ಸಾರಾಂಶ
ಹೈಟೆಕ್ ಗ್ರೀನ್ ಮ್ಯಾಟ್ ಕ್ರೀಡಾಂಗಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿ, ಶಾಸಕ ಪಿ.ರವಿಕುಮಾರ್ ಅವರು ಬಹಳ ಆಸಕ್ತಿ ವಹಿಸಿ ಈ ಕ್ರೀಡಾಂಗಣ ನಿರ್ಮಾಣದ ಹೊಣೆ ಹೊತ್ತಿದ್ದಾರೆ. ಇದು ಮಂಡ್ಯದ ಕ್ರೀಡಾಪಟುಗಳಿಗೆ ಅಗತ್ಯವಾಗಿದೆ ಎಂದು ಹೇಳಿದರು. ಶಾಸಕ ಪಿ.ರವಿಕುಮಾರ್ ಮಾತನಾಡಿ, ನಮ್ಮ ನಗರದ ಕ್ರೀಡಾಪಟುಗಳಿಗೆ ಹಾಗೂ ಮಕ್ಕಳಲ್ಲಿ ಕ್ರೀಡೆಗಳ ಬಗ್ಗೆ ಪ್ರೋತ್ಸಾಹಿಸಲು ಗ್ರೀನ್ ಮ್ಯಾಟ್ ಕ್ರೀಡಾಂಗಣವನ್ನು ನಿರ್ಮಿಸಲಾಗುತ್ತಿದೆ ಎಂದು ತಿಳಿಸಿದರು.
ಕನ್ನಡಪ್ರಭ ವಾರ್ತೆ ಮಂಡ್ಯ
ಬೆಂಗಳೂರು ಸೇರಿದಂತೆ ದೊಡ್ಡ ದೊಡ್ಡ ನಗರಗಳಲ್ಲಿರುವ ಹೈಟೆಕ್ ಗ್ರೀನ್ ಮ್ಯಾಟ್ ಕ್ರೀಡಾಂಗಣ ಮಂಡ್ಯದಲ್ಲೂ ನಿರ್ಮಿಸಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದರು.ನಗರಸಭೆ ವತಿಯಿಂದ ೧ ಕೋಟಿ ರು. ವೆಚ್ಚದಲ್ಲಿ ನಗರದ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ಹೈಟೆಕ್ ಗ್ರೀನ್ ಮ್ಯಾಟ್ ಕ್ರೀಡಾಂಗಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿ, ಶಾಸಕ ಪಿ.ರವಿಕುಮಾರ್ ಅವರು ಬಹಳ ಆಸಕ್ತಿ ವಹಿಸಿ ಈ ಕ್ರೀಡಾಂಗಣ ನಿರ್ಮಾಣದ ಹೊಣೆ ಹೊತ್ತಿದ್ದಾರೆ. ಇದು ಮಂಡ್ಯದ ಕ್ರೀಡಾಪಟುಗಳಿಗೆ ಅಗತ್ಯವಾಗಿದೆ ಎಂದು ಹೇಳಿದರು.
ಶಾಸಕ ಪಿ.ರವಿಕುಮಾರ್ ಮಾತನಾಡಿ, ನಮ್ಮ ನಗರದ ಕ್ರೀಡಾಪಟುಗಳಿಗೆ ಹಾಗೂ ಮಕ್ಕಳಲ್ಲಿ ಕ್ರೀಡೆಗಳ ಬಗ್ಗೆ ಪ್ರೋತ್ಸಾಹಿಸಲು ಗ್ರೀನ್ ಮ್ಯಾಟ್ ಕ್ರೀಡಾಂಗಣವನ್ನು ನಿರ್ಮಿಸಲಾಗುತ್ತಿದೆ ಎಂದು ತಿಳಿಸಿದರು.ಕ್ರೀಡಾಂಗಣದಲ್ಲಿ ವಿವಿಧ ಕ್ರೀಡೆಗಳಾದ ವಾಲಿಬಾಲ್, ಥ್ರೋ ಬಾಲ್, ಕ್ರಿಕೆಟ್, ಫುಟ್ ಬಾಲ್ ಅನ್ನು ಆಡಬಹುದು. ಇಂತಹ ಕ್ರೀಡಾಂಗಣ ಬೆಂಗಳೂರಿನಲ್ಲಿದ್ದು, ಇದೇ ಮೊದಲ ಬಾರಿಗೆ ಮಂಡ್ಯ ಜಿಲ್ಲೆಯಲ್ಲಿ ನಿರ್ಮಿಸಲಾಗುತ್ತಿದೆ. ೩ ತಿಂಗಳೊಳಗಾಗಿ ಕಾಮಗಾರಿ ಪೂರ್ಣಗೊಳಿಸಿ ಕೃಷಿ ಸಚಿವರಿಂದಲೇ ಉದ್ಘಾಟಿಸಲಾಗುವುದು ಎಂದು ಹೇಳಿದರು.
ನಗರಸಭೆ ಅಧ್ಯಕ್ಷ ಎಂ.ವಿ. ಪ್ರಕಾಶ್ (ನಾಗೇಶ್), ಉಪಾಧ್ಯಕ್ಷ ಎಂ.ಟಿ. ಅರುಣ್‌ಕುಮಾರ್, ಪತ್ರಕರ್ತ ಬಿ.ಪಿ. ಪ್ರಕಾಶ್ ಸೇರಿದಂತೆ ಇನ್ನಿತರೆ ಗಣ್ಯರು ಉಪಸ್ಥಿತರಿದ್ದರು.