ಸಾರಾಂಶ
ಭಾನುವಾರ ಜಿಲ್ಲಾ ಕೃಷಿ ಇಲಾಖೆ ವತಿಯಿಂದ ಕೋಟೇಶ್ವರದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಕುಂದಾಪುರ ರೈತ ಸಂಪರ್ಕ ಕೇಂದ್ರವನ್ನು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಉದ್ಘಾಟಿಸಿದರು.
ಕೋಟೇಶ್ವರದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಕುಂದಾಪುರ ರೈತ ಸಂಪರ್ಕ ಕೇಂದ್ರ ಉದ್ಘಾಟನೆ
ಕನ್ನಡಪ್ರಭ ವಾರ್ತೆ ಕುಂದಾಪುರರೈತರು ಕೃಷಿಯಲ್ಲಿ ಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡರೆ ಹೆಚ್ಚು ಆದಾಯ ಗಳಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಭಾನುವಾರ ಜಿಲ್ಲಾ ಕೃಷಿ ಇಲಾಖೆ ವತಿಯಿಂದ ಇಲ್ಲಿನ ಕೋಟೇಶ್ವರದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಕುಂದಾಪುರ ರೈತ ಸಂಪರ್ಕ ಕೇಂದ್ರ ಉದ್ಘಾಟಿಸಿ ಮಾತನಾಡಿದ ಅವರು, ರೈತರು ಕೃಷಿಯಲ್ಲಿ ಆಧುನಿಕರಣ ಕಂಡುಕೊಳ್ಳಬೇಕು, ರೈತರು ಸುಖಿಯಾಗಿದ್ದಾಗ ಮಾತ್ರ ದೇಶ ಅಭಿವೃದ್ಧಿಯಾಗುತ್ತದೆ ಎಂದರು. ಸರ್ಕಾರಗಳು ಬರುತ್ತವೆ, ಹೋಗುತ್ತವೆ. ರೈತರ ಕೃಷಿ ಚಟುವಟಿಕೆ ನಿರಂತರವಾಗಿರುತ್ತದೆ. ರೈತ ನಷ್ಟದಿಂದ ಸುಮ್ಮನೆ ಕುಳಿತರೆ ನಾವೆಲ್ಲರೂ ಉಪವಾಸ ಕೂರಬೇಕಾಗುತ್ತದೆ. ಆದ್ದರಿಂದ ಕೃಷಿ ಚಟುವಟಿಕೆ, ಕೃಷಿ ಸಲಕರಣೆಗಳು, ಸಬ್ಸಿಡಿ, ಸರ್ಕಾರದ ಯೋಜನೆಗಳನ್ನು ರೈತರ ಮನೆ ಬಾಗಿಲಿಗೆ ತಲುಪಿಸಬೇಕು, ಅಧಿಕಾರಿಗಳು ರೈತರು ಹಾಗೂ ಸರ್ಕಾರದ ಮಧ್ಯೆ ಕೊಂಡಿಯಾಗಿ ಕೆಲಸ ಮಾಡಬೇಕು ಎಂದು ಸಚಿವೆ ಹೇಳಿದರು.ಕಾರ್ಯಕ್ರಮದಲ್ಲಿ ಕುಂದಾಪುರ ಕ್ಷೇತ್ರದ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಜಿಲ್ಲಾ ಗ್ಯಾರಂಟಿ ಸಮಿತಿ ಉಪಾಧ್ಯಕ್ಷ ದಿನೇಶ್ ಹೆಗಡೆ, ಜಿಲ್ಲಾ ಕೆಡಿಪಿ ಸದಸ್ಯರಾದ ಪ್ರಸನ್ನ ಕುಮಾರ್ ಶೆಟ್ಟಿ, ಹರಿ ಪ್ರಸಾದ್ ಶೆಟ್ಟಿ, ಶಿವರಾಮ ಶೆಟ್ಟಿ, ವಿಕಾಸ ಹೆಗಡೆ, ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಜಿಲ್ಲಾಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಅರುಣ್, ಜಿಲ್ಲಾ ಪಂಚಾಯತ್ ಸಿಇಒ ಪ್ರತೀಕ್ ಬಾಯಲ್, ಕೃಷಿ ಇಲಾಖೆಯ ಅಧಿಕಾರಿಗಳು ಇದ್ದರು.................
ಜನರ ಆಶೀರ್ವಾದಿಂದ ಬದುಕುಳಿದೆ ಇತ್ತೀಚೆಗೆ ಅಪಘಾತದಿಂದಾಗಿ ನಾನು ವಾಪಸ್ ಬರುತ್ತೀನಿ ಅಂತ ಅಂದುಕೊಂಡಿರಲಿಲ್ಲ. ಆ ದೇವರ, ಜನರ ಆಶೀರ್ವಾದಿಂದ ಬದುಕುಳಿದು, ನಿಮ್ಮ ಸೇವೆಗೆ ವಾಪಸ್ ಬಂದಿರುವೆ. ದೇವರು ದೊಡ್ಡವನು ಎನ್ನುತ್ತಾ ಸಚಿವರು ಗದ್ಗದಿತರಾದರು.