ಕೆಆರ್‌ಎಸ್‌ ಒಳಹರಿವು 40 ಸಾವಿರ ಕ್ಯುಸೆಕ್‌ಗೆ ಇಳಿಮುಖ

| Published : Jun 29 2025, 01:32 AM IST

ಸಾರಾಂಶ

ಶ್ರೀರಂಗಪಟ್ಟಣ ತಾಲೂಕಿನ ಕೃಷ್ಣರಾಜಸಾಗರ ಒಳಹರಿವಿನಲ್ಲಿ ಕುಸಿತ ಉಂಟಾಗಿದ್ದು, ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ಮಾತೆಗೆ ಬಾಗಿನ ಸಲ್ಲಿಸಲಿರುವ ಹಿನ್ನೆಲೆಯಲ್ಲಿ ಹೊರಹರಿವಿನ ಪ್ರಮಾಣವನ್ನು ಕಡಿಮೆ ಮಾಡಲಾಗಿದೆ.

ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ

ತಾಲೂಕಿನ ಕೃಷ್ಣರಾಜಸಾಗರ ಒಳಹರಿವಿನಲ್ಲಿ ಕುಸಿತ ಉಂಟಾಗಿದ್ದು, ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ಮಾತೆಗೆ ಬಾಗಿನ ಸಲ್ಲಿಸಲಿರುವ ಹಿನ್ನೆಲೆಯಲ್ಲಿ ಹೊರಹರಿವಿನ ಪ್ರಮಾಣವನ್ನು ಕಡಿಮೆ ಮಾಡಲಾಗಿದೆ.

ಜಲಾಶಯದ ಗರಿಷ್ಠ ಮಟ್ಟ 124.80 ಅಡಿ ಇದ್ದು, ಶನಿವಾರ ರಾತ್ರಿ ವೇಳೆಗೆ ಜಲಾಶಯದಲ್ಲಿ 124 ಅಡಿಯವರೆಗೆ ನೀರು ದಾಖಲಾಗಿತ್ತು. ರಾತ್ರಿ 8 ಗಂಟೆ ವೇಳೆಗೆ ಅಣೆಕಟ್ಟೆಗೆ 39,957 ಕ್ಯುಸೆಕ್‌ ನೀರು ಹರಿದುಬರುತ್ತಿದ್ದರೆ, ಹೊರಹರಿವಿನ ಪ್ರಮಾಣವನ್ನು 25,548 ಕ್ಯುಸೆಕ್‌ಗೆ ಇಳಿಸಲಾಗಿದೆ. ಹಾಲಿ ಅಣೆಕಟ್ಟೆಯಲ್ಲಿ 39.957 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ.

ಶನಿವಾರ ಬೆಳಗ್ಗೆ ಜಲಾಶಯದಲ್ಲಿ 123.25 ಅಡಿ ಸಂಗ್ರಹವಾಗಿತ್ತು. ಅಣೆಕಟ್ಟೆಗೆ 73,811 ಕ್ಯುಸೆಕ್ ನೀರು ಹರಿದು ಬರುತ್ತಿದ್ದು, ಜಲಾಶಯದಿಂದ 38,983 ಕ್ಯುಸೆಕ್‌ ನೀರನ್ನು ಹೊರ ಬಿಡಲಾಗುತ್ತಿತ್ತು. ಈಗ ಅಣೆಕಟ್ಟೆ ಸಂಪೂರ್ಣ ಭರ್ತಿಯಾಗಲು ಕೇವಲ 0.80 ಅಡಿ ಮಾತ್ರ ಬಾಕಿ ಇದ್ದು, ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಾಗಿನ ಅರ್ಪಿಸಲು ಆಗಮಿಸುತ್ತಿರುವುದರಿಂದ ಹೊರ ಹರಿವಿನ ಪ್ರಮಾಣವನ್ನು ಕಡಿಮೆಗೊಳಿಸಲಾಗಿದೆ.ಗರಿಷ್ಠ ಮಟ್ಟ - 124.80 ಅಡಿ

ಇಂದಿನ ಮಟ್ಟ - 124 ಅಡಿ

ಒಳಹರಿವು - 39,957 ಕ್ಯುಸೆಕ್‌

ಹೊರಹರಿವು - 25,548 ಕ್ಯುಸೆಕ್‌

ಒಟ್ಟು ಸಂಗ್ರಹ - 39.957 ಟಿಎಂಸಿ ಅಡಿ