ಕರಾವಳಿಯ ಧಾರ್ಮಿಕ ಹಾಗೂ ಸಾಂಸ್ಕೃತಿಕ ಹೆಮ್ಮೆಯ ಪ್ರತೀಕವಾದ ಐತಿಹಾಸಿಕ ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವ-2026 ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ 11ರಿಂದ 22ರ ವರೆಗೆ ವೈಭವದಿಂದ ನಡೆಯಲಿದೆ. ಕ್ಷೇತ್ರ ನವೀಕರಣದ ರೂವಾರಿ, ಕೇಂದ್ರ ಮಾಜಿ ವಿತ್ತ ಸಚಿವ ಬಿ. ಜನಾರ್ದನ ಪೂಜಾರಿ ಮಾರ್ಗದರ್ಶನದಲ್ಲಿ ಉತ್ಸವ ನಡೆಯಲಿದ್ದು, ಭಕ್ತಿಸಾಗರಕ್ಕೆ ಸಕಲ ಸಿದ್ಧತೆಗಳು ನಡೆದಿವೆ ಎಂದು ಕ್ಷೇತ್ರಾಡಳಿತ ಮಂಡಳಿ ಅಧ್ಯಕ್ಷ ಜೈರಾಜ್‌ ಎಚ್‌.ಸೋಮಸುಂದರಂ ಮತ್ತು ಕೋಶಾಧಿಕಾರಿ ಪದ್ಮರಾಜ್‌ ಆರ್‌. ಪೂಜಾರಿ ಹೇಳಿದ್ದಾರೆ.

ಮಂಗಳೂರು: ಕರಾವಳಿಯ ಧಾರ್ಮಿಕ ಹಾಗೂ ಸಾಂಸ್ಕೃತಿಕ ಹೆಮ್ಮೆಯ ಪ್ರತೀಕವಾದ ಐತಿಹಾಸಿಕ ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವ-2026 ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ 11ರಿಂದ 22ರ ವರೆಗೆ ವೈಭವದಿಂದ ನಡೆಯಲಿದೆ. ಕ್ಷೇತ್ರ ನವೀಕರಣದ ರೂವಾರಿ, ಕೇಂದ್ರ ಮಾಜಿ ವಿತ್ತ ಸಚಿವ ಬಿ. ಜನಾರ್ದನ ಪೂಜಾರಿ ಮಾರ್ಗದರ್ಶನದಲ್ಲಿ ಉತ್ಸವ ನಡೆಯಲಿದ್ದು, ಭಕ್ತಿಸಾಗರಕ್ಕೆ ಸಕಲ ಸಿದ್ಧತೆಗಳು ನಡೆದಿವೆ ಎಂದು ಕ್ಷೇತ್ರಾಡಳಿತ ಮಂಡಳಿ ಅಧ್ಯಕ್ಷ ಜೈರಾಜ್‌ ಎಚ್‌.ಸೋಮಸುಂದರಂ ಮತ್ತು ಕೋಶಾಧಿಕಾರಿ ಪದ್ಮರಾಜ್‌ ಆರ್‌. ಪೂಜಾರಿ ಹೇಳಿದ್ದಾರೆ.ಕುದ್ರೋಳಿ ಕ್ಷೇತ್ರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಅವರು ಈ ಕುರಿತು ವಿವರ ನೀಡಿದರು. ಕ್ಷೇತ್ರದ ಭವ್ಯ ದರ್ಬಾರ್ ಹಾಲ್‌ನಲ್ಲಿ ಶ್ರೀ ಮಹಾಗಣಪತಿ, ಶ್ರೀ ಆದಿಶಕ್ತಿ, ನವದುರ್ಗೆಯರು ಹಾಗೂ ಜ್ಞಾನದಾಯಿನಿ ಶ್ರೀ ಶಾರದಾ ಮಾತೆಯ ನಯನಮನೋಹರ ಮೂರ್ತಿಗಳ ಪ್ರತಿಷ್ಠಾಪನೆ ಮತ್ತು ಆರಾಧನೆ, ಭಕ್ತಿಪೂರ್ಣ ಭಜನೆ, ನೃತ್ಯ-ಸಂಗೀತ ವೈಭವ, ಕ್ರೀಡಾಕೂಟಗಳು ಮತ್ತು ಸಮೃದ್ಧ ಜಾನಪದ ಕಲಾ ಪ್ರಕಾರಗಳು ಅನಾವರಣಗೊಳ್ಳಲಿವೆ ಎಂದರು.

