ಕೆಎಸ್‌ಆರ್‌ಟಿಸಿ ಮಂಗಳೂರು ವಿಭಾಗ ದಸರಾ ಪ್ರಯುಕ್ತ ಮಂಗಳೂರಿನ ಸುತ್ತಮುತ್ತಲಿನ ದೇವಸ್ಥಾನಗಳ ದರ್ಶನಕ್ಕೆ ಹಾಗೂ ಮಂಗಳೂರು-ಮಡಿಕೇರಿ, ಮಂಗಳೂರು-ಕೊಲ್ಲೂರು, ಮಂಗಳೂರು-ಸಿಗಂದೂರು ವಿಶೇಷ ಪ್ಯಾಕೇಜ್ ಪ್ರವಾಸ ಕಾರ್ಯಾಚರಣೆಯನ್ನು ಅಕ್ಟೋಬರ್ 11 ರಿಂದ ಅಕ್ಟೋಬರ್ 20 ರ ವರೆಗೆ ಕಾರ್ಯಾಚರಿಸಲು ನಿರ್ಧರಿಸಿದೆ.
ಕನ್ನಡಪ್ರಭ ವಾರ್ತೆ ಮಂಗಳೂರು
ಕೆಎಸ್‌ಆರ್‌ಟಿಸಿ ಮಂಗಳೂರು ವಿಭಾಗ ದಸರಾ ಪ್ರಯುಕ್ತ ಮಂಗಳೂರಿನ ಸುತ್ತಮುತ್ತಲಿನ ದೇವಸ್ಥಾನಗಳ ದರ್ಶನಕ್ಕೆ ಹಾಗೂ ಮಂಗಳೂರು-ಮಡಿಕೇರಿ, ಮಂಗಳೂರು-ಕೊಲ್ಲೂರು, ಮಂಗಳೂರು-ಸಿಗಂದೂರು ವಿಶೇಷ ಪ್ಯಾಕೇಜ್ ಪ್ರವಾಸ ಕಾರ್ಯಾಚರಣೆಯನ್ನು ಅಕ್ಟೋಬರ್ 11 ರಿಂದ ಅಕ್ಟೋಬರ್ 20 ರ ವರೆಗೆ ಕಾರ್ಯಾಚರಿಸಲು ನಿರ್ಧರಿಸಿದೆ.ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಸದರಿ ಬಸ್‍ಗಳಿಗೆ ಮುಂಗಡ ಸೀಟ್ ಕಾಯ್ದಿರಿಸಲು (www.ksrtc.in) ಸೂಕ್ತ ವ್ಯವಸ್ಥೆಯನ್ನು ಮಾಡಲಾಗಿದ್ದು, ಬಸ್‍ಗಳ ಸದುಪಯೋಗವನ್ನು ಸಾರ್ವಜನಿಕ ಪ್ರಯಾಣಿಕರು ಪಡೆದುಕೊಳ್ಳಬಹುದು.
ಪ್ಯಾಕೇಜ್ ಪ್ರವಾಸದ ಮಾರ್ಗ, ವೇಳೆ ಮತ್ತು ಪ್ರಯಾಣ ದರ:ಮಂಗಳೂರು ದಸರಾ ನವದುರ್ಗ ದರ್ಶನ ಪ್ಯಾಕೇಜ್:
ಬೆಳಗ್ಗೆ 8 ಗಂಟೆಗೆ ಮಂಗಳೂರು ಬಸ್ಸು ನಿಲ್ದಾಣದಿಂದ-ಮರೋಳಿ ಸೂರ್ಯ ನಾರಾಯಣ ದೇವಸ್ಥಾನ-ಬೋಳಾರ ಶ್ರೀ ಮಾರಿಯಮ್ಮ ದೇವಸ್ಥಾನ, ಶ್ರೀ ಮಂಗಳಾದೇವಿ ದೇವಸ್ಥಾನ- ಪೊಳಲಿ ಶ್ರೀರಾಜರಾಜೇಶ್ವರಿ ದೇವಸ್ಥಾನ-ಹೊಸನಾಡು ಕೊಡ್ಯಡ್ಕ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನ (ಮಧ್ಯಾಹ್ನದ ಊಟ) - ಶ್ರೀ ಕಟೀಲು ದುರ್ಗಾಪರಮೆಶ್ವರಿ ದೇವಸ್ಥಾನ- ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಮೂಲ್ಕಿ- ಸಸಿಹಿತ್ಲು ಶ್ರೀ ಭಗವತಿ ದೇವಸ್ಥಾನ - ಚಿತ್ರಾಪುರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ - ಶ್ರೀ ಉರ್ವ ಮಾರಿಯಮ್ಮ ದೇವಸ್ಥಾನ - ಕುದ್ರೋಳಿ ಗೋಕರ್ಣನಾಥ ದೇವಸ್ಥಾನ ನವದುರ್ಗಾ ದರ್ಶನ– ಮಂಗಳೂರು ಬಸ್ಸು ನಿಲ್ದಾಣ ರಾತ್ರಿ 8.30ಕ್ಕೆ ಮಂಗಳೂರು ಬಸ್ ನಿಲ್ದಾಣ ತಲುಪಲಿದೆ. ಪ್ರಯಾಣ ದರ ವಯಸ್ಕರಿಗೆ 500 ರು., ಮಕ್ಕಳಿಗೆ (6 ವರ್ಷದಿಂದ 12 ವರ್ಷದವರಿಗೆ) 400 ರು.ಮಂಗಳೂರು-ತಲಕಾವೇರಿ-ಭಾಗಮಂಡಲ ಪ್ಯಾಕೇಜ್ ಪ್ರವಾಸ:
