ಮೂಡ್ಲಕಟ್ಟೆ ಕಾಲೇಜ್ ಆಫ್ ಫಿಸಿಯೋಥೆರಪಿ, ಐಎಂಜೆ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ಹಾಗೂ ಮೂಡ್ಲಕಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಪ್ಯಾರಾಮೆಡಿಕಲ್ ಸೈನ್ಸಸ್‌ಗಳ ಸಹಯೋಗದಲ್ಲಿ ಇನ್ನೋಹೆಲ್ತ್ ಕೇರ್ ವಿಚಾರಸಂಕಿರಣ

ಕುಂದಾಪುರ: ಮೂಡ್ಲಕಟ್ಟೆ ಕಾಲೇಜ್ ಆಫ್ ಫಿಸಿಯೋಥೆರಪಿ, ಐಎಂಜೆ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ಹಾಗೂ ಮೂಡ್ಲಕಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಪ್ಯಾರಾಮೆಡಿಕಲ್ ಸೈನ್ಸಸ್‌ಗಳ ಸಹಯೋಗದಲ್ಲಿ ಇನ್ನೋಹೆಲ್ತ್ ಕೇರ್ ವಿಚಾರಸಂಕಿರಣ ಆಯೋಜಿಸಲಾಯಿತು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದ ಉದಯಕುಮಾರ್ ಶೆಟ್ಟಿ ಅವರು ಶಿಸ್ತಿನ ಮಹತ್ವ, ಆರೋಗ್ಯಕರ ಜೀವನಶೈಲಿ ಮತ್ತು ಆಧುನಿಕ ಆರೋಗ್ಯ ಸಮಸ್ಯೆಗಳ ಕುರಿತು ಮಾತನಾಡಿದರು. ಸಂಸ್ಥೆಯ ಬ್ರ್ಯಾಂಡ್ ಬಿಲ್ಡಿಂಗ್ ಡೈರೆಕ್ಟರ್ ಡಾ. ರಾಮಕೃಷ್ಣ ಹೆಗಡೆ ಮಾತನಾಡಿ, ಇಂತಹ ಸೆಮಿನಾರ್‌ಗಳು ವೃತ್ತಿ ಜೀವನಕ್ಕೆ ಸಹಕಾರಿಯಾಗುತ್ತವೆ. ಮತ್ತು ಆರೋಗ್ಯ ಕ್ಷೇತ್ರದಲ್ಲಿ ಭವಿಷ್ಯದ ಉದ್ಯೋಗಾವಕಾಶಗಳಿಗೆ ವಿದ್ಯಾರ್ಥಿಗಳನ್ನು ಸಿದ್ಧಗೊಳಿಸುತ್ತವೆ ಎಂದರು. ವಿದ್ಯಾರ್ಥಿಗಳು ಇಂತಹ ಶೈಕ್ಷಣಿಕ ಕಾರ್ಯಕ್ರಮಗಳನ್ನು ತಮ್ಮ ಜ್ಞಾನ ಮತ್ತು ಆತ್ಮವಿಶ್ವಾಸವನ್ನು ಹೆಚ್ಚಿಸಲು ಬಳಸಿಕೊಳ್ಳಬೇಕು ಎಂದರು. ಐಎಂಜೆ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್‌ ಉಪಪ್ರಾಚಾರ್ಯರಾದ ಸೌಜನ್ಯ ಸ್ವಾಗತ ಭಾಷಣ ಮಾಡಿದರು. ಮುಖ್ಯ ಅತಿಥಿಯನ್ನು ಉಪನ್ಯಾಸಕಿ ಅರ್ಪಿತಾ ಪರಿಚಯಿಸಿದರು. ಪ್ರಥಮ ವರ್ಷದ ಡಿಪ್ಲೊಮಾ ವಿದ್ಯಾರ್ಥಿನಿ ತಸ್ಮಿಯಾ ಬಾನು ನಿರ್ವಹಿಸಿದರು. ಪ್ರಥಮ ವರ್ಷದ ಎ ಎಚ್ ಎಸ್ ವಿದ್ಯಾರ್ಥಿನಿ ಶ್ವೇತಾ ವಂದಿಸಿದರು. ಐಎಂಜೆ ಅಲೈಡ್ ಹೆಲ್ತ್ ಸೈನ್ಸಸ್ ಮತ್ತು ಪ್ಯಾರಾಮೆಡಿಕಲ್ ಸೈನ್ಸಸ್ ಸಂಸ್ಥೆಗಳ ಪ್ರಾಚಾರ್ಯ ಪ್ರೊ. ಹೇಮಲತಾ ಅವರು ಹಾಜರಿದ್ದು, ಸೆಮಿನಾರ್‌ಗೆ ತಮ್ಮ ಬೆಂಬಲ ವ್ಯಕ್ತಪಡಿಸಿದರು. ಸುಮಾರು 30 ವಿದ್ಯಾರ್ಥಿಗಳು ಈ ಸೆಮಿನಾರ್ ನಲ್ಲಿ ತಮ್ಮ ಆಯ್ದ ವಿಷಯಗಳನ್ನು ಮಂಡಿಸಿದರು