ಸಾರಾಂಶ
ಬೆಂಗಳೂರು
ಚನ್ನಪಟ್ಟಣ ಉಪಚುನಾವಣೆಯಲ್ಲಿ ನಿಖಿಲ್ ಅವರಿಗೆ ಟಿಕೆಟ್ ಸಿಗುವಂತೆ ಮಾಡುವುದಕ್ಕಾಗಿಯೇ ಎಚ್.ಡಿ.ಕುಮಾರಸ್ವಾಮಿ ಇಷ್ಟೆಲ್ಲ ಆಟವಾಡಿದರು ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ಆರೋಪಿಸಿದರು.
ಸದಾಶಿವನಗರದ ತಮ್ಮ ನಿವಾಸದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಖಿಲ್ ಅವರಿಗೆ ಟಿಕೆಟ್ ನೀಡಬೇಕಾದ ಅನಿವಾರ್ಯತೆಯನ್ನು ಕಾಂಗ್ರೆಸ್ ಸೃಷ್ಟಿ ಮಾಡಿತು ಎಂದು ಕುಮಾರಸ್ವಾಮಿ ಹೇಳುತ್ತಾರೆ.
ಆದರೆ, ಅವರು ನಿಖಿಲ್‌ಗೆ ಟಿಕೆಟ್ ನೀಡಲೆಂದೇ ಇಷ್ಟೆಲ್ಲ ಆಟವಾಡಿದರು. ಕಳೆದ 40 ವರ್ಷಗಳಿಂದ ಕುಮಾರಸ್ವಾಮಿ ಅವರು ತಂತ್ರಗಾರಿಕೆ ಮಾಡಿಕೊಂಡು ಬಂದಿದ್ದು, ನಿಖಿಲ್‌ಗೆ ಟಿಕೆಟ್ ನೀಡಿರುವುದು ಅದರ ಮುಂದುವರಿದ ಭಾಗವಷ್ಟೇ ಎಂದು ಹೇಳಿದರು.ನಿಖಿಲ್ ಕುಮಾರಸ್ವಾಮಿ ಅವರೇ ಚನ್ನಪಟ್ಟಣ ಉಪಚುನಾವಣೆಯಲ್ಲಿ ಅಭ್ಯರ್ಥಿಯಾಗುತ್ತಾರೆ ಎನ್ನುವ ಸತ್ಯ ಎಲ್ಲರಿಗೂ ತಿಳಿದಿತ್ತು. ಆದರೆ, ಬಲವಂತಾಗಿ ಅವರನ್ನು ಚುನಾವಣೆಗೆ ನಿಲ್ಲಿಸಲಾಗುತ್ತಿದೆ ಎಂದು ಹೇಳಲಾಗುತ್ತಿದ್ದು, ಅದೆಲ್ಲವೂ ಸುಳ್ಳು. ಕುಮಾರಸ್ವಾಮಿ ಅವರಿಗೆ ತಮ್ಮ ಪಕ್ಷದ ಕಾರ್ಯಕರ್ತರ ಮೇಲೆ ಪ್ರೀತಿ ಎಷ್ಟಿದೆ ಎಂಬುದು ಈಗ ತಿಳಿಯಿತು ಎಂದರು.