12ರಂದು ಉದ್ಘಾಟನೆ:11ರಂದು ವೈದಿಕ ಕಾರ್ಯಕ್ರಮಗಳು ಆರಂಭಗೊಳ್ಳಲಿದ್ದು, ಮಧ್ಯಾಹ್ನ 12 ಗಂಟೆಗೆ ಶ್ರೀ ಶಾರದಾ ಮಾತೆ ಮತ್ತು ನವದುರ್ಗೆಯರ ಪ್ರತಿಷ್ಠಾಪನೆ ನೆರವೇರಲಿದೆ. 12ರಂದು ಸಂಜೆ 6.30ಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಂದ ಮಹೋತ್ಸವಕ್ಕೆ ಅದ್ದೂರಿ ಚಾಲನೆ ಸಿಗಲಿದೆ.ಅ.12ರಂದು ರಾಜ್ಯಮಟ್ಟದ ದಸರಾ ಕವಿಗೋಷ್ಠಿ, ಕಥೆ ಹಾಗೂ ಕವನ ಸ್ಪರ್ಧೆ, 13ರಂದು ಸಂಜೆ 7.30ರಿಂದ ’ರುದ್ರತಾಂಡವಮ್’ ರಾಜ್ಯಮಟ್ಟದ ಭಕ್ತಿಪ್ರಧಾನ ಸಮೂಹ ನೃತ್ಯ ಸ್ಪರ್ಧೆ ಸೀಸನ್-2 ನಡೆಯಲಿದೆ.

15ರಂದು ಮಕ್ಕಳಿಗಾಗಿ ‘ಮಕ್ಕಳ ದಸರಾ’ ನಡೆಯಲಿದ್ದು, ಬೆಳಗ್ಗೆ 9 ಗಂಟೆಗೆ ಕಾರ್ಯಕ್ರಮ ಉದ್ಘಾಟನೆಗೊಳ್ಳಲಿದೆ. ಮಕ್ಕಳಿಗೆ ಭಕ್ತಿಗೀತೆ ಸ್ಪರ್ಧೆ, ಚಿತ್ರಕಲೆ ಸ್ಪರ್ಧೆ, ದೇಶಭಕ್ತಿಗೀತೆ ಸ್ಪರ್ಧೆಗಳು ನಡೆಯಲಿವೆ. ಅ.16ರಂದು ‘ಮುದ್ದು ಶಾರದೆ’ ಸ್ಪರ್ಧೆ, ಅ.18ರಂದು ದಸರಾ ಮ್ಯಾರಥಾನ್ ಎಡಿಷನ್-4, ‘ಕಿನ್ನಿಪಿಲಿ’ ಸೀಸನ್-2 ನಡೆಯಲಿದೆ.ಪ್ಯಾಲೇಸ್ ಮಾದರಿ ದರ್ಬಾರ್ ಮಂಟಪ: ಶ್ರೀ ಮಹಾಗಣಪತಿ, ಶ್ರೀ ಆದಿಶಕ್ತಿ, ನವದುರ್ಗೆಯರು ಹಾಗೂ ಜ್ಞಾನದಾಯಿನಿ ಶ್ರೀ ಶಾರದಾ ಮಾತೆಯ ನಯನಮನೋಹರ ಮೂರ್ತಿಗಳ ಪ್ರತಿಷ್ಠಾಪನೆ ಮತ್ತು ಆರಾಧನೆ ನಡೆಯಲಿರುವ ದರ್ಬಾರ್ ಮಂಟಪವನ್ನು ಈ ಬಾರಿ ಅರಮನೆ ಶೈಲಿಯಲ್ಲಿ ಮನಮೋಹಕವಾಗಿ ವಿನ್ಯಾಸಗೊಳಿಸಲಾಗಿದೆ. ಇದರ ನಿರ್ಮಾಣ ಕಾರ್ಯ ಭರದಿಂದ ನಡೆಯುತ್ತಿದ್ದು, ಈ ಬಾರಿಯ ಕುದ್ರೋಳಿ ದಸರೆಯ ವಿಶೇಷ ಆಕರ್ಷಣೆ ಇದಾಗಿದೆ.ದಸರೆ ಹಿನ್ನೆಲೆಯಲ್ಲಿ ಮೆರ‍ಣಿಗೆ ಸಾಗುವ ಸಹಿತ ಎಲ್ಲ ಮಾರ್ಗಗಳಲ್ಲೂ ಕಟ್ಟಡಗಳನ್ನು ವಿದ್ಯುತ್‌ ದೀಪಗಳಿಂದ ಅಲಂಕರಿಸುವಂತೆ ಕೋರಿಕೊಳ್ಳಲಾಗಿದೆ. ದಸರಾ ಕಣ್ತುಂಬಿಕೊಳ್ಳಲು ಸುಮಾರು 3-4 ಲಕ್ಷ ಮಂದಿ ಸೇರುವ ನಿರೀಕ್ಷೆ ಇದೆ.ಈ ಬಾರಿಯೂ ದಸರಾ ಮೆರ‍ವಣಿಗೆಯಲ್ಲಿ ಡಿಜೆಗೆ ಅವಕಾಶ ಇಲ್ಲ. ಆದರೆ ಉ‍ಳಿದಂತೆ ನಾಡಿನ ಹಾಗೂ ದೇಶದ ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಸಾರುವ ಟ್ಯಾಬ್ಲೋಗಳಿಗೆ ಅ‍ವಕಾಶ ಇದೆ. ಅ. 21ರಂದು ಸಂಜೆ 4 ಗಂಟೆಗೆ ದಸರಾ ಮೆರ‍ಣಿಗೆ ಹೊರಡಲಿದ್ದು, ಮರುದಿನ ಮುಂಜಾನೆ ನವದುರ್ಗೆಯರ ವಿಸರ್ಜನೆ ನಡೆಯಲಿದೆ.