ಕುಮಾರಸ್ವಾಮಿ, ಸುರೇಶಗೌಡ ಸೌಹಾರ್ದ ಭೇಟಿ

| Published : Dec 29 2023, 01:32 AM IST

ಸಾರಾಂಶ

ತುಮಕೂರು ಗ್ರಾಮಾಂತರ ಶಾಸಕ ಬಿ. ಸುರೇಶ್‌ ಗೌಡ ಅವರು ಮಾಜಿ ಸಿಎಂ ಕುಮಾರಸ್ವಾಮಿಯನ್ನು ಭೇಟಿ ಮಾಡಿದ್ದಾರೆ.

ಕನ್ನಡಪ್ರಭ ವಾರ್ತೆ ತುಮಕೂರು

ಜೆ.ಡಿ.ಎಸ್‌ನ ರಾಜ್ಯ ಘಟಕದ ಅಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರನ್ನು ಬಿಡದಿಯ ಅವರ ತೋಟದ ಮನೆಯಲ್ಲಿ ತುಮಕೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಶಾಸಕ ಬಿ. ಸುರೇಶ್‌ಗೌಡರು ಪಕ್ಷದ ಅನೇಕ ಕಾರ್ಯಕರ್ತರ ಜತೆಗೂಡಿ ಸೌಹಾರ್ದ ಭೇಟಿ ಮಾಡಿ ಮಾತುಕತೆ ನಡೆಸಿದರು.

ಸುಮಾರು 1 ಗಂಟೆ ಕಾಲ ಇವರಿಬ್ಬರೂ ಮಾತುಕತೆ ನಡೆಸಿದರು. ಬಳಿಕ ಸುರೇಶಗೌಡರು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಆತ್ಮೀಯವಾಗಿ ಸನ್ಮಾನಿಸಿದರು. ಮಾಜಿ ಪ್ರಧಾನಿ ದೇವೇಗೌಡರ ನೇತೃತ್ವದಲ್ಲಿ ಕುಮಾರಸ್ವಾಮಿಯವರು ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರ ನೇತೃತ್ವದಲ್ಲಿ ಎನ್‌.ಡಿ.ಎ ಭಾಗವಾಗಲು ನಿರ್ಧರಿಸಿರುವ ಹಿನ್ನೆಲೆಯಲ್ಲಿ ಈ ಭೇಟಿ ಮಾಡಲಾಯಿತು ಎನ್ನಲಾಗಿದೆ.

ಕರ್ನಾಟಕದಲ್ಲಿ ಬಿಜೆಪಿ ಮತ್ತು ಜೆ.ಡಿ.ಎಸ್‌ ಮೈತ್ರಿ ಏರ್ಪಟ್ಟಿರುವುದರಿಂದ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಎಲ್ಲ 28 ಸೀಟುಗಳಲ್ಲಿಯೂ ಈ ಮೈತ್ರಿಕೂಟ ಜಯಭೇರಿ ಬಾರಿಸಲಿದ್ದು ಈ ಮೂಲಕ ಪ್ರಧಾನಿ ಮೋದಿ ಅವರ ಕೈಬಲಪಡಿಸಿ ದೇಶದಲ್ಲಿ ಸುಭದ್ರ ಮತು ಸ್ಥಿರ ಆಡಳಿತಕ್ಕೆ ನೆರವಾಗುತ್ತದೆ ಎಂದು ಸುರೇಶ್‌ ಗೌಡರು ಅಭಿಪ್ರಾಯಪಟ್ಟಿದ್ದಾರೆ.