ವಿಶ್ವ ಛಾಯಾಗ್ರಹಣ ಸಪ್ತಾಹದ ಅಂಗವಾಗಿ ಇಲ್ಲಿನ ಮೂಡ್ಲಕಟ್ಟೆಯ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯ (ಐಎಂಜೆಐಎಸ್‌ಸಿ) ಛಾಯಾಗ್ರಹಣ ಮತ್ತು ಡಿಜಿಟಲ್ ಕ್ಲಬ್ ವತಿಯಿಂದ ಡಿಜಿಟಲ್ ಮೀಡಿಯಾ ಕುರಿತು ಕಾರ್ಯಾಗಾರ ಆಯೋಜಿಸಲಾಗಿತ್ತು.
ಕುಂದಾಪುರ: ವಿಶ್ವ ಛಾಯಾಗ್ರಹಣ ಸಪ್ತಾಹದ ಅಂಗವಾಗಿ ಇಲ್ಲಿನ ಮೂಡ್ಲಕಟ್ಟೆಯ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯ (ಐಎಂಜೆಐಎಸ್‌ಸಿ) ಛಾಯಾಗ್ರಹಣ ಮತ್ತು ಡಿಜಿಟಲ್ ಕ್ಲಬ್ ವತಿಯಿಂದ ಡಿಜಿಟಲ್ ಮೀಡಿಯಾ ಕುರಿತು ಕಾರ್ಯಾಗಾರ ಆಯೋಜಿಸಲಾಗಿತ್ತು.
ಈ ಕಾರ್ಯಾಗಾರವನ್ನು ಇಯೋರ್ ಟೆಕ್ ಸಂಸ್ಥೆಯ ಸಂಸ್ಥಾಪಕ ಅನೀಶ್ ಪುತ್ರನ್ ಅವರು ನಡೆಸಿಕೊಟ್ಟರು. ಅವರು ಸೈದ್ಧಾಂತಿಕ ಮತ್ತು ಪ್ರಾಯೋಗಿಕ ಕಲಿಕೆಯನ್ನೊಳಗೊಂಡ ಈ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ಫೋಟೋಶಾಪ್, ಫೋಟೋ ಎಡಿಟಿಂಗ್ ಮತ್ತು ಡಿಜಿಟಲ್ ಕಂಟೆಂಟ್ ಕ್ರಿಯೇಷನ್‌ನ ಮೂಲ ಕೌಶಲ್ಯಗಳನ್ನು ಪರಿಚಯಿಸಿದರು. ಇಂದಿನ ಸೃಜನಶೀಲ ಮತ್ತು ವೃತ್ತಿಪರ ಕ್ಷೇತ್ರಗಳಲ್ಲಿ ಡಿಜಿಟಲ್ ಮೀಡಿಯಾ ಕೌಶಲ್ಯಗಳ ಬೆಳೆಯುತ್ತಿರುವ ಮಹತ್ವವನ್ನು ಒತ್ತಿ ಹೇಳಿದರು.ಕಾರ್ಯಕ್ರಮವನ್ನು ಸಿಬ್ಬಂದಿ ಸಂಯೋಜಕ ಜಿತೇಶ್ ಕುಮಾರ್ ಎ.ಎಚ್. ಹಾಗೂ ವಿದ್ಯಾರ್ಥಿ ಸಂಯೋಜಕ ತೃತೀಯ ಬಿಸಿಎ ವಿದ್ಯಾರ್ಥಿ ರಾಹಿಲ್ ಮತ್ತು ತೃತೀಯ ಬಿಕಾಂ ವಿದ್ಯಾರ್ಥಿನಿ ಸಾನಿಯಾ ಆಯೋಜಿಸಿದರು.