ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನಲ್ಲಿ ಎರಡನೇ ವರ್ಷದ ಪದವಿ ಪ್ರದಾನ ಸಮಾರಂಭ ಮತ್ತು ವಾರ್ಷಿಕ ದಿನಾಚರಣೆ ನಡೆಯಿತು. ಈ ಸಮಾರಂಭದಲ್ಲಿ ಸಂಸ್ಥೆಯ ವಿದ್ಯಾರ್ಥಿಗಳಿಗೆ ಪದವಿ ಮತ್ತು ಶೈಕ್ಷಣಿಕ, ಕ್ರೀಡೆ ಮತ್ತು ಪತ್ಯೇತರ ಚಟುವಟಿಕೆಗಳಲ್ಲಿ ಸಾಧನೆ ತೋರಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.ಮುಖ್ಯ ಅತಿಥಿಯಾಗಿ ಬೆಂಗಳೂರಿನ ಆರ್‌ಜಿಯುಎಚ್‌ಎಸ್ ನ ಸೆನೆಟ್ ಸದಸ್ಯೆ ಮತ್ತು ಮಂಗಳೂರಿನ ಡಾ. ಎಂ. ವಿ. ಶೆಟ್ಟಿ ಫಿಸಿಯೋಥೆರಪಿ ಕಾಲೇಜಿನ ಉಪ ಪ್ರಾಂಶುಪಾಲೆ ಪ್ರೊ. ವೈಶಾಲಿ ಶ್ರೀಜಿತ್ ಪದವೀಧರರನ್ನು ಪ್ರೇರೇಪಿಸಿದರು.ಗೌರವ ಅತಿಥಿಯಾಗಿ, ಕುಂದಾಪುರದ ಸರ್ಕಾರಿ ಜನರಲ್ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಚಂದ್ರ ಮರಕಳ ಮಾತನಾಡಿದರು ಐಎಂಜೆ ಸಂಸ್ಥೆಗಳ ಶೈಕ್ಷಣಿಕ ನಿರ್ದೇಶಕ ಡಾ. ಎಸ್. ಎನ್. ಭಟ್ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲೆ ಪ್ರೊ. ಜೆನ್ನಿಫರ್ ಫ್ರೀಡಾ ಮೆನೆಜಸ್ ಮತ್ತು ಉಪಪ್ರಾಂಶುಪಾಲೆ ಪ್ರೊ. ರೂಪಶ್ರೀ ಕೆ. ಎಸ್. ಮತ್ತು ಪೀಡಿಯಾಟ್ರಿಕ್ಸ್ ವಿಭಾಗದ ಮುಖ್ಯಸ್ಥ ಚಂದ್ರಶೇಖರ ಇದ್ದರು.ಪ್ರಾಂಶುಪಾಲ ಪ್ರೊ. ಜೆನ್ನಿಫರ್ ಫ್ರೀಡಾ ಮೆನೆಜಸ್ ಅಧ್ಯಕ್ಷತೆ ಮಂಡಿಸಿದರು, ಎಲ್ಲಾ ಕಾರ್ಯಕ್ರಮಗಳನ್ನು ಅತ್ಯುತ್ತಮ ಸಮನ್ವಯದೊಂದಿಗೆ ಯಶಸ್ವಿಯಾಗಿ ನಡೆಯಿತು ಮತ್ತು ಶೈಕ್ಷಣಿಕ ಶ್ರೇಷ್ಠತೆ ಮತ್ತು ವಿದ್ಯಾರ್ಥಿಗಳ ಸಮಗ್ರ ಅಭಿವೃದ್ಧಿಗೆ ಸಂಸ್ಥೆಯ ಬದ್ಧತೆಯನ್ನು ಪ್ರತಿಬಿಂಬಿಸಿತು.
ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜ್ 2ನೇ ವರ್ಷದ ಘಟಿಕೋತ್ಸವ
ಇಲ್ಲಿನ ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನಲ್ಲಿ ಎರಡನೇ ವರ್ಷದ ಪದವಿ ಪ್ರದಾನ ಸಮಾರಂಭ ಮತ್ತು ವಾರ್ಷಿಕ ದಿನಾಚರಣೆ ನಡೆಯಿತು. ಈ ಸಮಾರಂಭದಲ್ಲಿ ಸಂಸ್ಥೆಯ ವಿದ್ಯಾರ್ಥಿಗಳಿಗೆ ಪದವಿ ಮತ್ತು ಶೈಕ್ಷಣಿಕ, ಕ್ರೀಡೆ ಮತ್ತು ಪತ್ಯೇತರ ಚಟುವಟಿಕೆಗಳಲ್ಲಿ ಸಾಧನೆ ತೋರಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.