ಕೆಎಸ್‌ಆರ್‌ಟಿಸಿ ಲಾಭದಲ್ಲಿದೆ, ಶೀಘ್ರ 900 ಬಸ್‌ ಖರೀದಿ: ರಾಮಲಿಂಗಾರೆಡ್ಡಿ

| Published : Oct 09 2025, 02:01 AM IST

ಕೆಎಸ್‌ಆರ್‌ಟಿಸಿ ಲಾಭದಲ್ಲಿದೆ, ಶೀಘ್ರ 900 ಬಸ್‌ ಖರೀದಿ: ರಾಮಲಿಂಗಾರೆಡ್ಡಿ
Share this Article
  • FB
  • TW
  • Linkdin
  • Email

ಸಾರಾಂಶ

ಕೆಎಸ್‌ಆರ್‌ಟಿಸಿ ಸಂಸ್ಥೆ ಲಾಭದಲ್ಲಿದ್ದು, ಶೀಘ್ರ 900 ಹೊಸ ಬಸ್‌ಗಳನ್ನು ಖರೀದಿಸಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಚನ್ನಗಿರಿರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಶಕ್ತಿ ಯೋಜನೆಯನ್ನು ಜಾರಿಗೆ ತಂದು ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸಿದೆ. ಇದರಿಂದಾಗಿ ಮಹಿಳಾ ಉದ್ಯೋಗದಲ್ಲಿ ಶೇ.23ರಷ್ಟು ಹೆಚ್ಚಳವಾಗಿದೆ. ಕೆಎಸ್‌ಆರ್‌ಟಿಸಿ ಸಂಸ್ಥೆ ಲಾಭದಲ್ಲಿದ್ದು, ಶೀಘ್ರ 900 ಹೊಸ ಬಸ್‌ಗಳನ್ನು ಖರೀದಿಸಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ದಾವಣಗೆರೆ ಜಿಲ್ಲೆಯ ಚನ್ನಗಿರಿ ಪಟ್ಟಣದ ಬಳಿ ನಿರ್ಮಿಸಲಾದ ₹8 ಕೋಟಿ ವೆಚ್ಚದ ಕೆಎಸ್‌ಆರ್‌ಟಿಸಿ ಡಿಪೋ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿ, ಈ ಹಿಂದಿನ ಸರ್ಕಾರ ರಾಜ್ಯದಲ್ಲಿ ₹80 ಸಾವಿರ ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಹಣ ಮಂಜೂರು ಮಾಡದೇ ಟೆಂಡರ್ ಪ್ರಕ್ರಿಯೆ ನಡೆಸಿತ್ತು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಈ ಎಲ್ಲ ಕಾಮಗಾರಿಗಳಿಗೂ ಹಂತ ಹಂತವಾಗಿ ಅನುದಾನ ಬಿಡುಗಡೆ ಮಾಡುತ್ತಿದೆ. ನಮ್ಮ ಸಿಎಂ ಹಣ ಬಿಡುಗಡೆ ಮಾಡದೇ ಯಾವ ಕಾಮಗಾರಿಗಳಿಗೂ ಟೆಂಡರ್ ಪ್ರಕ್ರಿಯೆ ನಡೆಸುವುದಿಲ್ಲ ಎಂದರು.

ರಾಜ್ಯದಲ್ಲಿ ಶಕ್ತಿಯೋಜನೆ ಜಾರಿಗೆ ಬಂದ ಮೇಲೆ ಮಹಿಳೆಯರೇ 568 ಕೋಟಿ ಸಲ ಪ್ರಯಾಣ ಮಾಡಿದ್ದು, ಇದರ ಟಿಕೆಟ್ ಹಣವನ್ನು ಸರ್ಕಾರವೇ ಭರಿಸುತ್ತಿದೆ. ಇದರಿಂದ ಕೆಎಸ್‌ಆರ್‌ಟಿಸಿ ಸಂಸ್ಥೆ ಲಾಭದಲ್ಲಿದೆ. ಕೆಲವೇ ದಿನಗಳಲ್ಲಿ 900 ಹೊಸ ಬಸ್‌ಗಳನ್ನು ಖರೀದಿಸಿ ಅವಶ್ಯಕತೆ ಇರುವ ಕಡೆ ಬಸ್‌ ಬಿಡಲಾಗುವುದು ಎಂದರು. ಮಾಯಕೊಂಡ ಗ್ರಾಮಕ್ಕೆ ಬಸ್ ನಿಲ್ದಾಣ ಬೇಕೆಂದು ಆ ಭಾಗದ ಶಾಸಕ ಬಸವಂತಪ್ಪನವರು ಮನವಿ ಸಲ್ಲಿಸಿದ್ದಾರೆ. ಶೀಘ್ರದಲ್ಲಿಯೇ ಅಗತ್ಯ ಅನುದಾನ ಬಿಡುಗಡೆ ಮಾಡಿ, ಬಸ್ ನಿಲ್ದಾಣಕ್ಕೆ ಗುದ್ದಲಿ ಪೂಜೆ ನಡೆಸಲಾಗುವುದು ಎಂದರು.

