ಹೃದಯ ಸಂಬಂಧಿ ಸಮಸ್ಯೆಗೆ ಶಸ್ತ್ರಚಿಕಿತ್ಸೆಗೆ ಒಳಪಡಬೇಕಾಗಿರುವ ಹಿನ್ನೆಲೆಯಲ್ಲಿ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಮಂಗಳವಾರ ಚೆನ್ನೈಗೆ ತೆರಳಲಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ಹೃದಯ ಸಂಬಂಧಿ ಸಮಸ್ಯೆಗೆ ಶಸ್ತ್ರಚಿಕಿತ್ಸೆಗೆ ಒಳಪಡಬೇಕಾಗಿರುವ ಹಿನ್ನೆಲೆಯಲ್ಲಿ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಮಂಗಳವಾರ ಚೆನ್ನೈಗೆ ತೆರಳಲಿದ್ದಾರೆ.

ಇದೇ 21ರಂದು ಶಸ್ತ್ರಚಿಕಿತ್ಸೆಗೆ ಒಳಗಾಗಲಿರುವ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಮಂಗಳವಾರ ಚೆನ್ನೈಗೆ ತೆರಳಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಂಗಳವಾರ ಆರೋಗ್ಯ ತಪಾಸಣೆ ನಡೆಸಲಾಗುವುದು. 

ಕೆಲವು ಪರೀಕ್ಷೆ ನಡೆಸಿದ ಬಳಿಕ 21ರಂದು ಶಸ್ತ್ರಚಿಕಿತ್ಸೆ ನಡೆಸಲಾಗುತ್ತದೆ. ಇದೇ 24ರವರೆಗೆ ಆಸ್ಪತ್ರೆಯಲ್ಲಿಯೇ ವಿಶ್ರಾಂತಿ ಪಡೆದುಕೊಳ್ಳಲಿದ್ದಾರೆ. ತದನಂತರ 25ರಂದು ಬೆಂಗಳೂರಿಗೆ ಹಿಂತಿರುಗಲಿದ್ದಾರೆ. 

ಬೆಂಗಳೂರಿಗೆ ಬಂದ ಬಳಿಕ ಕೆಲವು ದಿನಗಳ ಕಾಲ ವಿಶ್ರಾಂತಿ ಪಡೆದು ನಂತರ ಲೋಕಸಭಾ ಚುನಾವಣಾ ಪ್ರಚಾರದಲ್ಲಿ ತೊಡಗಿಸಿಕೊಳ್ಳಲಿದ್ದಾರೆ.

ಆರೋಗ್ಯದ ದೃಷ್ಟಿಯಿಂದ ಕುಮಾರಸ್ವಾಮಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಸಾಧ್ಯತೆ ತೀರಾ ಕಡಿಮೆ ಎನ್ನಲಾಗುತ್ತಿದೆಯಾದರೂ ಶಸ್ತ್ರಚಿಕಿತ್ಸೆ ಬಳಿಕವೇ ಈ ಬಗ್ಗೆ ತೀರ್ಮಾನ ಕೈಗೊಳ್ಳುವ ನಿರೀಕ್ಷೆ ಇದೆ ಎಂದು ಹೇಳಲಾಗಿದೆ.