ಗೊದ್ದು ಗ್ರಾಮದ ಶ್ರೀ ಕುಮಾರಲಿಂಗೇಶ್ವರ ಸ್ವಾಮಿ ಹಾಗೂ ದೊಡ್ಡಯ್ಯನ ಜಾತ್ರಾಮಹೋತ್ಸವ ಜ.16ರಂದು ನಡೆಯಲಿದೆ.
ಕನ್ನಡಪ್ರಭವಾರ್ತೆ ಸೋಮವಾರಪೇಟೆ
ತಾಲೂಕಿಗೆ ಹೊಂದಿಕೊಂಡಿರುವ ಗೊದ್ದು ಗ್ರಾಮದ ಶ್ರೀ ಕುಮಾರಲಿಂಗೇಶ್ವರ ಸ್ವಾಮಿ ಹಾಗೂ ದೊಡ್ಡಯ್ಯನ ಜಾತ್ರಾಮಹೋತ್ಸವ ಜ.16ರಂದು ನಡೆಯಲಿದೆ.ಪ್ರತಿ ವರ್ಷದಂತೆ ಈ ವರ್ಷವೂ ಜಾತ್ರಾಮಹೋತ್ಸವ ವಿಜೃಂಭಣೆಯಿಂದ ನಡೆಸಲಾಗುವುದು. ಅಂದು ಬೆಳಗ್ಗೆ ದೊಡ್ಡಯ್ಯನ ದೇವಾಲಯದ ಮೂಲಸ್ಥಾನದಿಂದ ಉತ್ಸವ ಮೂರ್ತಿಯನ್ನು ಬೆಳಿಗ್ಗೆ ಶ್ರದ್ಧಾ ಭಕ್ತಿಯಿಂದ ಮೆರವಣಿಗೆಯ ಮೂಲಕ ವಾದ್ಯಗೋಷ್ಠಿಯೊಂದಿಗೆ ತಂದು ಕುಮಾರಲಿಂಗೇಶ್ವರ ದೇವಾಲಯದಲ್ಲಿ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಲಾಗುವುದು. ನಂತರ ಸಂಜೆ 6ಕ್ಕೆ ಪೂಜೆ ಸಲ್ಲಿಸಿದ ನಂತರ ಮೆರವಣಿಗೆಯ ಮೂಲಕ ಮೂಲಸ್ಥಾನಕ್ಕೆ ಉತ್ಸವ ಮೂರ್ತಿಯನ್ನು ಕೊಂಡೊಯ್ಯಲಾಗುವುದು. ಕಾರ್ಯಕ್ರಮದಲ್ಲಿ ಬೆಳಗ್ಗೆ 11ಕ್ಕೆ ಸಭಾ ಕಾರ್ಯಕ್ರಮ ನಡೆಯುವುದು. ಜಾತ್ರಾಮಹೋತ್ಸವದ ಗೌರವಾಧ್ಯಕ್ಷರಾದ ಹೆಗ್ಗಡಳ್ಳಿ ಮಠದ ಶ್ರೀ ಷಡ್ಭಾವರಹಿತೇಶ್ವರ ಶಿವಾಚಾರ್ಯ ಸ್ವಾಮೀಜಿಗಳು, ಹಾಸನ ಆದಿಚುಂಚನಗಿರಿ ಮಠದ ಶ್ರೀ ಶಂಭುನಾಥ ಸ್ವಾಮೀಜಿ ಹಾಗೂ ಹೆಗ್ಗಡಳ್ಳಿ ಮಠದ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಕಾರ್ಯಕ್ರಮದ ಪ್ರಯುಕ್ತ ಜ. 15ರಂದು ಶ್ರೀ ಕುಮಾರಲಿಂಗೇಶ್ವರ ಮತ್ತು ದೊಡ್ಡಯ್ಯನ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಯುವುದು ಎಂದು ಆಯೋಜಕರಾದ ನಾಡಿ ಪಟೇಲ್ ಇಂದೂ ಶೇಖರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.-----------------------------------------