ದೀಪಾವಳಿ: ಬೆಂಗ್ಳೂರಿಂದ ಹುಬ್ಬಳ್ಳಿ, ವಿಜಯಪುರಕ್ಕೆ ವಿಶೇಷ ರೈಲು:ದೀಪಾವಳಿ ಪ್ರಯುಕ್ತ ನೈಋತ್ಯ ರೈಲ್ವೆಯು ಹುಬ್ಬಳ್ಳಿ-ಎಸ್‌ಎಂವಿಟಿ ಬೆಂಗಳೂರು, ಎಸ್ಎಂವಿಟಿ ಬೆಂಗಳೂರು-ವಿಜಯಪುರ ನಡುವೆ ವಿಶೇಷ ರೈಲು ಓಡಿಸಲಿದೆ. ಹುಬ್ಬಳ್ಳಿ-ಬೆಂಗಳೂರು ರೈಲು ಅ.17 ರಂದು (07345) ಹುಬ್ಬಳ್ಳಿಯಿಂದ ಬೆ. 11ಕ್ಕೆ ಹೊರಟು, ರಾತ್ರಿ 8ಕ್ಕೆ ಬೆಂಗಳೂರು ತಲುಪಲಿದೆ. ಈ ರೈಲು ಹಾವೇರಿ, ಹರಿಹರ, ದಾವಣಗೆರೆ, ಅರಸೀಕೆರೆ ಮತ್ತು ತುಮಕೂರಲ್ಲಿ ನಿಲುಗಡೆ ನೀಡಲಿದೆ. ಎಸ್ಎಂವಿಟಿ ಬೆಂಗಳೂರು-ವಿಜಯಪುರ ರೈಲು (06245) ಅ.17 ರಂದು ಬೆಂಗಳೂರಿಂದ ರಾತ್ರಿ 10ಕ್ಕೆ ಹೊರಟು ಮರುದಿನ ಮ.2.05ಕ್ಕೆ ವಿಜಯಪುರ ತಲುಪಲಿದೆ. ಅ. 22 ರಂದು ವಿಜಯಪುರದಿಂದ ಸಂಜೆ 7ಕ್ಕೆ ಹೊರಟು, ಮರುದಿನ ಬೆ.11.15ಕ್ಕೆ ಬೆಂಗಳೂರು ತಲುಪಲಿದೆ. ಈ ರೈಲು ತುಮಕೂರು, ಅರಸೀಕೆರೆ, ಬೀರೂರು, ಚಿಕ್ಕಜಾಜೂರು, ಚಿತ್ರದುರ್ಗ, ರಾಯದುರ್ಗ, ಬಳ್ಳಾರಿ ಕಂಟೋನ್ಮೆಂಟ್, ತೋರಣಗಲ್ಲು, ಹೊಸಪೇಟೆ, ಕೊಪ್ಪಳ, ಗದಗ, ಬದಾಮಿ, ಬಾಗಲಕೋಟೆ ಮತ್ತು ಆಲಮಟ್ಟಿ ನಿಲ್ದಾಣಗಳಲ್ಲಿ ನಿಲ್ಲಲಿದೆ.

- ದೀಪಾವಳಿ ಹಿನ್ನೆಲೆಯಲ್ಲಿ ಸ್ಪೆಷಲ್‌ ರೈಲುಕನ್ನಡಪ್ರಭ ವಾರ್ತೆ18 ಬೋಗಿ ಒಳಗೊಂಡಿದೆ. ಅವುಗಳಲ್ಲಿ 1 ಎಸಿ 2-ಟೈರ್, 2 ಎಸಿ 3-ಟೈರ್, 9 ಸ್ಲೀಪರ್ ಕ್ಲಾಸ್, 4 ಜನರಲ್ ಸೆಕೆಂಡ್ ಕ್ಲಾಸ್, ಮತ್ತು 2 ಎಸ್ಎಲ್ಆರ್/ಡಿ ಬೋಗಿಗಳು ಇರಲಿವೆ.