ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಕಾರ್ಯ ಮಾಸ್ಟರ್‌ ಪ್ಲಾನ್‌ ಸಭೆ

| Published : Jul 02 2025, 12:20 AM IST

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಕಾರ್ಯ ಮಾಸ್ಟರ್‌ ಪ್ಲಾನ್‌ ಸಭೆ
Share this Article
  • FB
  • TW
  • Linkdin
  • Email

ಸಾರಾಂಶ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಕಚೇರಿ ಮೇಲ್ಮಹಡಿ ಸಭಾಂಗಣದಲ್ಲಿ ಸೋಮವಾರ ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅಧ್ಯಕ್ಷತೆಯಲ್ಲಿ ಕುಕ್ಕೆ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳ ೩೦ನೇ ಮಾಸ್ಟರ್ ಪ್ಲಾನ್ ಸಮಿತಿ ಸಭೆ ನಡೆಯಿತು.

ಕನ್ನಡಪ್ರಭ ವಾರ್ತೆ ಸುಬ್ರಹ್ಮಣ್ಯಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಕಚೇರಿ ಮೇಲ್ಮಹಡಿ ಸಭಾಂಗಣದಲ್ಲಿ ಸೋಮವಾರ ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅಧ್ಯಕ್ಷತೆಯಲ್ಲಿ ಕುಕ್ಕೆ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳ ೩೦ನೇ ಮಾಸ್ಟರ್ ಪ್ಲಾನ್ ಸಮಿತಿ ಸಭೆ ನಡೆಯಿತು.

ಸಭೆಯಲ್ಲಿ ಸುಮಾರು ರು.೨೬ ಕೋಟಿ ವೆಚ್ಚದ ಸುತ್ತು ಪೌಳಿ ನಿರ್ಮಾಣ ಕೆಲಸ, ರಥ ಬೀದಿಯ ಬಲಭಾಗದಲ್ಲಿ ಸುಮಾರು ೫೦೦೦ ಜನ ಏಕಕಾಲದಲ್ಲಿ ಕುಳಿತುಕೊಳ್ಳುವ ಭೋಜನ ಶಾಲೆ, ಅಂದಾಜು ೮೦ ರಿಂದ ೧೦೦ ಕೋಟಿ ವೆಚ್ಚದಲ್ಲಿ ಇಂಜಾಡಿ ಬಳಿ ಯಾತ್ರಿಕರಿಗೆ ೮೨೦ ಕೊಠಡಿಗಳ ವಸತಿ ಯೋಜನೆ, ರಥಬೀದಿಯ ಇಕ್ಕೆಲದಲ್ಲಿ ಪಾರಂಪರಿಕ ಕಟ್ಟಡ ನಿರ್ಮಾಣ, ಆಧುನಿಕ ಶೌಚಾಲಯ, ಡಾರ್ಮೆಟರಿ ನಿರ್ಮಾಣ, ಈ ಹಿಂದಿನ ವಸತಿ ಗೃಹಗಳಿಗೆ ಕಾಯಕಲ್ಪ, ನೌಕರರಿಗೆ ನೂತನ ವಸತಿ ಗೃಹ ನಿರ್ಮಾಣ, ಕಸ ವಿಲೇವಾರಿ ಘಟಕ, ವ್ಯಾಪಾರ ಮಳಿಗೆ ನಿರ್ಮಾಣ, ಅರಂಪಾಡಿ-ಎಡೋಳಿ ಮೂಲಕ ಸುಬ್ರಹ್ಮಣ್ಯಕ್ಕೆ ಬೈಪಾಸ್ ರಸ್ತೆ ನಿರ್ಮಾಣ ಮೊದಲಾದ ವಿಷಯಗಳ ಕುರಿತು ಚರ್ಚೆ ನಡೆಯಿತು.

ಲೋಕೋಪಯೋಗಿ ಅಭಿಯಂತರ ಪ್ರಮೋದ್ ಕುಮಾರ್ ನಿರ್ಮಿಸಬೇಕಾದ ಕಟ್ಟಡಗಳ ನೀಲ ನಕ್ಷೆಯನ್ನು ಸಚಿವರಿಗೆ ತೋರಿಸಿ ಅದರ ಬಗ್ಗೆ ವಿವರಿಸಿದರು. ಮಾಜಿ ಸಚಿವ ರಮಾನಾಥ ರೈ, ಶಾಸಕಿ ಭಾಗೀರಥಿ ಮುರುಳ್ಯ, ರಾಜ್ಯ ಮುಜರಾಯಿ ಆಯುಕ್ತ ಡಾ.ಎಂ.ವಿ.ವೆಂಕಟೇಶ್, ದ.ಕ ಜಿಲ್ಲಾ ಮುಜರಾಯಿ ಆಯುಕ್ತ ಗೋವಿಂದ ನಾಯ್ಕ್, ಶ್ರೀ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್‌ ಎಸ್‌.ಇಂಜಾಡಿ, ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ, ಎಇಒ ಯೇಸುರಾಜು, ಗ್ರಾ.ಪಂ.ಅಧ್ಯಕ್ಷೆ ಸುಜಾತಾ ಕಲ್ಲಾಜೆ, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯರಾದ ರವಿಶಂಕರ ಶೆಟ್ಟಿ, ಮಲ್ಲಿಕಾ ಪಕ್ಕಳ, ಪಿಡಿಒ ಮಹೇಶ್, ಕಾರ್ಯದರ್ಶಿ ಮೋನಪ್ಪ.ಡಿ, ವಲಯಾರಣ್ಯಾಧಿಕಾರಿ ವಿಮಲ್ ಬಾಬು, ವ್ಯವಸ್ಥಾಪನಾ ಸಮಿತಿ ಸದಸ್ಯರು, ಮಾಸ್ಟರ್‌ಪ್ಲಾನ್ ಸಮಿತಿ ಸದಸ್ಯರು, ಲೋಕೋಪಯೋಗಿ, ಕೆಎಸ್‌ಆರ್‌ಟಿಸಿ, ಕಂದಾಯ ಮೊದಲಾದ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಇದ್ದರು.