ಸಾರಾಂಶ
ಜಿಲ್ಲೆಯಲ್ಲಿ ಪ್ರವಾಸೋದ್ಯಮ ಉತ್ತೇಜಿಸುವ ನಿಟ್ಟಿನಲ್ಲಿ ದಾವಣಗೆರೆ ಜಿಲ್ಲಾ ದರ್ಶನಕ್ಕೆ ಕೆಎಸ್ಸಾರ್ಟಿಸಿಯಿಂದ ವಿಶೇಷ ಬಸ್ಸುಗಳ ಸೇವೆಯನ್ನು ಆರಂಭಿಸಲಾಗುವುದು ಎಂದು ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ ದಾವಣಗೆರೆಯಲ್ಲಿ ಹೇಳಿದ್ದಾರೆ.
- ಫೆಬ್ರವರಿಯಿಂದ ಗೈಡ್ ಸಮೇತ ಬಸ್ ಕಾರ್ಯಾರಂಭ: ಸಂಸದೆ
- - - ಕನ್ನಡಪ್ರಭ ವಾರ್ತೆ, ದಾವಣಗೆರೆ, ಜ.26ಜಿಲ್ಲೆಯಲ್ಲಿ ಪ್ರವಾಸೋದ್ಯಮ ಉತ್ತೇಜಿಸುವ ನಿಟ್ಟಿನಲ್ಲಿ ದಾವಣಗೆರೆ ಜಿಲ್ಲಾ ದರ್ಶನಕ್ಕೆ ಕೆಎಸ್ಸಾರ್ಟಿಸಿಯಿಂದ ವಿಶೇಷ ಬಸ್ಸುಗಳ ಸೇವೆಯನ್ನು ಆರಂಭಿಸಲಾಗುವುದು ಎಂದು ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ ಹೇಳಿದರು.
ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಟಿಯಲ್ಲಿ ಮಾತನಾಡಿದ ಅವರು, ಸಂತೇಬೆನ್ನೂರು ಪುಷ್ಕರಿಣಿ, ಸೂಳೆಕೆರೆ, ಹರಿಹರ ದೇವಸ್ಥಾನ, ಕೊಂಡಜ್ಜಿ, ಕೊಂಡುಕುರಿ ಸಂರಕ್ಷಿತಾರಣ್ಯ ಇರುವ ಜಗಳೂರು ತಾ. ರಂಗಯ್ಯನದುರ್ಗ ಸೇರಿದಂತೆ ಜಿಲ್ಲೆಯ ಪ್ರವಾಸಿ ತಾಣಗಳ ರೂಟ್ ಮ್ಯಾಪ್ ಸಿದ್ಧಪಡಿಸುವ ಕೆಲಸ ಕೆಎಸ್ಸಾರ್ಟಿಸಿ ಮಾಡುತ್ತಿದೆ ಎಂದರು.ಪ್ರವಾಸಿ ತಾಣಗಳಿಗೆ ಜಿಲ್ಲಾ ಕೇಂದ್ರದಿಂದ ನಿತ್ಯ ಜಿಲ್ಲಾ ದರ್ಶನದ ಬಸ್ ಸೇವೆಯನ್ನು ಮುಂದಿನ ದಿನಗಳು, ಮಹಿಳಾ ದಿನಾಚರಣೆಯಿಂದ ಆರಂಭಿಸುವ ಉದ್ದೇಶವಿದೆ. ಈಗಾಗಲೇ ಜಿಲ್ಲಾಧಿಕಾರಿ, ಕೆಎಸ್ಸಾರ್ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿಗೆ ಸೂಚಿಸಿದ್ದೇವೆ. ಬಸ್ ಜೊತೆಗೆ ಜಿಲ್ಲೆಯ ಪ್ರವಾಸಿ ತಾಣಗಳ ಬಗ್ಗೆ ವಿವರಿಸುವ ಗೈಡ್ ಸಹ ಇರಲಿದ್ದಾರೆ. ಹೀಗೆ ವ್ಯವಸ್ಥಿತವಾಗಿ ಬಸ್ ಸೇವೆ ಆರಂಭಿಸಲಾಗುವುದು ಎಂದು ಹೇಳಿದರು.
ಭದ್ರಾ ಮೇಲ್ದಂಡೆ ಯೋಜನೆಗೆ ₹5300 ಕೋಟಿ ಅನುದಾನವನ್ನು ಕೇಂದ್ರ ಸರ್ಕಾರ ಘೋಷಿಸಿತ್ತು. ಆದರೆ, ಇದುವರೆಗೆ ಹಣ ಬಿಡುಗಡೆ ಮಾಡಿಲ್ಲ. ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಸಹ ಕೇಂದ್ರಕ್ಕೆ ಪತ್ರ ಬರೆದು, ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ ಬಿಡುಗಡೆಗೆ ಒತ್ತಾಯಿಸಿದ್ದಾರೆ. ಸಂವಿಧಾನದ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ನಗರದಲ್ಲಿ ಸಂವಿಧಾನ ಪೀಠಿಕೆ ಪ್ರದರ್ಶಿಸಿದ್ದು, ಅವುಗಳಿಗೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಹಾಗೂ ತಾವು ಚಾಲನೆ ನೀಡಿದ್ದೇವೆ ಎಂದು ತಿಳಿಸಿದರು.- - - (ಫೋಟೋ ಇದೆ.)