5ರಂದು ದೇವರಾಯನದುರ್ಗದಲ್ಲಿ ಕೆಆರ್‌ಎಸ್‌ ಪಕ್ಷದಿಂದ ಯುವ ನಾಯಕತ್ವ ಶಿಬಿರ

| Published : Apr 02 2025, 01:04 AM IST

ಸಾರಾಂಶ

ಯುವ ಜನಾಂಗದಲ್ಲಿ ರಾಜಕೀಯ ಜಾಗೃತಿ ಮೂಡಿಸುವ ಉದ್ದೇಶದಿಂದ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ತುಮಕೂರು ಜಿಲ್ಲೆ ದೇವರಾಯನ ದುರ್ಗದಲ್ಲಿ ಯುವ ನಾಯಕತ್ವ ತರಬೇತಿ ಶಿಬಿರವನ್ನು ಏ.5 ಮತ್ತು 6ರಂದು ಹಮ್ಮಿಕೊಳ್ಳಲಾಗಿದೆ ಎಂದು ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ವಿ.ಬಿ. ಕೃಷ್ಣ ಹೇಳಿದ್ದಾರೆ.

- ರಾಜ್ಯ ಸಂಘಟನಾ ಕಾರ್ಯದರ್ಶಿ ವಿ.ಬಿ. ಕೃಷ್ಣ ಮಾಹಿತಿ - - -

ಕನ್ನಡಪ್ರಭ ವಾರ್ತೆ ದಾವಣಗೆರೆ ಯುವ ಜನಾಂಗದಲ್ಲಿ ರಾಜಕೀಯ ಜಾಗೃತಿ ಮೂಡಿಸುವ ಉದ್ದೇಶದಿಂದ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ತುಮಕೂರು ಜಿಲ್ಲೆ ದೇವರಾಯನ ದುರ್ಗದಲ್ಲಿ ಯುವ ನಾಯಕತ್ವ ತರಬೇತಿ ಶಿಬಿರವನ್ನು ಏ.5 ಮತ್ತು 6ರಂದು ಹಮ್ಮಿಕೊಳ್ಳಲಾಗಿದೆ ಎಂದು ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ವಿ.ಬಿ. ಕೃಷ್ಣ ಹೇಳಿದರು.

ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2 ವರ್ಷದಿಂದಲೂ ಕೆಆರ್‌ಎಸ್ ಪಕ್ಷದಿಂದ ಯುವ ನಾಯಕತ್ವ ತರಬೇತಿ ಶಿಬಿರ ನಡೆಸಲಾಗುತ್ತಿದೆ. 3ನೇ ಬಾರಿಗೆ ಶಿಬಿರ ಇದೀಗ ಪಕ್ಷದ ರಾಜ್ಯಾಧ್ಯಕ್ಷ ರವಿ ಕೃಷ್ಣಾ ರೆಡ್ಡಿ ನಡೆಸಿಕೊಡಲಿದ್ದಾರೆ ಎಂದರು.

ಪ್ರಸ್ತುತ ರಾಜಕೀಯ ಸಮಕಾಲೀನ ಚಿಂತನೆಗಳು, ಪ್ರಾಮಾಣಿಕ ರಾಜಕಾರಣ ಮಾಡುವುದು, ನಾಯಕತ್ವದ ಅರ್ಥ, ವಿಧಗಳು ಇತ್ಯಾದಿ ವಿಷಯಗಳ ಬಗ್ಗೆ ಶಿಬಿರದಲ್ಲಿ ಮಾಹಿತಿ, ಚರ್ಚೆ, ಭಾಷಣ ಕಲೆ, ಸಾಮಾಜಿಕ ಜಾಲತಾಣಗಳ ಕೌಶಲ್ಯಗಳ ಬಗ್ಗೆ ಎರಡು ದಿನದ ಶಿಬಿರದಲ್ಲಿ ತರಬೇತಿ ನೀಡಲಾಗುವುದು ಎಂದು ಅವರು ಹೇಳಿದರು.

