ಬಸವೇಶ್ವರರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿರುವುದು ಹೆಮ್ಮೆ : ಶಾಸಕ ಡಿ. ರವಿಶಂಕರ್

| Published : Feb 18 2024, 01:35 AM IST

ಬಸವೇಶ್ವರರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿರುವುದು ಹೆಮ್ಮೆ : ಶಾಸಕ ಡಿ. ರವಿಶಂಕರ್
Share this Article
  • FB
  • TW
  • Linkdin
  • Email

ಸಾರಾಂಶ

ಈ ಹಿಂದೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗಳಾಗಿದ್ದಾಗ ಸರ್ಕಾರಿ ಕಚೇರಿಗಳಲ್ಲಿ ಕಡ್ಡಾಯವಾಗಿ ಬಸವಣ್ಣನವರ ಭಾವಚಿತ್ರ ಅಳವಡಿಸುವಂತೆ ಆದೇಶ ಹೊರಡಿಸಿದ್ದರು, ಈ ಮಹತ್ವದ ತೀರ್ಮಾನ ಕೈಗೊಂಡಿದ್ದಾರೆ

ಕನ್ನಡಪ್ರಭ ವಾರ್ತೆ ಕೆ.ಆರ್. ನಗರ

ಕಾಯಕ ಮತ್ತು ದಾಸೋಹ ತತ್ವವನ್ನು ವಿಶ್ವಕ್ಕೆ ಸಾರಿದ ಜಗಜ್ಯೋತಿ ಬಸವೇಶ್ವರರನ್ನು ಸಾಂಸ್ಕೃತಿಕ ನಾಯಕ ಎಂದು ರಾಜ್ಯ ಸರ್ಕಾರ ಘೋಷಣೆ ಮಾಡಿರುವುದು ಸರ್ವರೂ ಹೆಮ್ಮೆ ಪಡುವ ವಿಚಾರ ಎಂದು ಶಾಸಕ ಡಿ. ರವಿಶಂಕರ್ ಸಂತಸ ವ್ಯಕ್ತಪಡಿಸಿದರು.

ಪಟ್ಟಣದ ಆಡಳಿತ ಸೌಧದ ಕೃಷ್ಣರಾಜೇಂದ್ರ ಸಭಾಂಗಣದಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಜಗಜ್ಯೋತಿ ಬಸವೇಶ್ವರರ ಭಾವಚಿತ್ರ ಅನಾವರಣ ಮಾಡಿ ಅವರು ಮಾತನಾಡಿದರು.

ಈ ಹಿಂದೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗಳಾಗಿದ್ದಾಗ ಸರ್ಕಾರಿ ಕಚೇರಿಗಳಲ್ಲಿ ಕಡ್ಡಾಯವಾಗಿ ಬಸವಣ್ಣನವರ ಭಾವಚಿತ್ರ ಅಳವಡಿಸುವಂತೆ ಆದೇಶ ಹೊರಡಿಸಿದ್ದರು, ಈ ಮಹತ್ವದ ತೀರ್ಮಾನ ಕೈಗೊಂಡಿದ್ದಾರೆ ಎಂದರು.

ಮನುಷ್ಯನ ಬದುಕು ಸಮಾಜಕ್ಕೆ ಮಾದರಿಯಾಗ ಬೇಕು ಎಂಬುದಕ್ಕೆ ಬಸವಣ್ಣನವರು ಜ್ವಲಂತ ಉದಾಹರಣೆಯಾಗಿದ್ದು, ಸಂಪ್ರದಾಯದ ವಿರುದ್ದ ಹೋರಾಡಿ ಸಮಾನತೆಯ ಸಮಾಜ ನಿರ್ಮಾಣ ಮಾಡಲು ತಮ್ಮ ಜೀವನವನ್ನು ಮುಡುಪಾಗಿಟ್ಟ ಅಣ್ಣನವರು ಜಗ ಮತ್ತು ಯುಗದ ಪುರುಷ ಎಂದು ಬಣಿಸಿದರು.

ಕಲ್ಯಾಣ ಪುರ ಮಠದ ಚಿನ್ಮಯಿತಾಯಿ ಅವರ ಸಮ್ಮುಖದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಪಂ ಮಾಜಿ ಉಪಾಧ್ಯಕ್ಷ ಎ.ಎಸ್. ಚನ್ನಬಸಪ್ಪ, ಎಪಿಎಂಸಿ ಮಾಜಿ ನಿರ್ದೇಶಕ ಎಲ್.ಪಿ. ರವಿಕುಮಾರ್, ಗ್ರೇಡ್-2 ತಹಸೀಲ್ದಾರ್ ಬಾಲಸುಬ್ರಮಣ್ಯ ಮಾತನಾಡಿದರು.

ಅಖಿಲ ಭಾರತ ವೀರಶೈವ ಮಹಾಸಭಾ ತಾಲೂಕು ಘಟಕದ ಅಧ್ಯಕ್ಷ ಕೆಂಪರಾಜು, ಪ್ರಧಾನ ಕಾರ್ಯದರ್ಶಿ ಕೆ.ಎಸ್. ಮಹೇಶ್, ನಿವೃತ್ತ ನೌಕರರ ಸಂಘದ ಅಧ್ಯಕ್ಷ ಡಾ. ಸಣ್ಣಲಿಂಗಪ್ಪ, ಶಿಕ್ಷಕರ ಸಂಘದ ಅಧ್ಯಕ್ಷ ರಾಜಶೇಖರ್, ಪುರಸಭೆ ಮಾಜಿ ಅಧ್ಯಕ್ಷರಾದ ನರಸಿಂಹರಾಜು, ಸೈಯದ್ ಸಿದ್ದಿಕ್, ಮಾಜಿ ಸದಸ್ಯ ರಾಜ ಶ್ರೀಕಾಂತ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್. ಮಹದೇವ್, ನಗರಾಧ್ಯಕ್ಷ ಎಂ.ಜೆ. ರಮೇಶ್, ಟಿಎಪಿಸಿಎಂಎಸ್ ನಿರ್ದೇಶಕ ಎಚ್.ಪಿ. ಪ್ರಶಾಂತ್, ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷ್ಷೆ ದ್ರಾಕ್ಷಾಯಿಣಿ, ಮುಖಂಡರಾದ ಚೌಕಹಳ್ಳಿಶೇಖರ್, ಕೆ.ಎನ್. ಪ್ರಸನ್ನಕುಮಾರ್, ತಿಮ್ಮಶೆಟ್ಟಿ, ದಿಲೀಪ, ಯತಿರಾಜ್, ಉಮಾಶಂಕರ್, ನಟರಾಜು, ಬಿಇಒ ಆರ್. ಕೃಷ್ಣಪ್ಪ, ಎಇಇಗಳಾದ ವಿನುತ್, ರಾಜಾರಾಂ ವೈಲಾಯ, ಸಾಮಾಜಿಕ ವಲಯ ಅರಣ್ಯಾಧಿಕಾರಿ ಹರಿಪ್ರಸಾದ್, ಎಡಿಎಲ್ಆರ್ ಶ್ರೀಕಂಠಶರ್ಮ, ಶಿಕ್ಷಕರಾದ ಚಂದ್ರಶೇಖರ್, ಗಂಗಾಧರ್ ಇದ್ದರು.