ಸಾರಾಂಶ
ಕುಂದಾಣ: ತಾಲೂಕಿನ ಕುಂದಾಣ ಗ್ರಾಪಂ ಅಧ್ಯಕ್ಷರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಲಿತ ಅಭ್ಯರ್ಥಿ ಎಂ.ವಿಜಯ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಸ್.ಆರ್.ಸುಮಾ ಘೋಷಿಸಿದರು.
ಕುಂದಾಣ: ತಾಲೂಕಿನ ಕುಂದಾಣ ಗ್ರಾಪಂ ಅಧ್ಯಕ್ಷರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಲಿತ ಅಭ್ಯರ್ಥಿ ಎಂ.ವಿಜಯ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಸ್.ಆರ್.ಸುಮಾ ಘೋಷಿಸಿದರು.
ನೂತನ ಅಧ್ಯಕ್ಷೆ ವಿಜಯ ಮಾತನಾಡಿ, ಕುಂದಾಣ ಗ್ರಾಮ ಪಂಚಾಯತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳ ಕುಂದು ಕೊರತೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಎಲ್ಲಾ ಸದಸ್ಯರು ಒಗ್ಗೂಡಿ ಶ್ರಮಿಸಲಾಗುವುದು ಹಾಗೂ ಮುಂದಿನ ದಿನಗಳಲ್ಲಿ ಪಂಚಾಯಿತಿಯ ನೂತನ ಕಟ್ಟಡ ನಿರ್ಮಾಣ ಶೀಘ್ರದಲ್ಲೇ ಪ್ರಾರಂಭಿಸಲಾಗುವುದು ಎಂದರು.ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಯೋಜನಾ ಪ್ರಾಧಿಕಾರ ಅಧ್ಯಕ್ಷ ವಿ.ಶಾಂತಕುಮಾರ್ ನೂತನ ಅಧ್ಯಕ್ಷೆ ವಿಜಯ ಅವರನ್ನು ಅಭಿನಂದಿಸಿ ಮಾತನಾಡಿ, ಎಲ್ಲಾ ಸದಸ್ಯರನ್ನು ವಿಶ್ವಾಸದಲ್ಲಿಟ್ಟುಕೊಂಡು ಪಂಚಾಯತಿ ವ್ಯಾಪ್ತಿಯ ಪ್ರತಿಯೊಂದು ಗ್ರಾಮದ ಸ್ವಚ್ಛತೆ ಹಾಗೂ ಮೂಲಭೂತ ಸೌಕರ್ಯಗಳಿಗೆ ಆದ್ಯತೆ ನೀಡಬೇಕು ಎಂದು ಹೇಳಿದರು.
ಈ ವೇಳೆ ಉಪಾಧ್ಯಕ್ಷೆ ನೀಲಮ್ಮ, ಸದಸ್ಯರಾದ ಕೆ.ವಿ.ಸ್ವಾಮಿ, ನೇತ್ರಾವತಿ, ಪ್ರವೀಣ್ ಕುಮಾರ್, ರಾಮಚಂದ್ರ, ವೀಣಾ ರಾಣಿ, ಸುಬ್ರಹ್ಮಣಿ, ಮುನಿಯಪ್ಪ, ವರಲಕ್ಷ್ಮಮ್ಮ, ವೆಂಕಟರಮಣಸ್ವಾಮಿ, ಮಾಲಾ, ಶೋಭಾ, ಕ್ಯಾತೇಗೌಡ, ನಾರಾಯಣಸ್ವಾಮಿ ಮುಖಂಡರಾದ ಚೀಮನಹಳ್ಳಿ ದೇವರಾಜ್, ಬಿ.ವಿ.ಸ್ವಾಮಿ, ಪಿಡಿಒ ಕುಮಾರ್, ಸಿಬ್ಬಂದಿ ವರ್ಗ ಮತ್ತು ಗ್ರಾಮಸ್ಥರು ಹಾಜರಿದ್ದರು.(ಫೋಟೊ ಕ್ಯಾಪ್ಷನ್)
ಕುಂದಾಣ ಗ್ರಾಪಂ ಅಧ್ಯಕ್ಷರಾಗಿ ಚುನಾಯಿತರಾದ ವಿಜಯಾ ಅವರನ್ನು ಮುಖಂಡರು ಅಭಿನಂದಿಸಿದರು.