ಸಾರಾಂಶ
ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯದಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.
ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯದಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.
ಮುಖ್ಯ ಅತಿಥಿಗಳಾಗಿ ಗವರ್ನ್‌ಮೆಂಟ್ ಟೆಕ್ ಕೆಪಿಎಂಜಿ ಇಂಡಿಯಾದ ಸಹಾಯಕ ನಿರ್ದೇಶಕ ಡಾ. ರತನ್ ಮುರಳೀದರ್ ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು, ಒಬ್ಬ ವಿದ್ಯಾರ್ಥಿಯಾಗಿ, ನಿಮ್ಮ ಸುತ್ತಲಿನ ಸಮಸ್ಯೆಗಳನ್ನು ಗುರುತಿಸಿ, ಅವುಗಳನ್ನು ಪರಿಹರಿಸಲು ನಿಮ್ಮ ಕೌಶಲ್ಯಗಳನ್ನು ಬಳಸಿಕೊಳ್ಳಬೇಕು, ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳು ನಿರಂತರ ಪ್ರಯತ್ನ ಪಡುತ್ತಲೇ ಇರಬೇಕು ಎಂದು ಪ್ರೋತ್ಸಾಹಿಸಿದರು.ಕಾಲೇಜಿನ ವಿವಿಧ ವಿಭಾಗದ ಡೀನ್ ಗಳು ಮಾತಾಡಿ ಕಾಲೇಜಿನಲ್ಲಿ ಲಭ್ಯವಿರುವ ಸೌಲಭ್ಯಗಳು , ಪ್ಲೇಸ್ಮೆಂಟ್ ವಿಭಾಗದ ತರಭೇತಿ ಇನ್ನಿತರ ವಿಷಯಗಳ ಬಗ್ಗೆ ವಿವರಣೆ ನೀಡಿದರು. ಅಧ್ಯಕ್ಷತೆ ವಹಿಸಿದ ಕಾಲೇಜಿನ ಬ್ರ್ಯಾಂಡ್ ಬಿಲ್ಡಿಂಗ್ ವಿಭಾಗದ ನಿರ್ದೇಶಕ ಡಾ ರಾಮಕೃಷ್ಣ ಹೆಗಡೆ ಮಾತನಾಡಿ, ವಿದ್ಯಾರ್ಥಿಗಳು ಈಗ ಕೇವಲ ವ್ಯಕ್ತಿಗಳಲ್ಲ, ನಮ್ಮ ಸಂಸ್ಥೆಯ ಪ್ರತಿನಿಧಿಗಳು ಎನ್ನುತ್ತ ತಾವು ಶಿಸ್ತು ಕಾಪಾಡಿಕೊಳ್ಳುವುದು, ಬಲವಾದ ವೈಯಕ್ತಿಕ ಬ್ರ್ಯಾಂಡ್ ಅಭಿವೃದ್ಧಿಪಡಿಸುವುದು ಮತ್ತು ನಾಯಕತ್ವ, ಆತ್ಮವಿಶ್ವಾಸ, ಕೌಶಲ್ಯಗಳ ಮೇಲೆ ಕೆಲಸ ಮಾಡುವುದರ ಪ್ರಾಮುಖ್ಯತೆಯ ಬಗ್ಗೆ ಅವರು ಮಾತನಾಡಿದರು.ಪೋಷಕರು ಹಾಗೂ ವಿದ್ಯಾರ್ಥಿಗಳಿಗೆ ತಮ್ಮ ಅಭಿಪ್ರಾಯ ಹಂಚಿಕೊಳ್ಳಲು ಅವಕಾಶ ನೀಡಲಾಯಿತು. ವಿದ್ಯಾರ್ಥಿನಿ ಇಶ್ರತ್ ಹಾಗೂ ಮಿನಾಜ್ ನಿರೂಪಿಸಿದರು. ವಿದ್ಯಾರ್ಥಿನಿ ಸುಪ್ರೀತ ಸ್ವಾಗತಿಸಿ, ಅನಿಶ್ ಪೂಜಾರಿ ವಂದಿಸಿದರು.ಕಾರ್ಯಕ್ರಮದಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳು, ಪೋಷಕರು, ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು. ಒಂದು ವಾರಗಳ ಇಂಡಕ್ಷನ್ ಕಾರ್ಯಕ್ರಮದಲ್ಲಿ ವಿಶ್ವವಿದ್ಯಾಲಯದ ನೀತಿ, ಅನ್ವೇಷಣೆ, ತಾಂತ್ರಿಕ, ಕಲೆ, ಆಂಗ್ಲ ಭಾಷೆ, ಹೀಗೆ ವಿವಿಧ ವಿಭಾಗದಲ್ಲಿ ಅನುಭವಿ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ನೀಡಲಾಯಿತು.
;Resize=(128,128))
;Resize=(128,128))
;Resize=(128,128))
;Resize=(128,128))