ಬೆಳಗ್ಗೆ 7 ಗಂಟೆಗೆ ಮಂಗಳೂರು ಬಸ್ಸು ನಿಲ್ದಾಣದಿಂದ ಹೊರಟು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ-ತಲಕಾವೇರಿ ದೇವಸ್ಥಾನ - ಶ್ರೀ ಭಗಂಡೇಶ್ವರ ಸ್ವಾಮಿ ದೇವಸ್ಥಾನ, ತ್ರಿವೇಣಿ ಸಂಗಮ, ಭಾಗಮಂಡಲ ಅಬ್ಬಿಪಾಲ್ಸ್-ರಾಜಾಸೀಟ್- ರಾತ್ರಿ 9.30ಕ್ಕೆ ಮಂಗಳೂರು ಬಸ್ಸು ನಿಲ್ದಾಣ ತಲುಪಲಿದೆ. ಪ್ರಯಾಣ ದರ ವಯಸ್ಕರಿಗೆ 600 ರು., ಮಕ್ಕಳಿಗೆ (6 ವರ್ಷದಿಂದ 12 ವರ್ಷದವರಿಗೆ) 500 ರು.ಮಂಗಳೂರು-ಕೊಲ್ಲೂರು ಪ್ಯಾಕೇಜ್ ಪ್ರವಾಸ:
ಬೆಳಗ್ಗೆ 8 ಗಂಟೆಗೆ ಮಂಗಳೂರು ಬಸ್ಸು ನಿಲ್ದಾಣ - ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನ- ಕಾಪು ಮಾರಿಯಮ್ಮ ದೇವಸ್ಥಾನ- ಮಂದಾರ್ತಿ ದುರ್ಗಾಪರಮೇಶ್ವರಿ ದೇವಸ್ಥಾನ -ಕಮಲಶಿಲೆ ಶ್ರೀ ಬ್ರಾಹ್ಮೀದುರ್ಗಾಪರಮೇಶ್ವರಿ ದೇವಸ್ಥಾನ (ಮಧ್ಯಾಹ್ನದ ಊಟ) - ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ-ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನ, ರಾತ್ರಿ 8 ಗಂಟೆಗೆ ಮಂಗಳೂರು ಬಸ್ಸು ನಿಲ್ದಾಣ ತಲುಪಲಿದೆ. ಪ್ರಯಾಣ ದರ ವಯಸ್ಕರಿಗೆ 600 ರು., ಮಕ್ಕಳಿಗೆ (6 ವರ್ಷದಿಂದ 12 ವರ್ಷದವರಿಗೆ) 500 ರು.ಮಂಗಳೂರು-ಸಿಗಂದೂರು ಪ್ಯಾಕೇಜ್ ಪ್ರವಾಸ:
ಬೆಳಗ್ಗೆ 7 ಗಂಟೆಗೆ ಮಂಗಳೂರು ಬಸ್ಸು ನಿಲ್ದಾಣ–ಕುಂದಾಪುರ-ಸಿಗಂದೂರ ಶ್ರೀ ಚೌಡೇಶ್ವರಿದೇವಸ್ಥಾನ-ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ- ರಾತ್ರಿ 7.30 ಮಂಗಳೂರು ಬಸ್ಸು ನಿಲ್ದಾಣ. ಪ್ರಯಾಣ ದರ ವಯಸ್ಕರಿಗೆ 700 ರು., ಮಕ್ಕಳಿಗೆ (6 ವರ್ಷದಿಂದ 12 ವರ್ಷದವರಿಗೆ) 600 ರು.ಮಂಗಳೂರು-ಶೃಂಗೇರಿ ಪ್ಯಾಕೇಜ್ ಪ್ರವಾಸ:
ಬೆಳಗ್ಗೆ 8 ಗಂಟೆಗೆ ಮಂಗಳೂರು ಬಸ್ಸು ನಿಲ್ದಾಣ- ಕೊಡ್ಯಡ್ಕ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನ, ಶ್ರೀ ಶಾರದಾಂಬ ದೇವಸ್ಥಾನ, ಹರಿಹರಪುರ ಮಠ (ಮಧ್ಯಾಹ್ನದ ಊಟ) ಶ್ರೀ ಋಷ್ಯಶೃಂಗೇಶ್ವರ ದೇವಸ್ಥಾನ, ಕಿಗ್ಗ ಕ್ಷೇತ್ರ- ರಾತ್ರಿ 7.30 ಮಂಗಳೂರು ಬಸ್ಸು ನಿಲ್ದಾಣ. ಪ್ರಯಾಣ ದರ ವಯಸ್ಕರಿಗೆ 600 ರು., ಮಕ್ಕಳಿಗೆ (6 ವರ್ಷದಿಂದ 12 ವರ್ಷದವರಿಗೆ) 500 ರು.ಹೆಚ್ಚಿನ ಮಾಹಿತಿಗೆ ಮಂಗಳೂರು-1ನೇ ಘಟಕ ವ್ಯವಸ್ಥಾಪಕರ ಮೊಬೈಲ್: 7760990713, ಮಂಗಳೂರು-3ನೇ ಘಟಕ ವ್ಯವಸ್ಥಾಪಕರ ಮೊಬೈಲ್- 7760990723, ಮಂಗಳೂರು ಮುಂಗಡ ಬುಕ್ಕಿಂಗ್ ಕೌಂಟರ್ :9663211553, ಮಂಗಳೂರು ಬಸ್ಸು ನಿಲ್ದಾಣ: 7760990720, ವಿಭಾಗೀಯ ಕಚೇರಿ: 7760990711, 9663266221 ಸಂಪರ್ಕಿಸಬಹುದು ಎಂದು ಮಂಗಳೂರು ಕೆಎಸ್‌ಆರ್‌ಟಿಸಿ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.