ಕೆಎಸ್‌ಒಯು: ವಿವಿಧ ಕೋರ್ಸ್‌ಗಳಿಗೆ ಪ್ರವೇಶ

| Published : Jul 30 2025, 12:46 AM IST

ಸಾರಾಂಶ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ 2025-26ನೇ ಶೈಕ್ಷಣಿಕ ಸಾಲಿನ (ಜುಲೈ-ಅವೃತ್ತಿ) ಪ್ರಥಮ ವರ್ಷದ ಬಿ.ಎ, ಬಿ.ಕಾಂ, ಬಿ.ಎಸ್‌ಸ್ಸಿ, ಬಿ.ಲಿಬ್, ಐಎಸ್‌ಸಿ, ಬಿ.ಸಿ.ಎ, ಬಿ.ಬಿ.ಎ, ಬಿಎಸ್‌ಡಬ್ಲ್ಯೂ ಎಂ.ಎ, ಎಂ.ಕಾಂ, ಎಂ.ಎ, ಎಂ.ಸಿ.ಜೆ, ಎಂ.ಲಿಬ್. ಐಎಸ್‌ಸಿ, ಎಂಬಿಎ, ಎಂ.ಎಸ್ಸಿ, ಎಂಸಿಎ, ಎಂಎಸ್‌ಡಬ್ಲ್ಯೂ ಪಿಜಿ ಡಿಪ್ಲೊಮಾ, ಡಿಪ್ಲೊಮಾ ಹಾಗೂ ಸರ್ಟಿಫಿಕೇಟ್ ಕೋರ್ಸ್‌ಗಳಿಗೆ ಪ್ರವೇಶಾತಿ ಪ್ರಾರಂಭವಾಗಿದೆ.

- ಕಚೇರಿ ಸಂಪರ್ಕಿಸಲು ಪ್ರಾದೇಶಿಕ ನಿರ್ದೇಶಕ ಡಾ.ವಿಜಯ್ ಪ್ರಕಾಶ್ ಸಲಹೆ

- - -

ದಾವಣಗೆರೆ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ 2025-26ನೇ ಶೈಕ್ಷಣಿಕ ಸಾಲಿನ (ಜುಲೈ-ಅವೃತ್ತಿ) ಪ್ರಥಮ ವರ್ಷದ ಬಿ.ಎ, ಬಿ.ಕಾಂ, ಬಿ.ಎಸ್‌ಸ್ಸಿ, ಬಿ.ಲಿಬ್, ಐಎಸ್‌ಸಿ, ಬಿ.ಸಿ.ಎ, ಬಿ.ಬಿ.ಎ, ಬಿಎಸ್‌ಡಬ್ಲ್ಯೂ ಎಂ.ಎ, ಎಂ.ಕಾಂ, ಎಂ.ಎ, ಎಂ.ಸಿ.ಜೆ, ಎಂ.ಲಿಬ್. ಐಎಸ್‌ಸಿ, ಎಂಬಿಎ, ಎಂ.ಎಸ್ಸಿ, ಎಂಸಿಎ, ಎಂಎಸ್‌ಡಬ್ಲ್ಯೂ ಪಿಜಿ ಡಿಪ್ಲೊಮಾ, ಡಿಪ್ಲೊಮಾ ಹಾಗೂ ಸರ್ಟಿಫಿಕೇಟ್ ಕೋರ್ಸ್‌ಗಳಿಗೆ ಪ್ರವೇಶಾತಿ ಪ್ರಾರಂಭವಾಗಿದೆ.

2 ಶೈಕ್ಷಣಿಕ ಕೋರ್ಸುಗಳನ್ನು ಏಕಕಾಲದಲ್ಲಿ ಒಂದು ಭೌತಿಕ ಕ್ರಮದಲ್ಲಿ ಮತ್ತೊಂದು ದೂರಶಿಕ್ಷಣ ಕ್ರಮದಲ್ಲಿ ಓದಲು ಅವಕಾಶವಿದೆ. ಬಿಪಿಎಲ್ ಹೊಂದಿರುವ ಮಹಿಳಾ ವಿದ್ಯಾರ್ಥಿನಿಯರು, ಡಿಫೆನ್ಸ್, ಮಾಜಿ ಸೈನಿಕ ವಿದ್ಯಾರ್ಥಿಗಳು, ಆಟೋ, ಕ್ಯಾಬ್ ಚಾಲಕರು ಮತ್ತು ಅವರ ಮಕ್ಕಳಿಗೆ ಬೋಧನಾ ಶುಲ್ಕದಲ್ಲಿ ಶೇ.10 ರಿಯಾಯಿತಿ ನೀಡಲಾಗುವುದು. ಅಲ್ಲದೇ ಕೋವಿಡ್-19 ನಿಂದ ಮೃತಪಟ್ಟವರ ಮಕ್ಕಳಿಗೆ, ತೃತೀಯ ಲಿಂಗಿಗಳಿಗೆ, ದೃಷ್ಟಿಹೀನ ವಿದ್ಯಾರ್ಥಿಗಳಿಗೆ (ಬಿ.ಇಡಿ. ಮತ್ತು ಎಂ.ಬಿ.ಎ. ಹೊರತುಪಡಿಸಿ) ಪೂರ್ಣ ಶುಲ್ಕ ವಿನಾಯಿತಿ ಇದೆ.

ಕ.ರಾ.ಮ.ವಿ.ಯ ಯಾವುದೇ ಕೋರ್ಸ್‌ಗಳಿಗೆ ಸೇರಬಯಸುವ ಅಲ್ಪಸಂಖ್ಯಾತ ವರ್ಗದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ದ ಮತ್ತು ಪಾರ್ಸಿ) ಅರ್ಹ ಅಭ್ಯಾರ್ಥಿಗಳು ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸಿ ಅಗತ್ಯ ದಾಖಲಾತಿಗಳೊಂದಿಗೆ ಪ್ರಾದೇಶಿಕ ಕೇಂದ್ರಕ್ಕೆ ಬೇಟಿ ನೀಡಿದರೆ ಉಚಿತ ಪ್ರವೇಶಾತಿ ನೀಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ವಿಶ್ವವಿದ್ಯಾನಿಲಯದ ಅಧಿಕೃತ ವೆಬ್‌ಸೈಟ್: ** www.ksoumysuru.ac.in ** ಮೊ: 9844926125, 8971004272, 8310676181, 9902517906, 9916009318, 8747919317 ಇಲ್ಲಿಗೆ ಕರೆ ಮಾಡುವುದು ಅಥವಾ ಖುದ್ದಾಗಿ ಕ.ರಾ.ಮು.ವಿ. ಪ್ರಾದೇಶಿಕ ಕೇಂದ್ರ, ಶ್ರೀ ಜೆ.ಎಚ್.ಪಟೇಲ್ ಬಡಾವಣೆ, ಶಾಮನೂರು ಹಿಂಭಾಗ, ನಾಗನೂರು ರಸ್ತೆಯ ಕಚೇರಿಯನ್ನು ಸಂಪರ್ಕಿಸಲು ಪ್ರಾದೇಶಿಕ ನಿರ್ದೇಶಕ ಡಾ.ವಿಜಯ್ ಪ್ರಕಾಶ್ ತಿಳಿಸಿದ್ದಾರೆ.

- - -

(ಸಾಂದರ್ಭಿಕ ಚಿತ್ರ)