ಜಿಲ್ಲಾಧಿಕಾರಿ ಕಚೇರಿಯಲ್ಲಿ ಮೂರು ಕ್ರಷರ್ಗಳ ಕಡತ ವಿಲೇವಾರಿ ಹಾಗೂ ಭೂ ಪರಿವರ್ತನೆಗೆ ಸಂಬಂಧಿಸಿದಂತೆ ಲಕ್ಷಾಂತರ ರುಪಾಯಿ ಲಂಚದ ವ್ಯವಹಾರ ನಡೆದಿದೆ ಎನ್ನಲಾದ ವಾಟ್ಸ್ಆ್ಯಪ್ ಸಂದೇಶಗಳು ಬಹಿರಂಗವಾಗಿರುವ ಹಿನ್ನೆಲೆಯಲ್ಲಿ, ಪ್ರಕರಣದ ಸಮಗ್ರ ತನಿಖೆಗೆ ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್ಎಸ್) ಪಕ್ಷದ ಜಿಲ್ಲಾ ಘಟಕದ ವತಿಯಿಂದ ಗುರುವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು. ಕಂದಾಯ ಇಲಾಖೆಯ ವಿವಿಧ ಹಂತದ ಅಧಿಕಾರಿಗಳ ಹೆಸರೂ ಲಂಚದ ವ್ಯವಹಾರಕ್ಕೆ ಸಂಬಂಧಿಸಿದಂತೆ ಚಾಟ್ನಲ್ಲಿ ಪ್ರಸ್ತಾಪವಾಗಿದ್ದು, ಈ ಹಿಂದೆ ೫೧ ಲಕ್ಷ ರು. ಲಂಚ ನೀಡಿರುವ ಆರೋಪವೂ ಇದೆ. ಇದರಿಂದ ಒಂದೇ ಕೆಲಸಕ್ಕೆ ಒಟ್ಟು ೧.೧೧ ಕೋಟಿ ರು. ವ್ಯವಹಾರ ನಡೆದಿರುವ ಅನುಮಾನ ವ್ಯಕ್ತವಾಗಿದೆ.
ಕನ್ನಡಪ್ರಭ ವಾರ್ತೆ ಹಾಸನ
ಜಿಲ್ಲಾಧಿಕಾರಿ ಕಚೇರಿಯಲ್ಲಿ ಮೂರು ಕ್ರಷರ್ಗಳ ಕಡತ ವಿಲೇವಾರಿ ಹಾಗೂ ಭೂ ಪರಿವರ್ತನೆಗೆ ಸಂಬಂಧಿಸಿದಂತೆ ಲಕ್ಷಾಂತರ ರುಪಾಯಿ ಲಂಚದ ವ್ಯವಹಾರ ನಡೆದಿದೆ ಎನ್ನಲಾದ ವಾಟ್ಸ್ಆ್ಯಪ್ ಸಂದೇಶಗಳು ಬಹಿರಂಗವಾಗಿರುವ ಹಿನ್ನೆಲೆಯಲ್ಲಿ, ಪ್ರಕರಣದ ಸಮಗ್ರ ತನಿಖೆಗೆ ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್ಎಸ್) ಪಕ್ಷದ ಜಿಲ್ಲಾ ಘಟಕದ ವತಿಯಿಂದ ಗುರುವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಹೊರಟ ಪ್ರತಿಭಟನಾ ಮೆರವಣಿಗೆಯು ಎನ್. ಆರ್. ವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಬಂದ ಅವರು, ಕೆ.ಆರ್.ಎಸ್. ರಾಜ್ಯನಿರ್ವಾಹಕ ಸಮಿತಿ ಸದಸ್ಯ ಉಮೇಶ್ ಬೆಳಗುಂಬ ಮಾಧ್ಯಮದೊಂದಿಗೆ ಮಾತನಾಡಿ, ಮೂರು ಕ್ರಷರ್ ಕಡತಗಳ ವಿಲೇವಾರಿಗೆ ೬೦ ಲಕ್ಷ ರು. ಲಂಚದ ಬೇಡಿಕೆ ಇಡಲಾಗಿದ್ದು, ಅದರಲ್ಲಿ ೫೦ ಲಕ್ಷ ರು. ಜಿಲ್ಲಾಧಿಕಾರಿಗಳ ಪಾಲು ಎಂಬ ಆರೋಪ ಸಂಭಾಷಣೆಯಲ್ಲಿ ವ್ಯಕ್ತವಾಗಿದೆ. ಅಲ್ಲದೆ, ಜಿಲ್ಲಾಧಿಕಾರಿಗಳ ಡಿಜಿಟಲ್ ಸಹಿ ಮತ್ತು ಪಾಸ್ವರ್ಡ್ಗಳನ್ನು ಆಪ್ತ ಸಿಬ್ಬಂದಿ ಬಳಸುತ್ತಿದ್ದರೆಂಬುದು, ಸಿಸಿಟಿವಿ ಕಣ್ಗಾವಲು ತಪ್ಪಿಸಿ ಹಣ ಪಡೆಯಲು ವ್ಯವಸ್ಥೆ ಮಾಡಲಾಗಿತ್ತೆಂಬ ಗಂಭೀರ ಆರೋಪಗಳೂ ಕೇಳಿಬಂದಿವೆ ಎಂದು ಪಕ್ಷ ದೂರಿದರು. ತಹಸೀಲ್ದಾರ್, ಉಪವಿಭಾಗಾಧಿಕಾರಿ ಸೇರಿದಂತೆ ಕಂದಾಯ ಇಲಾಖೆಯ ವಿವಿಧ ಹಂತದ ಅಧಿಕಾರಿಗಳ ಹೆಸರೂ ಲಂಚದ ವ್ಯವಹಾರಕ್ಕೆ ಸಂಬಂಧಿಸಿದಂತೆ ಚಾಟ್ನಲ್ಲಿ ಪ್ರಸ್ತಾಪವಾಗಿದ್ದು, ಈ ಹಿಂದೆ ೫೧ ಲಕ್ಷ ರು. ಲಂಚ ನೀಡಿರುವ ಆರೋಪವೂ ಇದೆ. ಇದರಿಂದ ಒಂದೇ ಕೆಲಸಕ್ಕೆ ಒಟ್ಟು ೧.೧೧ ಕೋಟಿ ರು. ವ್ಯವಹಾರ ನಡೆದಿರುವ ಅನುಮಾನ ವ್ಯಕ್ತವಾಗಿದೆ.
