ಸಣ್ಣ ಕಥೆಗಳು ಮನುಷ್ಯನ ಜೀವನದಲ್ಲಿ ಗಾಢವಾಗಿ ತಟ್ಟುವ ಯಾವುದಾದರೊಂದು ಸನ್ನಿವೇಶವನ್ನು ಕಲಾತ್ಮಕವಾಗಿ ಚಿತ್ರಿಸುತ್ತವೆ. ಅವುಗಳಲ್ಲಿ ಮನುಷ್ಯನನ್ನು ಬದುಕಿನ ಬಗ್ಗೆ ಗಂಭೀರವಾಗಿ ಚಿಂತಿಸುವಂತೆ ಮಾಡಬಲ್ಲ ಮೌಲ್ಯ ಸಂದೇಶಗಳಿದ್ದರೆ ಅಂತಹ ಕಥೆಗಳ ಘನತೆ ಇನ್ನೂ ಹೆಚ್ಚಾಗುತ್ತದೆ ಎಂದು ಲೇಖಕ-ಉಪನ್ಯಾಸಕ ನರೇಂದ್ರ ಎಸ್. ಗಂಗೊಳ್ಳಿ ಹೇಳಿದರು.

ಕುಂದಾಪುರ : ಸಣ್ಣ ಕಥೆಗಳು ಮನುಷ್ಯನ ಜೀವನದಲ್ಲಿ ಗಾಢವಾಗಿ ತಟ್ಟುವ ಯಾವುದಾದರೊಂದು ಸನ್ನಿವೇಶವನ್ನು ಕಲಾತ್ಮಕವಾಗಿ ಚಿತ್ರಿಸುತ್ತವೆ. ಅವುಗಳಲ್ಲಿ ಮನುಷ್ಯನನ್ನು ಬದುಕಿನ ಬಗ್ಗೆ ಗಂಭೀರವಾಗಿ ಚಿಂತಿಸುವಂತೆ ಮಾಡಬಲ್ಲ ಮೌಲ್ಯ ಸಂದೇಶಗಳಿದ್ದರೆ ಅಂತಹ ಕಥೆಗಳ ಘನತೆ ಇನ್ನೂ ಹೆಚ್ಚಾಗುತ್ತದೆ ಎಂದು ಲೇಖಕ-ಉಪನ್ಯಾಸಕ ನರೇಂದ್ರ ಎಸ್. ಗಂಗೊಳ್ಳಿ ಹೇಳಿದರು.

ಅವರು ಇಲ್ಲಿನ ಜನಪ್ರತಿನಿಧಿ ಪತ್ರಿಕಾ ಕಚೇರಿಯಲ್ಲಿ ನಡೆದ ಪಾರ್ವತಿ ಜಿ. ಐತಾಳರ ಎರಡು ಕೃತಿಗಳ ಲೋಕಾರ್ಪಣೆ ಸಮಾರಂಭದಲ್ಲಿ ‘ಘಾತ’ ಕಥಾಸಂಕಲನದ ಕುರಿತು ಅವರು ಮಾತನಾಡಿದರು.ಲೇಖಕಿ-ಉಪನ್ಯಾಸಕಿ ಸುಮತಿ ಶೆಣೈ ಅವರು ಪಾರ್ವತಿ ಐತಾಳರ ''''''''''''''''ಮಲೆಯಾಳ ಸಾಹಿತ್ಯದ ಆರಂಭ ಕಾಲ'''''''''''''''' ಎಂಬ ಇನ್ನೊಂದು ಕೃತಿಯ ಬಗ್ಗೆ ಮಾತನಾಡಿ ''''''''''''''''ಯಾವುದೇ ಸಾಹಿತ್ಯದ ಬೆಳವಣಿಗೆಗೆ ಓದುಗರು ಇತರ ಭಾಷೆಯ ಕೃತಿಗಳನ್ನು ಓದುವುದು ಮಾತ್ರವಲ್ಲದೆ ಆ ಭಾಷೆಯ ಸಾಹಿತ್ಯವು ನಡೆದು ಬಂದ ದಾರಿ ಹಾಗೂ ಅದರ ಇತಿಹಾಸದ ಬಗ್ಗೆ ತಿಳಿದುಕೊಳ್ಳುವುದು ಅಗತ್ಯ. ಈ ದೃಷ್ಟಿಯಿಂದ ಮಲೆಯಾಳ ಸಾಹಿತ್ಯದ ಚರಿತ್ರೆಯ ಒಳನೋಟವನ್ನು ನೀಡುವ ಈ ಕೃತಿ ಅತ್ಯಂತ ಮಹತ್ವದ್ದಾಗಿದೆ'''''''''''''''' ಎಂದರು.

ಕರ್ತೃ ಪಾರ್ವತಿ ಜಿ ಐತಾಳ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಜನಪ್ರತಿನಿಧಿ ಪತ್ರಿಕೆಯ ಸಂಪಾದಕರಾದ ಸುಬ್ರಹ್ಮಣ್ಯ ಪಡುಕೋಣೆ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಲೇಖಕಿ ವಿಮಲಾ ನಾವುಡ ಉಪಸ್ಥಿತರಿದ್ದರು. ಸುಮನಾ ಪಡುಕೋಣೆ ನಿರ್ವಹಿಸಿದರು. ಜೆಸ್ಸಿ ಎಲಿಝಬೆತ್ ವಂದಿಸಿದರು.