ನನಗೆ ಇರೋದೇ 48 ಎಕ್ರೆ ಜಾಗ, ಬೇಕಿದ್ದರೆ ಡಿಕೆಶಿ ಬಂದು ನೋಡ್ಲಿ

| Published : Apr 16 2024, 02:01 AM IST / Updated: Apr 16 2024, 06:56 AM IST

HD Kumaraswamy
ನನಗೆ ಇರೋದೇ 48 ಎಕ್ರೆ ಜಾಗ, ಬೇಕಿದ್ದರೆ ಡಿಕೆಶಿ ಬಂದು ನೋಡ್ಲಿ
Share this Article
  • FB
  • TW
  • Linkdin
  • Email

ಸಾರಾಂಶ

ಕುಮಾರಸ್ವಾಮಿ ತಿರುಗೇಟು ಕೊಟ್ಟು ವಾಸ್ತವಾಂಶವನ್ನು ಜನತೆಯ ಮುಂದೆ ತೆರೆದಿಟ್ಟಿದ್ದಾರೆ.

 ಬೆಂಗಳೂರು :  ‘ಬಿಡದಿ ಬಳಿ ನನ್ನದು 45ರಿಂದ 48 ಎಕರೆ ಜಮೀನು ಇದೆ. ಅದನ್ನು ಸಿನಿಮಾದಲ್ಲಿ ಗಳಿಸಿದ ದುಡ್ಡಿನಲ್ಲಿ ಖರೀದಿಸಿದ್ದು’ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರಿಗೆ ತಿರುಗೇಟು ನೀಡಿದ್ದಾರೆ.

ಸೋಮವಾರ ತುರ್ತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜಕೀಯಕ್ಕೆ ಬರುವುದಕ್ಕೆ ಮೊದಲೇ ನಾನು ಈ ಜಮೀನು ಖರೀದಿ ಮಾಡಿದ್ದೇನೆ. ನಾನು ತೋಟದಲ್ಲಿ ರೆಸಾರ್ಟ್ ಮಾಡಿಲ್ಲ. ಬಂದು ನೋಡಪ್ಪ. ಕಲ್ಲಂಗಡಿ, ಬಾಳೆ, ಕೊಬ್ಬರಿ ಬೆಳೆದಿದ್ದೇನೆ. 

ಎಲ್ಲಾ ವಿಡಿಯೋ ಇದೆಯಪ್ಪ ಎಂದು ಏಕವಚನದಲ್ಲಿಯೇ ಹರಿಹಾಯ್ದರು.ದೇವೇಗೌಡರು ವಿರೋಧ ಪಕ್ಷದಲ್ಲಿ ಇದ್ದಾಗಲೂ ನಿಕ್ಕರ್ ಹಾಕಿಕೊಂಡು ಶನಿವಾರ, ಭಾನುವಾರ ತೋಟದ ಕೆಲಸ ಮಾಡುತ್ತಿದ್ದರು. ಡಿ.ಕೆ.ಶಿವಕುಮಾರ್ ಯಾವ ರೀತಿ ಕಷ್ಟಪಟ್ಟು ಆಸ್ತಿ ಸಂಪಾದನೆ ಮಾಡಿದ್ದಾರೆ? ಕಲ್ಲು ಬಂಡೆ ಕದ್ದು ವಿದೇಶಕ್ಕೆ ಸಾಗಿಸಿರೋದೇ ಅವರ ಕೆಲಸ.

 ಹೇಳಿದರೆ ಆ ವ್ಯಕ್ತಿಯ ಬಗ್ಗೆ ಕಂತೆ ಕಂತೆ ಹೇಳಬಹುದು. ಅವರಿಗೆ ನನ್ನದೇ ಆಪತ್ತು. ಅದಕ್ಕೆ ನನ್ನ ವಿರುದ್ಧ ಈಗ ಮಾತನಾಡುತ್ತಿದ್ದಾರೆ ಎಂದರು.