ಕುಂದಾಪುರ: ಎಂಸಿಎನ್‌ನಲ್ಲಿ ಒತ್ತಡ ನಿರ್ವಹಣೆ ಕಾರ್ಯಾಗಾರ

| Published : Sep 29 2025, 03:02 AM IST

ಸಾರಾಂಶ

ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನ ಸಿಬ್ಬಂದಿ ಅಭಿವೃದ್ಧಿ ಸಮಿತಿ ವತಿಯಿಂದ ‘ಕಾರ್ಯಕ್ಷೇತ್ರದಲ್ಲಿ ಒತ್ತಡ ನಿವಾರಣೆ ಮತ್ತು ಕೆಲಸ-ಜೀವನ ಸಮತೋಲನ’ ಎಂಬ ವಿಷಯದ ಮೇಲೆ ವಿಶೇಷ ಅತಿಥಿ ಉಪನ್ಯಾಸ ಕಾರ್ಯಕ್ರಮವನ್ನು ಕಾಲೇಜು ಆವರಣದಲ್ಲಿ ಆಯೋಜಿಸಲಾಯಿತು.

ಕನ್ನಡಪ್ರಭ ವಾರ್ತೆ ಕುಂದಾಪುರ

ಇಲ್ಲಿನ ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನ ಸಿಬ್ಬಂದಿ ಅಭಿವೃದ್ಧಿ ಸಮಿತಿ ವತಿಯಿಂದ ‘ಕಾರ್ಯಕ್ಷೇತ್ರದಲ್ಲಿ ಒತ್ತಡ ನಿವಾರಣೆ ಮತ್ತು ಕೆಲಸ-ಜೀವನ ಸಮತೋಲನ’ ಎಂಬ ವಿಷಯದ ಮೇಲೆ ವಿಶೇಷ ಅತಿಥಿ ಉಪನ್ಯಾಸ ಕಾರ್ಯಕ್ರಮವನ್ನು ಕಾಲೇಜು ಆವರಣದಲ್ಲಿ ಆಯೋಜಿಸಲಾಯಿತು.ಈ ಕಾರ್ಯಕ್ರಮವು ಸಿಬ್ಬಂದಿ ಉದ್ಯೋಗ ಸಂಬಂಧಿತ ಒತ್ತಡವನ್ನು ಸಮರ್ಥವಾಗಿ ನಿಭಾಯಿಸಿ, ವೈಯಕ್ತಿಕ ಮತ್ತು ವೃತ್ತಿಜೀವನದ ನಡುವೆ ಸಮತೋಲನ ಸಾಧಿಸಲು ಸಹಾಯ ಮಾಡುವ ಉದ್ದೇಶವನ್ನು ಹೊಂದಿತ್ತು.ಕಾರ್ಯಕ್ರಮಕ್ಕೆ ಉಡುಪಿ ಡಾ. ಎ.ವಿ. ಬಾಳಿಗಾ ಸ್ಮಾರಕ ಆಸ್ಪತ್ರೆಯ ಆಡಳಿತಾಧಿಕಾರಿ ಸೌಜನ್ಯ ಶೆಟ್ಟಿ, ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು. ಅವರು ಉದ್ಯೋಗ ಸ್ಥಳದಲ್ಲಿ ಒತ್ತಡವನ್ನು ಕಡಿಮೆ ಮಾಡಲು ಸ್ವಯಂ ಆರೈಕೆ, ಸಮಯ ನಿರ್ವಹಣೆ ಮತ್ತು ಸಕಾರಾತ್ಮಕ ಕೆಲಸದ ವಾತಾವರಣದ ಮಹತ್ವವನ್ನು ಒತ್ತಿ ಹೇಳಿದರು.ಇದೇ ಸಂದರ್ಭ ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲೆ ಪ್ರೊ. ಜೆನ್ನಿಫರ್ ಫ್ರೀಡಾ ಮಿನೇಜಸ್, ಉಪಪ್ರಾಂಶುಪಾಲೆ ರೂಪಶ್ರೀ ಕೆ.ಎಸ್., ಐಎಂಜೆ ಅಲೈಡ್ ಹೆಲ್ತ್ ಸೈನ್ಸಸ್‌ ಹಾಗೂ ಮೂಡಲಕಟ್ಟೆ ಕಾಲೇಜ್ ಆಫ್ ಫಿಸಿಯೋಥೆರಪಿ ಡೀನ್ ಡಾ. ಪ್ರೊ. ಪದ್ಮಚರಣ ಸ್ವೈನ್ ಹಾಗೂ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಹಾಜರಿದ್ದರು.ಸಂಸ್ಥೆಯ ಸಿಬ್ಬಂದಿ ವರ್ಗವು ಸಕ್ರಿಯವಾಗಿ ಭಾಗವಹಿಸಿ ಕಾರ್ಯಕ್ರಮವನ್ನು ಪರಿಣಾಮಕಾರಿಗೊಳಿಸಿದರು. ಉಪನ್ಯಾಸಕಿ ಕೀರ್ತನಾ ಕಾರ್ಯಕ್ರಮ ನಿರೂಪಿಸಿದರು.