ಕುಂದಾಪುರ: ಎಂಐಟಿಯಲ್ಲಿ ಎಂಜಿನಿಯರ್ಸ್ ದಿನಾಚರಣೆ

| Published : Sep 17 2025, 01:08 AM IST

ಕುಂದಾಪುರ: ಎಂಐಟಿಯಲ್ಲಿ ಎಂಜಿನಿಯರ್ಸ್ ದಿನಾಚರಣೆ
Share this Article
  • FB
  • TW
  • Linkdin
  • Email

ಸಾರಾಂಶ

ಕಾಲೇಜಿನ ಅಧ್ಯಕ್ಷ ಸಿದ್ದಾರ್ಥ ಜೆ. ಶೆಟ್ಟಿ, ಮಹಾನ್ ಎಂಜಿನಿಯರ್ ಸರ್ ಎಂ. ವಿಶ್ವೇಶ್ವರಯ್ಯ ಅವರ ಮೂರ್ತಿಗೆ ಮಾಲಾರ್ಪಣೆ ಮಾಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಎಲ್ಲರಿಗೂ ಶುಭ ಹಾರೈಸಿದರು.

ಕನ್ನಡಪ್ರಭ ವಾರ್ತೆ ಕುಂದಾಪುರ

ಇಲ್ಲಿನ ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯದಲ್ಲಿ ಎಂಜಿನಿಯರ್ಸ್ ದಿನಾಚರಣೆ ನಡೆಯಿತು.

ಕಾಲೇಜಿನ ಅಧ್ಯಕ್ಷ ಸಿದ್ದಾರ್ಥ ಜೆ. ಶೆಟ್ಟಿ, ಮಹಾನ್ ಎಂಜಿನಿಯರ್ ಸರ್ ಎಂ. ವಿಶ್ವೇಶ್ವರಯ್ಯ ಅವರ ಮೂರ್ತಿಗೆ ಮಾಲಾರ್ಪಣೆ ಮಾಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಎಲ್ಲರಿಗೂ ಶುಭ ಹಾರೈಸಿದರು.ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಕಾಲೇಜಿನ ಉಪಪ್ರಾಂಶುಪಾಲ ಡಾ.ಮೆಲ್ವಿನ್ ಡಿಸೋಜ ಮಾತನಾಡಿ, ಸರ್ ವಿಶ್ವೇಶ್ವರಯ್ಯ ಅವರ ಸ್ಮರಣಾರ್ಥ ಎಂಜಿನಿಯರ್ ದಿನವನ್ನು ಆಚರಿಸಲಾಗುತ್ತಿದೆ. ವಿಶ್ವೇಶ್ವರಯ್ಯ ಅವರ ಜೀವನ ಶೈಲಿಯನ್ನು ನಾವೆಲ್ಲರು ಅಳವಡಿಸಿಕೊಂಡು ತಾಂತ್ರಿಕ ಜ್ಞಾನದ ಜೊತೆಗೆ ಉತ್ತಮ ಮಾನವರಾಗಬೇಕು ಎಂದು ಹೇಳಿದರು.ಕಾಲೇಜಿನ ಬ್ರಾಂಡ್ ಬಿಲ್ಡಿಂಗ್ ಡೈರೆಕ್ಟರ್ ಹಾಗೂ ಪ್ರಾಂಶುಪಾಲ ಡಾ.ರಾಮಕೃಷ್ಣ ಹೆಗ್ಡೆ ಮಾತನಾಡಿ, ವಿಶ್ವೇಶ್ವರಯ್ಯ ನಡೆದು ಬಂದ ಹಾದಿ ನಮಗೆಲ್ಲ ಮಾದರಿ. ಅವರಂತೆ ಕ್ರಿಯಾತ್ಮಕವಾಗಿ ಯೋಚಿಸಿ ಸಾಧನೆಗೈಯಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.ಎಂಜಿನಿಯರ್ಸ್ ದಿನಾಚರಣೆ ಪ್ರಯುಕ್ತ ನಡೆಸಿದ ‘ಭಾರತದ ಎಂಜಿನಿಯರಿಂಗ್ ಅದ್ಭುತಗಳು’ ವಿಷಯದ ಮೇಲೆ ನಡೆದ ಸ್ಪರ್ಧಾ ವಿಜೇತರಿಗೆ ನಗದು ಬಹುಮಾನ ನೀಡಲಾಯಿತು.ಕಾರ್ಯಕ್ರಮದ ಮುಖ್ಯ ಆಯೋಜಕರಾದ ಡಾಟಾಸೈನ್ಸ್ ವಿಭಾಗದ ಮುಖ್ಯಸ್ಥ ಕಾರ್ತಿಕೇಯನ್ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿನಿ ಶ್ರೇಯಾ ಉಪಾಧ್ಯಾಯ ಸ್ವಾಗತಿಸಿದರು. ದರ್ಶನ್ ವಂದಿಸಿದರು. ಕಾರ್ಯಕ್ರಮದಲ್ಲಿ ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು‌.