ಎಸ್ಸೆಂಕೆಗೆ ಗೌರವ ಡಾಕ್ಟರೆಟ್‌ ಕೊಟ್ಟ ಮೈಸೂರು ವಿವಿಗೆ ಕೀರ್ತಿ: ದಿನೇಶ್‌

| Published : Mar 02 2024, 01:45 AM IST

ಎಸ್ಸೆಂಕೆಗೆ ಗೌರವ ಡಾಕ್ಟರೆಟ್‌ ಕೊಟ್ಟ ಮೈಸೂರು ವಿವಿಗೆ ಕೀರ್ತಿ: ದಿನೇಶ್‌
Share this Article
  • FB
  • TW
  • Linkdin
  • Email

ಸಾರಾಂಶ

ಮೈಸೂರು ವಿಶ್ವವಿದ್ಯಾಲಯವು ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರಿಗೆ ಗೌರವ ಡಾಕ್ಟರೆಟ್‌ ಘೋಷಿಸಿರುವುದರಿಂದ ವಿಶ್ವವಿದ್ಯಾಲಯದ ಗೌರವ ಇನ್ನಷ್ಟು ಹೆಚ್ಚಾಗಿದೆ ಎಂದು ವಿಧಾನ ಪರಿಷತ್‌ ಸದಸ್ಯ ದಿನೇಶ್‌ ಗೂಳಿಗೌಡ ಹೇಳಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ಮೈಸೂರು ವಿಶ್ವವಿದ್ಯಾಲಯವು ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರಿಗೆ ಗೌರವ ಡಾಕ್ಟರೆಟ್‌ ಘೋಷಿಸಿರುವುದರಿಂದ ವಿಶ್ವವಿದ್ಯಾಲಯದ ಗೌರವ ಇನ್ನಷ್ಟು ಹೆಚ್ಚಾಗಿದೆ ಎಂದು ವಿಧಾನ ಪರಿಷತ್‌ ಸದಸ್ಯ ದಿನೇಶ್‌ ಗೂಳಿಗೌಡ ಹೇಳಿದ್ದಾರೆ.

ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ಮಾರ್ಚ್‌ 3ರಂದು ನಡೆಯುವ ವಿವಿಯ 104ನೇ ಘಟಿಕೋತ್ಸವದಲ್ಲಿ ಎಸ್‌.ಎಂ.ಕೃಷ್ಣ ಅವರಿಗೆ ಗೌರವ ಡಾಕ್ಟರೇಟ್‌ ಪ್ರದಾನ ಮಾಡಲು ವಿವಿಯ ಸಿಂಡಿಕೇಟ್‌ ತೀರ್ಮಾನಿಸಿರುವುದು ಅತ್ಯಂತ ಸ್ವಾಗತಾರ್ಹ. ಈ ವಿವಿಯಲ್ಲಿ ಓದಿದ ಹಳೆಯ ವಿದ್ಯಾರ್ಥಿಯಾದ ಕೃಷ್ಣ ಅವರಿಗೆ ಗೌರವ ಡಾಕ್ಟರೇಟ್‌ ನೀಡುತ್ತಿರುವುದರಿಂದ ಮೈಸೂರು ವಿಶ್ವ ವಿದ್ಯಾಲಯಕ್ಕೆ ಬಹು ದೊಡ್ಡ ಕೀರ್ತ ಬಂದಂತಾಗಿದೆ. ಇದಕ್ಕಾಗಿ ಮಂಡ್ಯ ಜಿಲ್ಲೆಯ ಜನರ ಪರವಾಗಿ ವಿವಿಯನ್ನು ಅಭಿನಂದಿಸುವುದಾಗಿ ಹೇಳಿದ್ದಾರೆ.