ಸಾರಾಂಶ
ಕುಂದಾಪುರ ಗ್ರಾಮಾಂತರ ಠಾಣೆಯ ಉಪನಿರೀಕ್ಷಕ ಭೀಮಶಂಕರ್ ಸಿನ್ನೂರ, ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ನೀಡಿದರು. ಈ ಸಂಬಂಧ ಕಾನೂನು ಮತ್ತು ಶಿಕ್ಷೆಗಳನ್ನು ವಿವರಿಸಿದರು.
ಕನ್ನಡಪ್ರಭ ವಾರ್ತೆ ಕುಂದಾಪುರ
ಇಲ್ಲಿನ ಮೂಡ್ಲಕಟ್ಟೆ ಕಾಲೇಜ್ ಆಫ್ ನರ್ಸಿಂಗ್, ಐಎಂಜೆ ಅಲೈಡ್ ಹೆಲ್ತ್ ಸೈನ್ಸಸ್ ಕಾಲೇಜು, ಮೂಡ್ಲಕಟ್ಟೆ ಪ್ಯಾರಾಮೆಡಿಕಲ್ ಸೈನ್ಸಸ್ ಇನ್‌ಸ್ಟಿಟ್ಯೂಟ್ ಮತ್ತು ಮೂಡ್ಲಕಟ್ಟೆ ಕಾಲೇಜ್ ಆಫ್ ಫಿಸಿಸೋಥೆರಪಿ ಸಂಯುಕ್ತ ಆಶ್ರಯದಲ್ಲಿ ಮಾದಕ ದ್ರವ್ಯ ಜಾಗೃತಿ ಮತ್ತು ಪ್ರತಿಜ್ಞೆ ಸ್ವೀಕಾರ ಕಾರ್ಯಕ್ರಮ ಆಯೋಜಿಸಲಾಯಿತು.ಮುಖ್ಯ ಅತಿಥಿಯಾದ ಕುಂದಾಪುರ ಗ್ರಾಮಾಂತರ ಠಾಣೆಯ ಉಪನಿರೀಕ್ಷಕ ಭೀಮಶಂಕರ್ ಸಿನ್ನೂರ, ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ನೀಡಿದರು. ಈ ಸಂಬಂಧ ಕಾನೂನು ಮತ್ತು ಶಿಕ್ಷೆಗಳನ್ನು ವಿವರಿಸಿದರು. ನಂತರ ಅವರನ್ನು ಮೂಡ್ಲಕಟ್ಟೆ ಶಿಕ್ಷಣ ಸಂಸ್ಥೆಗಳ ಪರವಾಗಿ ಗೌರವಿಸಲಾಯಿತು.ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲೆ ಜೆನ್ನಿಫರ್ ಫ್ರೀಡಾ ಮೆನೆಜಸ್ ಕಾರ್ಯಕ್ರಮ ಉದ್ಘಾಟಿಸಿದರು. ಕಾಲೇಜಿನಲ್ಲಿ ಆ್ಯಂಟಿ ಡ್ರಗ್ ಕಮಿಟಿಯ ರಚನೆ ಮತ್ತು ಅದರ ಪ್ರಾಮುಖ್ಯತೆಯನ್ನು ತಿಳಿಸಿದರು.ಐಎಂಜೆ ಅಲೈಡ್ ಹೆಲ್ತ್ ಸೈನ್ಸಸ್ ಇನ್‌ಸ್ಟಿಟ್ಯೂಟ್‌ನ ಡೀನ್ ಡಾ. ಪದ್ಮಚರಣ ಸ್ವೈನ್, ಐಎಂಜೆ ಅಲೈಡ್ ಹೆಲ್ತ್ ಸೈನ್ಸಸ್ ಕಾಲೇಜು ಹಾಗೂ ಮೂಡ್ಲಕಟ್ಟೆ ಪ್ಯಾರಾಮೆಡಿಕಲ್ ಇನ್‌ಸ್ಟಿಟ್ಯೂಟ್‌ನ ಉಪಪ್ರಾಂಶುಪಾಲೆ ಸೌಜನ್ಯಾ ಉಪಸ್ಥಿತರಿದ್ದರು. ನರ್ಸಿಂಗ್ ಉಪಪ್ರಾಂಶುಪಾಲೆ ರೂಪಶ್ರೀ ಕೆ.ಎಸ್., ಪ್ರತಿಜ್ಞಾ ವಿಧಿಯನ್ನು ನೀಡಿದರು. ಉಪನ್ಯಾಸಕಿಯರಾದ ಸುಷ್ಮಾ ಕಾರ್ಯಕ್ರಮ ನಿರೂಪಿಸಿದರು. ಕೀರ್ತನ ಸ್ವಾಗತ ಕೋರಿದರು ಹಾಗೂ ದೀಪಿಕಾ ವಂದಿಸಿದರು.