ಬಸ್‌ನಲ್ಲಿದ್ದ 10-15 ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಅವರೆಲ್ಲರಿಗೂ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಕಳುಹಿಸಲಾಯಿತು.
ತಿಪಟೂರು: ತಾಲೂಕಿನ ಬಿದರೆಗುಡಿ ಬಳಿಯ ಕೊನೇಹಳ್ಳಿ ಸಿದ್ದಾಪುರ ಗ್ರಾಮದ ಎನ್.ಎಚ್. 206ರಲ್ಲಿ ಆಗುಂಬೆಯಿಂದ ಕೋಲಾರಕ್ಕೆ ತುಮಕೂರು ಮಾರ್ಗವಾಗಿ ತೆರಳುತ್ತಿದ್ದ ಕೆಎಸ್ಆರ್‌ಟಿಸಿ ಬಸ್‌ನ (ಕೆ.ಎ.57ಎಫ್2826) ಮುಂಬಾಗದ ಟೈರ್ ಬ್ಲಾಸ್ಟ್ ಆದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಹೊಲದಲ್ಲಿದ್ದ ಮನೆಗೆ ಡಿಕ್ಕಿ ಹೊಡೆದಿದ್ದರೂ ಯಾವುದೇ ಸಾವುನೋವುಗಳು ಆಗದೆ ಬಹುದೊಡ್ಡ ಅಪಾಯವೊಂದು ತಪ್ಪಿರುವ ಘಟನೆ ಭಾನುವಾರ ನಡೆದಿದೆ.
ಬಸ್‌ನಲ್ಲಿದ್ದ 10-15 ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಅವರೆಲ್ಲರಿಗೂ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಕಳುಹಿಸಲಾಯಿತು. ಬಸ್ ತೆಂಗಿನಮರಕ್ಕೆ ಡಿಕ್ಕಿ ಹೊಡೆದು ಪಕ್ಕದಲ್ಲಿದ್ದ ವಿದ್ಯುತ್ ಕಂಭಕ್ಕೂ ತಾಗಿ ಪುಟ್ಟಣ್ಣ ಎಂಬುವವರ ಮನೆ ಮೂಲೆಗೆ ಡಿಕ್ಕಿ ಹೊಡೆದು ನಿಂತಿದೆ.
ಅಪಘಾತ ನಡೆದ ಸ್ಥಳದಲ್ಲಿ ಸಾಕಷ್ಟು ವಿದ್ಯುತ್ ಕಂಬಗಳಿದ್ದು ಹೆಚ್ಚಿನ ಅಪಾಯವಾಗಿದ್ದರೆ ಇಡೀ ಬಸ್ಸೇ ಪ್ರಯಾಣಿಕರ ಸಮೇತ ಸುಟ್ಟುಹೋಗುತ್ತಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.ಸ್ಥಳಕ್ಕೆ ಅಡಿಷನಲ್ ಎಸ್‌ಪಿ ಪುರುಷೋತ್ತಮ್, ಡಿವೈಎಸ್‌ಪಿ ವಿನಾಯಕ ಶೆಟಗೇರಿ ಸೇರಿದಂತೆ ಕೆಎಸ್‌ಆರ್‌ಟಿಸಿ ಅಧೀಕಾರಿಗಳು ಭೇಟಿ ನೀಡಿ ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ. ಹೊನ್ನವಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.೨೯-ಟಿಪಿಟಿ೫ ಫೋಟೋದಲ್ಲಿ ಅಪಘಾತವಾಗಿರುವ ದೃಶ್ಯ