ಶಕ್ತಿ ಯೋಜನೆಯಿಂದ ಮಹಿಳೆಯರ ಸಬಲೀಕರಣವಾಗುತ್ತಿದೆ

| Published : Jul 17 2025, 12:39 AM IST

ಶಕ್ತಿ ಯೋಜನೆಯಿಂದ ಮಹಿಳೆಯರ ಸಬಲೀಕರಣವಾಗುತ್ತಿದೆ
Share this Article
  • FB
  • TW
  • Linkdin
  • Email

ಸಾರಾಂಶ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದರ ಹಿನ್ನೆಲೆ ಗ್ಯಾರಂಟಿ ಯೋಜನೆಗಳಿಂದ ಸಾಕಷ್ಟು ಬಡ ಕುಟುಂಬಗಳು ತಮ್ಮ ಬದುಕು ಕಟ್ಟಿಕೊಂಡಿದ್ದಾರೆ

ಕನ್ನಡಪ್ರಭ ವಾರ್ತೆ ಸರಗೂರು

ಶಕ್ತಿ ಯೋಜನೆಯಿಂದ ಮಹಿಳೆಯರ ಸಬಲೀಕರಣವಾಗುತ್ತಿದೆ ಹಾಗೂ ಇನ್ನಿತರ ಕಾರ್ಯಕ್ರಮಗಳಿಂದ ಎಂದು ಸರಗೂರು ಟೌನ್ ಕಾಂಗ್ರೆಸ್ ಅಧ್ಯಕ್ಷ ಎಸ್.ಎನ್. ನಾಗರಾಜ್ ಹೇಳಿದರು.

ಪಟ್ಟಣದ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದಲ್ಲಿ ಏರ್ಪಡಿಸಿದ್ದ ಶಕ್ತಿ ಯೋಜನೆಯ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದರ ಹಿನ್ನೆಲೆ ಗ್ಯಾರಂಟಿ ಯೋಜನೆಗಳಿಂದ ಸಾಕಷ್ಟು ಬಡ ಕುಟುಂಬಗಳು ತಮ್ಮ ಬದುಕು ಕಟ್ಟಿಕೊಂಡಿದ್ದಾರೆ ಎಂದರು.

ಸಂಭ್ರಮಾಚರಣೆ ಅಂಗವಾಗಿ ಸರಗೂರು ಬಸ್ ನಿಲ್ದಾಣದಲ್ಲಿ ಸರಗೂರು- ಮೈಸೂರು ಎಂಬ ನಾಮಫಲಕದ ಹೂವಿನಿಂದ ಅಲಂಕೃತಗೊಂಡ ಬಸ್ಸನ್ನು ಸರಗೂರು ತಾಲೂಕು ಗ್ಯಾರಂಟಿ ಅಧ್ಯಕ್ಷ ಚೆಲುವರಾಜು ಪೂಜೆ ಸಲ್ಲಿಸುವ ಮೂಲಕ ಉದ್ಘಾಟಿಸಿ ಸಿಹಿ ಹಂಚಲಾಯಿತು.

ಎಚ್.ಡಿ. ಕೋಟೆ ಕೆಎಸ್.ಆರ್.ಟಿಸಿ ಘಟಕ ವ್ಯವಸ್ಥಾಪಕ ಮಹಾದೇವಪ್ರಸಾದ್ ಮಾತನಾಡಿ, ಸರಗೂರು ಮತ್ತು ಎಚ್.ಡಿ. ಕೋಟೆ ತಾಲೂಕಿನಲ್ಲಿ ಪ್ರತಿ ನಿತ್ಯ ಸಾವಿರಾರು ಮಂದಿ ಮಹಿಳೆಯರು ಶಕ್ತಿ ಯೋಜನೆಯನ್ನು

ಬಳಸಿಕೊಂಡಿದ್ದು, ಇದರಿಂದ ದಿನಕ್ಕೆ ಎಂಟು ಲಕ್ಷಕ್ಕೂ ಹೆಚ್ಚು ಸಂಗ್ರಹಣೆಯಾಗುತ್ತಿದೆ ಎಂದರು.

ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಚೆಲುವರಾಜು, ಸರಗೂರು ಟೌನ್ ಕಾಂಗ್ರೆಸ್ ಅಧ್ಯಕ್ಷ ಎಸ್.ಎನ್. ನಾಗರಾಜು, ಎಪಿಎಂಸಿ ಮಾಜಿ ಅಧ್ಯಕ್ಷ ಸಿದ್ದರಾಜು, ಮುಖಂಡರಾದ ಮಂಜುನಾಥ್, ರಂಗನಾಥ್, ಮಹೇಶ್, ಬಿಲ್ಲಯ್ಯ, ಎಸ್.ಎಸ್. ಬಸವರಾಜು, ಸೋಮಣ್ಣ, ಯೂತ್ ಅಧ್ಯಕ್ಷ ನವೀನ್, ಮಹಮ್ಮದ್ ಸುಹೇಬ್, ಎಂ. ಮಹದೇವ, ಈರನಾಯಕ, ಮಾದೇವೇಗೌಡ, ಮಹೇಂದ್ರ ಇದ್ದರು.

----------------