ಉಡುಪಿ: ಪತ್ರಕರ್ತನ ಮೇಲೆ ಹಲ್ಲೆ ನಡೆಸಿದ ಕುಂದಾಪುರ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಸರ್ಜನ್ನ್ನು ಮತ್ತೆ ಕುಂದಾಪುರ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಮರು ನಿಯೋಜಿಸಿರುವ ಆದೇಶ ಮರುಪರಿಶೀಲಿಸಿ, ಬೇರೆಡೆಗೆ ವರ್ಗಾಯಿಸುವಂತೆ ಆಗ್ರಹಿಸಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನಿಯೋಗ ಸೋಮವಾರ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್ ಹಾಗೂ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರಿಗೆ ಮನವಿ ಸಲ್ಲಿಸಿತು.ಈ ವೈದ್ಯರ ವಿರುದ್ಧ ಭ್ರಷ್ಟಾಚಾರದ ಆರೋಪಕ್ಕೆ ಸಂಬಂಧಿಸಿದ ವರದಿ ಪ್ರಕಟಿಸಿದ ಕಾರಣಕ್ಕೆ ‘ಕನ್ನಡಪ್ರಭ’ ಪತ್ರಿಕೆಯ ಕುಂದಾಪುರ ತಾಲೂಕು ವರದಿಗಾರ ಹಾಗೂ ಸಂಘದ ಸದಸ್ಯ ಶ್ರೀಕಾಂತ ಹೆಮ್ಮಾಡಿ ಮೇಲೆ ಸಾರ್ವಜನಿಕ ಸ್ಥಳದಲ್ಲಿ ವೈದ್ಯರು ಹಲ್ಲೆ ನಡೆಸಿದ್ದರು. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣದ ತನಿಖೆ ಪೂರ್ಣಗೊಂಡು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಕೂಡ ಸಲ್ಲಿಕೆಯಾಗಿದೆ.ಅಲ್ಲದೆ ಆರೋಗ್ಯ ಇಲಾಖೆಯು ವೈದ್ಯರನ್ನು ಅಮಾನತುಗೊಳಿಸಿ, ಗದಗ ಜಿಲ್ಲೆಗೆ ವರ್ಗಾವಣೆಗೊಳಿಸಲಾಗಿತ್ತು. ಆದರೆ ಕೇವಲ ಎರಡು ತಿಂಗಳಲ್ಲಿ ವೈದ್ಯರನ್ನು ಮತ್ತೆ ಕುಂದಾಪುರ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಶಸ್ತ್ರಚಿಕಿತ್ಸಕರ ಹುದ್ದೆಗೆ ನಿಯೋಜಿಸಿರುವುದು ಖಂಡನೀಯ. ನ್ಯಾಯಾಂಗ ಪ್ರಕ್ರಿಯೆ ಹಾಗೂ ಪತ್ರಕರ್ತರ ಸುರಕ್ಷತೆಯ ದೃಷ್ಟಿಯಿಂದ ಅವರನ್ನು ಕುಂದಾಪುರ ತಾಲೂಕು ಸಾರ್ವಜನಿಕ ಆಸ್ಪತ್ರೆಯಿಂದ ವರ್ಗಾವಣೆ ಮಾಡುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ.
ಮನವಿಯನ್ನು ಸ್ವೀಕರಿಸಿದ ಸಚಿವರು, ಸ್ಥಳದಲ್ಲಿದ್ದ ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಬಸವರಾಜ ಹುಬ್ಬಳ್ಳಿ ಅವರಿಗೆ ಈ ಬಗ್ಗೆ ಕ್ರಮಕೈಗೊಳ್ಳುವಂತೆ ಸೂಚನೆ ನೀಡಿದರು.ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ, ರಾಜ್ಯ ಸಮಿತಿ ಸದಸ್ಯ ಆಸ್ಟ್ರೋ ಮೋಹನ್, ಸಮಿತಿ ಸದಸ್ಯರಾದ ಅಜಿತ್ ಆರಾಡಿ, ಪ್ರಮೋದ್ ಸುವರ್ಣ ಮೊದಲಾದವರು ಉಪಸ್ಥಿತರಿದ್ದರು.ವೈದ್ಯರ ವರ್ಗಾವಣೆ ಆಗ್ರಹಿಸಿ ಸಚಿವರಿಗೆ ಪತ್ರಕರ್ತರ ಮನವಿ
ಪತ್ರಕರ್ತನ ಮೇಲೆ ಹಲ್ಲೆ ನಡೆಸಿದ ಕುಂದಾಪುರ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಸರ್ಜನ್ನ್ನು ಮತ್ತೆ ಕುಂದಾಪುರ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಮರು ನಿಯೋಜಿಸಿರುವ ಆದೇಶ ಮರುಪರಿಶೀಲಿಸಿ, ಬೇರೆಡೆಗೆ ವರ್ಗಾಯಿಸುವಂತೆ ಆಗ್ರಹಿಸಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನಿಯೋಗ ಸೋಮವಾರ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್ ಹಾಗೂ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರಿಗೆ ಮನವಿ ಸಲ್ಲಿಸಿತು.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.
