13ರಿಂದ 17ರ ವರೆಗೆ ಕುಮಾರಲಿಂಗೇಶ್ವರ ಸ್ವಾಮಿ ಜಾತ್ರೋತ್ಸವ

| Published : Jan 10 2024, 01:46 AM IST

ಸಾರಾಂಶ

ಸುಮಾರು 900 ವರ್ಷಗಳ ಧಾರ್ಮಿಕ ಇತಿಹಾಸವಿರುವ ಕುಮಾರಲಿಂಗೇಶ್ವರ ದೇವಾಲಯ

ಕನ್ನಡಪ್ರಭವಾರ್ತೆ ಸೋಮವಾರಪೇಟೆ

ಇತಿಹಾಸ ಪ್ರಸಿದ್ಧ ಶಾಂತಳ್ಳಿ ಶ್ರೀ ಕುಮಾರಲಿಂಗೇಶ್ವರ ಸ್ವಾಮಿ ಜಾತ್ರೋತ್ಸವ ಜ. 13ರಿಂದ 17ರ ವರೆಗೆ ಅದ್ದೂರಿಯಾಗಿ ನಡೆಸಲಾಗುವುದು ಎಂದು ಶ್ರೀ ಕುಮಾರಲಿಂಗೇಶ್ವರ ದೇವಾಲಯ ಧರ್ಮದರ್ಶಿ ಮಂಡಳಿ ಅಧ್ಯಕ್ಷ ಕೆ. ಎಂ. ಲೋಕೇಶ್ ಹೇಳಿದರು.ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಮಾರು 900 ವರ್ಷಗಳ ಧಾರ್ಮಿಕ ಇತಿಹಾಸವಿರುವ ಕುಮಾರಲಿಂಗೇಶ್ವರ ದೇವಾಲಯದಲ್ಲಿ 16 ರಂದು 65ನೇ ವರ್ಷದ ಮಹಾ ರಥೋತ್ಸವ ಆಹ್ವಾನಿತರು, ಗ್ರಾಮಸ್ಥರು ಹಾಗೂ ಭಕ್ತಾದಿಗಳ ಸಮ್ಮುಖದಲ್ಲಿ ಮಧ್ಯಾಹ್ನ 12ಕ್ಕೆ ನಡೆಯಲಿದೆ ಎಂದರು.

13 ರಂದು ‘ಬೆಳ್ಳಿ ಬಂಗಾರ ದಿನ’ ಆಚರಣೆಯೊಂದಿಗೆ ಸಂಜೆ 6.30ರಿಂದ ಜಾತ್ರೆ ಪ್ರಾರಂಭೋತ್ಸವ ಪೂಜೆ ನಡೆಯಲಿದೆ. 14ರಂದು ‘ಮಕರ ಸಂಕ್ರಮಣ ಕರುವಿನ ಹಬ್ಬ’ ಹಾಗೂ 7 ಗಂಟೆಗೆ ದೇಗುಲದ ಗರುಡ ಕಂಬದ ಅಗ್ರಪೀಠದಲ್ಲಿ ತುಪ್ಪದ ನಂದಾದೀಪವನ್ನು ಬೆಳಗಿಸಲಾಗುತ್ತದೆ. ಕುಮಾರಳ್ಳಿ, ಜಕ್ಕನಳ್ಳಿ, ಕೊತ್ತನಳ್ಳಿ ಗ್ರಾಮಸ್ಥರು ಮತ್ತು ದೇವರ ಒಡೆಕಾರರು ಮತ್ತು ಭಕ್ತಾದಿಗಳು ಪುಷ್ಪಗಿರಿ ಬೆಟ್ಟದಲ್ಲಿ ಶ್ರೀ ಕುಮಾರಲಿಂಗೇಶ್ವರ ಸ್ವಾಮಿಯ ಪಾದುಕೆಗಳಿಗೆ ಪೂಜೆ ಸಲ್ಲಿಸಿ ಜ್ಯೋತಿ ಬೆಳಗಿಸಲಿದ್ದಾರೆ ಎಂದರು.

