ಸಾರಾಂಶ
ಕನ್ನಡಪ್ರಭ ವಾರ್ತೆ ಹನೂರುಕರ್ನಾಟಕ ರಾಜ್ಯ ಸಾರಿಗೆ ಬಸ್ ಚಾಲಕನಿಗೆ ಮೂರ್ಛೆ ಬಂದು ಮರಕ್ಕೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಐವರು ಗಾಯಗೊಂಡು, ನಲವತ್ತಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಭಾನುವಾರ ಬೆಳಿಗ್ಗೆ ಚಿಕ್ಕರಂಗಶೆಟ್ಟಿ ದೊಡ್ಡಿ ಗ್ರಾಮದ ಬಳಿ ಜರುಗಿದೆ.ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಒಡೆಯರ್ ಪಾಳ್ಯ ಗ್ರಾಮದಿಂದ ಮೈಸೂರಿಗೆ ತೆರಳುತ್ತಿದ್ದ ಬಸ್ ಚಾಲಕನಿಗೆ ದಿಢೀರ್ ಮೂರ್ಛೆ ಕಾಣಿಸಿಕೊಂಡಿದೆ. ಪರಿಣಾಮ ರಸ್ತೆ ಬದಿಯ ಮರಕ್ಕೆ ಬಸ್ ಡಿಕ್ಕಿ ಹೊಡೆದಿದೆ. ನಲವತ್ತಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿದ್ದು, ಮುಂಭಾಗದಲ್ಲಿ ಕುಳಿತಿದ್ದ ಐವರು ಪ್ರಯಾಣಿಕರಿಗೆ ಗಾಯಗೊಂಡು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ.
ಕರ್ನಾಟಕ ರಾಜ್ಯ ಸಾರಿಗೆ ವಾಹನ ಭಾನುವಾರ ಬೆಳಗ್ಗೆ ಒಡೆಯರ್ ಪಾಳ್ಯದಿಂದ ಮೈಸೂರಿಗೆ ತೆರಳಲು ಬಸ್ ತಾಲೂಕಿನ ಚಿಕ್ಕರಂಗಶೆಟ್ಟಿ ದೊಡ್ಡಿ ಗ್ರಾಮದ ಸಮೀಪ ಇರುವ ರಸ್ತೆಯಲ್ಲಿ ಬರುತ್ತಿದ್ದಾಗ ಚಾಲಕನಿಗೆ ದಿಡೀರ್ ಮೂರ್ಛೆ ಕಾಣಿಸಿಕೊಂಡು ಬಸ್ ಮರ ಒಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ 40ಕ್ಕು ಹೆಚ್ಚು ಪ್ರಯಾಣಿಕರಲ್ಲಿ ಮುಂಬಾಗ ಕುಳಿತಿದ್ದ 5 ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದೆ.ಭಾನುವಾರ ಆದ ಕಾರಣ ರಜೆಯಲ್ಲಿದ್ದ ಶಾಲಾ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಕೆಲಸ ಕಾರ್ಯಗಳಿಗೆ ತೆರಳುವ ನೌಕರರು ತರಳದ ಪರಿಣಾಮ ಬಸ್‌ನಲ್ಲಿ ಕಡಮೆ ಪ್ರಯಾಣಿಕರಿದ್ದರು.
ಹೆಚ್ಚಾದ ಅಪಘಾತಗಳು:ಕರ್ನಾಟಕ ರಾಜ್ಯ ಸಾರಿಗೆ ವಾಹನಗಳು ಇತ್ತೀಚೆಗೆ ತಾಲೂಕಿನಲ್ಲಿ ಪದೇಪದೇ ಅಪಘಾತಕ್ಕೆ ಒಳಗಾಗಿ ಹಲವಾರು ಗಾಯಗೊಂಡಿದ್ದರೆ ಪಟ್ಟಣದಲ್ಲಿ ಮೊನ್ನೆ ಬಸ್ ನಿಲ್ದಾಣದ ಮುಂಭಾಗದಲ್ಲಿ ಚಾಲಕನ ಅಜಾರೋಕತೆಯಿಂದ ಮಹಿಳೆ ಒಬ್ಬರ ಕಾಲು ಸಂಪೂರ್ಣ ಜಖಂಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೀಗಾಗಿ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿರುವ ಅಪಘಾತಗಳನ್ನು ತಡೆಯಲು ಕರ್ನಾಟಕ ರಾಜ್ಯ ಸಾರಿಗೆ ಇಲಾಖೆಯ ಹಿರಿಯ ಅಧಿಕಾರಿಗಳು ಚಾಲಕರಿಗೆ ಸೂಕ್ತ ಮಾರ್ಗದರ್ಶನ ಜೊತೆಗೆ ಉತ್ತಮ ಗುಣಮಟ್ಟದ ಸಾರಿಗೆ ವಾಹನಗಳನ್ನು ಗುಡ್ಡಗಾಡು ಪ್ರದೇಶದಲ್ಲಿ ಪ್ರಯಾಣಿಕರಿಗೆ ಓಡಾಡಲು ಅನುಕೂಲ ಕಲ್ಪಿಸಬೇಕೆಂದು ನಾಗರಿಕರು ಒತ್ತಾಯಿಸಿದ್ದಾರೆ.
---------9ಸಿಎಚ್ಎನ್15
ಹನೂರು ತಾಲೂಕಿನ ಚಿಕ್ಕರಂಗಶೆಟ್ಟಿ ದೊಡ್ಡಿ ಗ್ರಾಮದ ಬಳಿ ಸಾರಿಗೆ ಬಸ್ ಮರಕ್ಕೆ ಡಿಕ್ಕಿ ಹೊಡೆದಿದೆ.