ಲಂಚದ ಹಣವನ್ನು ಜಿಲ್ಲಾಧಿಕಾರಿಗಳ ಅಧಿಕೃತ ನಿವಾಸದ ಪ್ರವೇಶದ್ವಾರದ ಬಳಿಯ ಪೊಲೀಸ್ ಕೊಠಡಿಯಲ್ಲಿ ಇಡುವಂತೆ ಸೂಚಿಸಲಾಗಿದೆ ಎಂಬ ಆರೋಪವೂ ವಾಟ್ಸ್ಆ್ಯಪ್ ಸಂಭಾಷಣೆಯಲ್ಲಿದೆ. ಜಿಲ್ಲಾಧಿಕಾರಿ ಕಚೇರಿಯ ಸಿಸಿಟಿವಿ ಕ್ಯಾಮೆರಾಗಳ ಕಣ್ಗಾವಲಿಗೆ ಸಿಗದಂತೆ ಹಣ ಪಡೆಯಲು ಈ ವ್ಯವಸ್ಥೆ ರೂಪಿಸಲಾಗಿತ್ತು ಎನ್ನಲಾಗಿದೆ. ಸಾರ್ವಜನಿಕರ ಭದ್ರತೆಗಾಗಿ ಇರುವ ಪೊಲೀಸ್ ಕೊಠಡಿಯನ್ನೇ ಅಕ್ರಮ ಹಣದ ವಹಿವಾಟಿಗೆ ಬಳಸಲಾಗಿದೆ ಎಂಬ ಆರೋಪ ಅತ್ಯಂತ ಗಂಭೀರವಾಗಿದ್ದು, ಸಂಬಂಧಪಟ್ಟ ಸಿಸಿಟಿವಿ ದೃಶ್ಯಾವಳಿಗಳನ್ನು ಸಂರಕ್ಷಿಸಿ ಪರಿಶೀಲಿಸಬೇಕು ಎಂದು ಕೆಆರ್ಎಸ್ ಪಕ್ಷ ಒತ್ತಾಯಿಸಿದೆ.ಸರ್ಕಾರದ ಡಿಜಿಟಲ್ ಆಡಳಿತ ವ್ಯವಸ್ಥೆಯನ್ನೇ ಭ್ರಷ್ಟಾಚಾರಕ್ಕೆ ಬಳಸಿಕೊಂಡಿರುವ ಆರೋಪ ಗಂಭೀರವಾಗಿದ್ದು, ವಾಟ್ಸ್ಆ್ಯಪ್ ಸಂಭಾಷಣೆಗಳ ಸತ್ಯಾಸತ್ಯತೆ ಪರಿಶೀಲಿಸಿ, ಡಿಜಿಟಲ್ ಸಹಿ ಬಳಕೆ, ಹಣದ ವಹಿವಾಟು ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಪಾತ್ರದ ಬಗ್ಗೆ ಸ್ವತಂತ್ರ ತನಿಖೆ ನಡೆಸಬೇಕು. ತಪ್ಪಿತಸ್ಥರು ಯಾರೇ ಆಗಿದ್ದರೂ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸಲ್ಲಿಸಿದ ಮನವಿಯಲ್ಲಿ ಒತ್ತಾಯಿಸಿದ್ದಾರೆ.ಪ್ರತಿಭಟನೆಯಲ್ಲಿ ಕೆ. ಆರ್.ಎಸ್. ಪಕ್ಷದ ಸೋಮಸುಂದರ್, ದೇವರಾಜು, ಮಧು, ರಮೇಶ್, ನಿರಂಜನ್, ರವಿನಂದನ್, ಜಗದೀಶ್, ಶಿವಕುಮಾರ್, ವಸಂತ್, ಮಂಜೇಗೌಡ, ತಮಣ್ಣಗೌಡ, ಶರಣ್, ಪ್ರಕಾಶ್, ರಂಗಸ್ವಾಮಿ, ಜಿ.ಟಿ. ಗಣೇಶ್, ಪ್ರದೀಪ್, ಪಿ.ಎನ್. ಮಲ್ಲಿಕಾರ್ಜುನ್ ಇತರರು ಉಪಸ್ಥಿತರಿದ್ದರು.