ಇಂದಿನ ರಾಜಕಾರಣ ನೋಡಿದರೆ ಯುವಜನಾಂಗವು ಹೆಚ್ಚಿನ ಪ್ರಮಾಣದಲ್ಲಿ ರಾಜಕೀಯಕ್ಕೆ ಬರಬೇಕಾದ ಅಗತ್ಯವಿದೆ. ಕಾಂಗ್ರೆಸ್, ಬಿಜೆಪಿ, ಜೆಡಿಎಸ್‌ನಂತಹ ಪಕ್ಷಗಳಿಂದ ರಾಜಕಾರಣವೇ ಕಲುಷಿತಗೊಂಡಿದೆ. ಬೆಲೆ ಏರಿಕೆ, ತೆರಿಗೆ ಏರಿಕೆಯಿಂದಾಗಿ ಜನರು ತತ್ತರಿಸಿದ್ದಾರೆ. ಲಕ್ಷಾಂತರ ಹುದ್ದೆಗಳು ಖಾಲಿ ಇದ್ದರೂ ಅವುಗಳನ್ನು ಭರ್ತಿ ಮಾಡಿಕೊಳ್ಳದ ಕಾರಣಕ್ಕೆ ಯುವ ಜನಾಂಗ ಈಗ ನಿರುದ್ಯೋಗ ಸಮಸ್ಯೆ ಎದುರಿಸುತ್ತಿದೆ ಎಂದು ದೂರಿದರು.

ಯುವ ಜನಾಂಗವು ಹೆಚ್ಚಿನ ಸಂಖ್ಯೆಯಲ್ಲಿ ರಾಜಕಾರಣಕ್ಕೆ ಬರಬೇಕೆಂಬುದು ಕೆಆರ್‌ಎಸ್ ಪಕ್ಷದ ಆಶಯವಾಗಿದೆ. ರಾಜ್ಯದ ಯುವಜನರು ಹೆಚ್ಚಿನ ಸಂಖ್ಯೆಯಲ್ಲಿ ಶಿಬಿರದ ಸದುಪಯೋಗ ಪಡೆಯಬೇಕು. ಶಿಬಿರದ ಬಗ್ಗೆ ಹೆಚ್ಚಿನ ಮಾಹಿತಿ, ಹೆಸರು ನೋಂದಣಿಗೆ ಮೊ.76193 -53525, 87490 -65597 ಇಲ್ಲಿಗೆ ಸಂಪರ್ಕಿಸಬೇಕು ಎಂದು ಮನವಿ ಮಾಡಿದರು.

ಕೆಆರ್‌ಎಸ್ ಪಕ್ಷದ ದಾವಣಗೆರೆ ಜಿಲ್ಲಾ ಘಟಕಕ್ಕೆ ನೂತನ ಪದಾಧಿಕಾರಿಗಳನ್ನು ನೇಮಿಸಲಾಗಿದೆ. ನೂತನ ಜಿಲ್ಲಾಧ್ಯಕ್ಷರಾಗಿ ಎಚ್.ಎಂ. ಬಸವರಾಜಯ್ಯ, ಗೌರವಾಧ್ಯಕ್ಷರಾಗಿ ಮಂಜುನಾಥ ಹಳ್ಳಿಕೇರಿ, ಉಪಾಧ್ಯಕ್ಷರಾಗಿ ಟಿ.ಅಜ್ಜೇಶಿ, ವಿ.ಟಿ. ರವೀಂದ್ರ, ಪ್ರಧಾನ ಕಾರ್ಯದರ್ಶಿಯಾಗಿ ಪುಟ್ಟನಾಯ್ಕ, ಕಾರ್ಯದರ್ಶಿಯಾಗಿ ದಾವುಲ್ ಸಾಬ್‌, ರವಿಕುಮಾರ, ಸಂಘಟನಾ ಕಾರ್ಯದರ್ಶಿಯಾಗಿ ಗುಡ್ಡಪ್ಪ ಅವರನ್ನು ನೇಮಿಸಲಾಗಿದೆ ಎಂದು ಮಾಹಿತಿ ನೀಡಿದರು.

ಪಕ್ಷದ ಜಿಲ್ಲಾಧ್ಯಕ್ಷ ಎಚ್.ಎಂ. ಬಸವರಾಜಯ್ಯ, ಗೌರವಾಧ್ಯಕ್ಷ ಮಂಜುನಾಥ ಹಳ್ಳಿಕೇರಿ, ಉಪಾಧ್ಯಕ್ಷ ಅಜ್ಜೇಶಿ, ಪ್ರಧಾನ ಕಾರ್ಯದರ್ಶಿ ಪುಟ್ಟನಾಯ್ಕ ಇತರರು ಇದ್ದರು.

- - -

-1ಕೆಡಿವಿಜಿ61:

ದಾವಣಗೆರೆಯಲ್ಲಿ ಮಂಗಳವಾರ ಕೆಆರ್‌ಎಸ್ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ವಿ.ಬಿ.ಕೃಷ್ಣ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.