀಶ್, ನವೀನ್, ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಮುಖ್ಯ ಶಿಕ್ಷಕರಾದ ಜಯಸ್ವಾಮಿ, ಕೃಷ್ಣ, ಚೇತನ್, ಶಿಕ್ಷಕಿ ಭುವನೇಶ್ವರಿ, ಶಾಲಾ ಅಭಿವೃದ್ಧಿ ಸಮಿತಿ ಸದಸ್ಯರು, ಶಿಕ್ಷಕರು ಹಾಜರಿದ್ದರು. ಮುಖ್ಯ ಶಿಕ್ಷಕ ಚಿಕ್ಕಬೋರಯ್ಯ ಸ್ವಾಗತಿಸಿ ವಂದಿಸಿದರು.