ಬೆಂಗಳೂರಿನಿಂದ ಕೋಲಾರಕ್ಕೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಎಂವಿಜೆ ಆಸ್ಪತ್ರೆ ಮುಂದೆ ಮುಂದಿನ ವಾಹನಕ್ಕೆ ಡಿಕ್ಕಿ ಆಗುವುದನ್ನು ತಪ್ಪಿಸಲು ಹೋಗಿ ಚಾಲಕ ರಸ್ತೆ ವಿಭಜಕವನ್ನು ದಾಟಿ ಎದುರುರಸ್ತೆಗೆ ಹೋದದ್ದರಿಂದ ಎದುರಗಡೆಯಿಂದ ಬಂದ ಕ್ಯಾಂಟರ್ ವಾಹನಕ್ಕೆ ಡಿಕ್ಕಿ ಹೊಡೆದಿದೆ.
ಹೊಸಕೋಟೆ: ಕೆಎಸ್‌ಆರ್‌ಟಿಸಿ ಬಸ್ ಹಾಗೂ ಕ್ಯಾಂಟರ್ ಮುಖಾಮುಖಿ ಡಿಕ್ಕಹೊಡೆದ ಪರಿಣಾಮ ಕ್ಯಾಂಟರ್ ಚಾಲಕನಿಗೆ ತೀವ್ರ ಗಾಯಗಳಾಗಿ ಬಸ್‌ನಲ್ಲಿದ್ದ 7ಕ್ಕೂ ಹೆಚ್ಚು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ನಗರದ ಹೊರವಲಯದ ಎಂವಿಜೆ ಆಸ್ಪತ್ರೆ ಬಳಿ ಸಂಭವಿಸಿದೆ.
ಕೋಲಾರ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ-75ರಲ್ಲಿ ಅಪಘಾತ ಸಂಭವಿಸಿದೆ. ಬೆಂಗಳೂರಿನಿಂದ ಕೋಲಾರಕ್ಕೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಎಂವಿಜೆ ಆಸ್ಪತ್ರೆ ಮುಂದೆ ಮುಂದಿನ ವಾಹನಕ್ಕೆ ಡಿಕ್ಕಿ ಆಗುವುದನ್ನು ತಪ್ಪಿಸಲು ಹೋಗಿ ಚಾಲಕ ರಸ್ತೆ ವಿಭಜಕವನ್ನು ದಾಟಿ ಎದುರುರಸ್ತೆಗೆ ಹೋದದ್ದರಿಂದ ಎದುರಗಡೆಯಿಂದ ಬಂದ ಕ್ಯಾಂಟರ್ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಬಸ್ಸನ್ನು ಸರ್ವಿಸ್ ರಸ್ತೆ ಮೂಲಕ ಹಳ್ಳಕ್ಕೆ ಇಳಿದ ಪರಿಣಾಮ ಬಾರಿ ಅನಾಹುತ ತಪ್ಪಿದೆ. ಡಿಕ್ಕಿಯ ರಭಸಕ್ಕೆ ಕ್ಯಾಂಟರ್- ಕೆಎಸ್‌ಆರ್‌ಟಿಸಿ ಬಸ್ಸಿನ ಮುಂಭಾಗ ಜಖಂಗೊಂಡಿದೆ. ಬಸ್‌ನಲ್ಲಿ ಎಡಭಾಗದಲ್ಲಿ ಕುಳಿತಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.ಹೊಸಕೋಟೆ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದರು. ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು.