ಕುಕ್ಕೆ: ಮೂಲ ಮೃತ್ತಿಕಾ ಪ್ರಸಾದ ವಿತರಣೆ

| Published : Nov 16 2025, 03:00 AM IST

ಸಾರಾಂಶ

ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಅಂಗವಾಗಿ ಶನಿವಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಗರ್ಭಗುಡಿಯಿಂದ ದೇವಳದ ಪ್ರಧಾನ ಅರ್ಚಕ ಸೀತಾರಾಮ ಎಡಪಡಿತ್ತಾಯರು ಮೂಲಮೃತ್ತಿಕೆಯನ್ನು ವಿವಿಧ ವೈದಿಕ ವಿಧಾನಗಳ ಮೂಲಕ ತೆಗೆದರು.

ಕನ್ನಡಪ್ರಭ ವಾರ್ತೆ ಸುಬ್ರಹ್ಮಣ್ಯ

ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಅಂಗವಾಗಿ ಶನಿವಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಗರ್ಭಗುಡಿಯಿಂದ ದೇವಳದ ಪ್ರಧಾನ ಅರ್ಚಕ ಸೀತಾರಾಮ ಎಡಪಡಿತ್ತಾಯರು ಮೂಲಮೃತ್ತಿಕೆಯನ್ನು ವಿವಿಧ ವೈದಿಕ ವಿಧಾನಗಳ ಮೂಲಕ ತೆಗೆದರು. ಆರಂಭದಲ್ಲಿ ದೇವಳದ ಪುರೋಹಿತರಿಗೆ ಮತ್ತು ಆಡಳಿತ ಮಂಡಳಿಗೆ ಮೂಲಮೃತ್ತಿಕೆ ನೀಡಿದರು. ಬಳಿಕ ಭಕ್ತರಿಗೆ ವಿತರಿಸಿದರು. ಶ್ರದ್ಧಾಭಕ್ತಿಯಿಂದ ಈ ಮಹಾಪ್ರಸಾದವನ್ನು ಭಕ್ತರು ಸ್ವೀಕರಿಸಿದರು.

ಸರದಿ ಸಾಲು: ಸಹಸ್ರಾರು ಭಕ್ತರು ಬೆಳಗ್ಗೆ 10 ಗಂಟೆಯಿಂದಲೇ ಸರತಿ ಸಾಲಿನಲ್ಲಿ ನಿಂತು ಮೃತ್ತಿಕಾ ಪ್ರಸಾದ ಪಡೆದರು. ಹೆಚ್ಚಿನ ಸಂಖ್ಯೆಯಲ್ಲಿ ಊರ ಭಕ್ತರು ಮೃತ್ತಿಕಾ ಪ್ರಸಾದ ಸ್ವೀಕರಿಸಿದರು. ಮೂಲಮೃತ್ತಿಕಾ ಪ್ರಸಾದ ತೆಗೆಯಲು ಇದ್ದುದರಿಂದ ಮಧ್ಯಾಹ್ನ 2 ಗಂಟೆಯ ನಂತರ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ನೀಡಲಾಯಿತು.ಪ್ರಧಾನ ಅರ್ಚಕರು ಮೂಲ ಮೃತ್ತಿಕೆಯನ್ನು ತೆಗೆದು ಭಕ್ತರಿಗೆ ವಿತರಿಸಿ ಮೇಲೆದ್ದ ಬಳಿಕ ಮತ್ತೆ ದೇವಳದಲ್ಲಿ ಮೂಲ ಮೃತ್ತಿಕಾ ಪ್ರಸಾದ ವಿತರಣೆಯಾಗುವುದಿಲ್ಲ. ಇನ್ನು ನ.26ರಂದು ಚಂಪಾಷಷ್ಠಿ ಮಹಾರಥೋತ್ಸವದ ಬಳಿಕ ಮೂಲ ಮೃತ್ತಿಕೆಯನ್ನು ಮತ್ತೆ ಭಕ್ತರಿಗೆ ವಿತರಿಸಲಾಗುವುದು. ಮೂಲಮೃತ್ತಿಕಾ ಪ್ರಸಾದವನ್ನು ವರ್ಷದಲ್ಲಿ ಒಂದೇ ಬಾರಿ ತೆಗೆಯಲಾಗುವುದು.