ಗೌರಿ-ಗಣೇಶ ಹಬ್ಬದ ಹಿನ್ನೆಲೆ ಕೆಎಸ್ಸಾರ್ಟಿಸಿಯಿಂದ 1,500 ಹೆಚ್ಚುವರಿ ಬಸ್‌ಗಳ ಸಂಚಾರ

| Published : Sep 03 2024, 01:36 AM IST / Updated: Sep 03 2024, 07:37 AM IST

ಗೌರಿ-ಗಣೇಶ ಹಬ್ಬದ ಹಿನ್ನೆಲೆ ಕೆಎಸ್ಸಾರ್ಟಿಸಿಯಿಂದ 1,500 ಹೆಚ್ಚುವರಿ ಬಸ್‌ಗಳ ಸಂಚಾರ
Share this Article
  • FB
  • TW
  • Linkdin
  • Email

ಸಾರಾಂಶ

ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್‌ಆರ್‌ಟಿಸಿ ಹೆಚ್ಚುವರಿಯಾಗಿ 1500 ಬಸ್‌ಗಳ ಕಾರ್ಯಾಚರಣೆ ಮಾಡಲಿದೆ. ಸೆ.5ರಿಂದ 7ರವರೆಗೆ ಬೆಂಗಳೂರಿನಿಂದ ವಿವಿಧ ಕಡೆಗಳಿಗೆ ಹಾಗೂ ಸೆ.8ರಂದು ರಾಜ್ಯದ ವಿವಿಧೆಡೆಯಿಂದ ಬೆಂಗಳೂರಿಗೆ ಹೆಚ್ಚುವರಿ ಬಸ್‌ಗಳ ಸೇವೆ ಸಿಗಲಿದೆ.

 ಬೆಂಗಳೂರು :  ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್‌ಆರ್‌ಟಿಸಿ ಹೆಚ್ಚುವರಿಯಾಗಿ 1500 ಬಸ್‌ಗಳ ಕಾರ್ಯಾಚರಣೆ ಮಾಡಲಿದೆ. ಸೆ.5ರಿಂದ 7ರವರೆಗೆ ಬೆಂಗಳೂರಿನಿಂದ ವಿವಿಧ ಕಡೆಗಳಿಗೆ ಹಾಗೂ ಸೆ.8ರಂದು ರಾಜ್ಯದ ವಿವಿಧೆಡೆಯಿಂದ ಬೆಂಗಳೂರಿಗೆ ಹೆಚ್ಚುವರಿ ಬಸ್‌ಗಳ ಸೇವೆ ಸಿಗಲಿದೆ.

ಬೆಂಗಳೂರಿನಿಂದ ಹೊರಡುವ ಹೆಚ್ಚುವರಿ ಬಸ್‌ಗಳಲ್ಲಿ ಮೆಜೆಸ್ಟಿಕ್‌ನ ಕೆಂಪೇಗೌಡ ಬಸ್‌ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಬೆಳಗಾವಿ, ವಿಜಯಪುರ, ಬಳ್ಳಾರಿ, ಕೊಪ್ಪಳ, ಬೀದರ್‌, ತಿರುಪತಿ, ಹೈದರಾಬಾದ್‌ ಸೇರಿದಂತೆ ಇನ್ನಿತರ ಸ್ಥಳಗಳಿಗೆ ಸಂಚರಿಸಲಿವೆ.

ಮೈಸೂರು ರಸ್ತೆ ಬಸ್‌ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಬಸ್‌ಗಳು ಹಾಗೂ ತಮಿಳುನಾಡು ಮತ್ತು ಕೇರಳ ಕಡೆಗೆ ತೆರಳುವ ಬಸ್‌ಗಳು ಶಾಂತಿನಗರ ಬಿಎಂಟಿಸಿ ಬಸ್‌ ನಿಲ್ದಾಣದಿಂದ ತೆರಳಲಿವೆ.

ಪ್ರಯಾಣಿಕರು www.ksrtc.karnataka.gov.in ವೆಬ್‌ಸೈಟ್‌ನಲ್ಲಿ ಮುಂಗಡ ಟಿಕೆಟ್‌ ಕಾಯ್ದಿರಿಸಬಹುದಾಗಿದೆ. ನಾಲ್ಕು ಅಥವಾ ಅದಕ್ಕಿಂತ ಹೆಚ್ಚಿನ ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೆಟ್‌ ಕಾಯ್ದಿರಿಸಿದಲ್ಲಿ ಪ್ರಯಾಣ ದರದ ಶೇ.5ರಷ್ಟು ಹಾಗೂ ಹೋಗಿ ಬರುವ ಪ್ರಯಾಣದ ಟಿಕೆಟ್‌ ಒಟ್ಟಿಗೆ ಕಾಯ್ದಿರಿಸಿದರೆ ಶೇ.10ರಷ್ಟು ರಿಯಾಯಿತಿ ನೀಡಲಾಗುವುದು ಎಂದು ಕೆಎಸ್ಸಾರ್ಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ.