ಸರ್ಕಾರಿ ನೌಕರರು ಆಸ್ತಿ ಘೋಷಣೆ ಮಾಡಿಕೊಳ್ಳಲು ಕೆಆರ್‌ಎಸ್‌ ಆಗ್ರಹ

| Published : Jan 19 2025, 02:17 AM IST

ಸಾರಾಂಶ

ಚಾಮರಾಜನಗರದಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಜಿಲ್ಲಾಧ್ಯಕ್ಷ ಕೆ.ಗಿರೀಶ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಚಾಮರಾಜನಗರ: ರಾಜ್ಯದ ಸರ್ಕಾರಿ ನೌಕರರು ತಮ್ಮ ಆಸ್ತಿಗಳನ್ನು ಘೋಷಣೆ ಮಾಡಿಕೊಳ್ಳಬೇಕು ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಜಿಲ್ಲಾಧ್ಯಕ್ಷ ಕೆ.ಗಿರೀಶ್ ಆಗ್ರಹಿಸಿದರು.

ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೌಕರರ ಆಸ್ತಿಗಳನ್ನು ಲೋಕಾಯುಕ್ತ ವರದಿ ಮಾಡಿಕೊಳ್ಳಬೇಕು, ಆಸ್ತಿ ಬಹಿರಂಗಪಡಿಸುವುದಲ್ಲದೇ ವೆಬ್‌ ಸೈಟ್‌ಗಳಲ್ಲೂ ಹಾಕಬೇಕು. ನ್ಯಾಯಾಂಗ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುವವರು ಕೂಡ ಆಸ್ತಿ ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದರು. ರಾಜ್ಯ ಸರ್ಕಾರದ ಇಲಾಖಾ ಅಧಿಕಾರಿಗಳು, ಅವರ ಅಧೀನದ ಅಧಿಕಾರಿಗಳು ಹಾಗೂ ನೌಕರರ ಆಸ್ತಿ ವಿವರಗಳನ್ನು ನೀಡಲು ವಿಳಂಬ ಮಾಡುತ್ತಿರುವುದು. ಈ ವಿಚಾರದ ಗೌಪ್ಯತೆ ಕಾಪಾಡದೇ ಅಕ್ರಮ ಆಸ್ತಿ ಗಳಿಸಿರುವ ನೌಕರರ ವಿರುದ್ಧ ತನಿಖೆಯು ದಾರಿ ತಪ್ಪಿಸುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು.

ಮೈಕ್ರೋ ಫೈನಾನ್ಸ್‌ನವರು ಮನೆ ಮನೆಗೆ ಹೋಗಿ ನೋಟಿಸ್ ನೀಡುತ್ತಿರುವುದು ಖಂಡನೀಯ. ಈ ಸಂಸ್ಥೆಗಳು ಮೀಟರ್ ಬಡ್ಡಿ ದಂಧೆ ಮಿತಿ ಮೀರಿದೆ. ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಆರ್‌ಬಿಐ ಮಾರ್ಗಸೂಚಿ ಪಾಲನೆ ಮಾಡಬೇಕು. ಈ ಸಂಬಂಧ ಜನರು ಎಚ್ಚೆತ್ತುಕೊಳ್ಳಬೇಕು ಎಂದು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಪಕ್ಷದ ಮಂಡ್ಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಂದ್ರು ಕಿಲಾರೆ, ಕೆ.ಆ‌ರ್.ಪೇಟೆ ತಾಲೂಕು ಅಧ್ಯಕ್ಷ ನಾಗರಾಜು ಇದ್ದರು.