15ರಂದು ‘ಅರಸು ಬಲ ಸೇವೆ’ ಪೂಜೆ ನಡೆಯಲಿದೆ. ಸಂಜೆ 7.30ರಿಂದ ಗಣಹೋಮ, ರಂಗಪೂಜೆ, ಬೀದಿ ಉತ್ಸವ, ಮಹಾಮಂಗಳಾರತಿ ಕಾರ್ಯಕ್ರಮಗಳು ನಡೆಯಲಿವೆ. 16ರಂದು ರಥೋತ್ಸವ ಜರುಗಲಿದ್ದು, ಈ ಸಂದರ್ಭ ಕ್ಷೇತ್ರದ ಸಂಸದ ಪ್ರತಾಪ್ ಸಿಂಹ, ಶಾಸಕ ಡಾ. ಮಂತರ್ ಗೌಡ, ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ, ವಿಧಾನ ಪರಿಷತ್ ಸದಸ್ಯ ಸುಜು ಕುಶಾಲಪ್ಪ, ಮಾಜಿ ಶಾಸಕ ಅಪ್ಪಚ್ಚು ರಂಜನ್, ಉದ್ಯಮಿ ಹರಪಳ್ಳಿ ರವೀಂದ್ರ ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ ಸಾರ್ವಜನಿಕ ಭಕ್ತಾದಿಗಳಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿದೆ.

17ರಂದು 3 ಗಂಟೆಗೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಸ್ಥಳೀಯರಾದ ಎಸ್.ಜಿ. ಮೇದಪ್ಪ, ಕೆ.ಎಸ್. ರಾಮಚಂದ್ರ, ಉದ್ಯಮಿ ಬಿ.ಎಲ್ ಸಂತೋಷ್, ಕೆ.ಎಂ. ಕೃಷ್ಣಕುಮಾರ್, ಕೆ.ಕೆ. ಗೋಪಾಲ, ವಕೀಲರಾದ ಬಿ.ಈ. ಜಯೇಂದ್ರ, ಶಾಂತಳ್ಳಿ ಗ್ರಾ.ಪಂ ಅಧ್ಯಕ್ಷೆ ಸವಿತಾ ವಿಜಯ, ಬೆಟ್ಟದಳ್ಳಿ ಗ್ರಾ. ಪಂ ಅಧ್ಯಕ್ಷ ಕೆ.ಜಿ. ತವ್ಮ್ಮಯ್ಯ, ತೋಳೂರುಶೆಟ್ಟಳ್ಳಿ ಗ್ರಾ. ಪಂ ಅಧ್ಯಕ್ಷೆ ಭವಾನಿ ಮಂಜುನಾಥ್, ಶಾಂತಳ್ಳಿ ಗ್ರಾಮಾಭಿವೃದ್ಧಿ ಸಮಿತಿ ಅಧ್ಯಕ್ಷ ಕೆ.ಎಂ. ಧರ್ಮಪ್ಪ, ಶ್ರೀ ಕುಮಾರಲಿಂಗೇಶ್ವರ ಯುವಕ ಸಂಘದ ಅಧ್ಯಕ್ಷ ಜಿ.ಎಂ. ಸಜ್ಜನ್ ಉಪಸ್ಥಿತರಿರುವರು. ಮುಖ್ಯ ಭಾಷಣಕಾರರಾಗಿ ಪಶುವೈದ್ಯ ಇಲಾಖೆಯ ಸಹಾಯಕ ನಿರ್ದೇಶಕ ಬದಾಮಿ ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಕೆಎಸ್‍ಆರ್‍ಟಿಸಿಯ ನಿವೃತ್ತ ಡಿಸಿಎಂ ಕೆ.ಎಂ. ರವೀಂದ್ರ, ಬೆಟ್ಟದಳ್ಳಿಯಲ್ಲಿ ಶಾಲಾ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿರುವ ಬಿ.ಬಿ. ನವೀನ್ ಹಾಗೂ ಪಿಯುಸಿಯಲ್ಲಿ ಕಳೆದ ಭಾರಿಯ ವಾರ್ಷಿಕ ಪರೀಕ್ಷೆಯಲ್ಲಿ ಕಾಮರ್ಸ್ ವಿಭಾಗದಲ್ಲಿ ರಾಜ್ಯದಲ್ಲಿ ಶೇ. 100 ಅಂಕಗಳಿಸಿದ ಕೆ.ಎ. ಅನನ್ಯ ಅವರನ್ನು ಸನ್ಮಾನಿಸಲಾಗುವುದು.

ಗೋಷ್ಠಿಯಲ್ಲಿ ದೇವಾಲಯ ಧರ್ಮದರ್ಶಿ ಮಂಡಳಿ ಉಪಾಧ್ಯಕ್ಷ ಜಿ.ಡಿ. ಬಸವರಾಜು, ಪ್ರಧಾನ ಕಾರ್ಯದರ್ಶಿ ಕೆ.ಕೆ. ಮುತ್ತಣ್ಣ, ಖಜಾಂಚಿ ಎಸ್.ಆರ್. ಉತ್ತಯ್ಯ, ದೇವಾಲಯ ಕಾರ್ಯದರ್ಶಿ ಕೆ.ಪಿ. ಚಂಗಪ್ಪ ಉಪಸ್ಥಿತರಿದ್ದರು.