31ರಂದು ಕುಂಡ್ಯೋಳಂಡ ಕಪ್ ಹಾಕಿ ಉತ್ಸವ ಲಾಂಛನ ಲೋಕಾರ್ಪಣೆ

| Published : Dec 28 2023, 01:46 AM IST

ಸಾರಾಂಶ

ಮುಂದಿನ ವರ್ಷ ಏಪ್ರಿಲ್‌ನಲ್ಲಿ ನಡೆಯಲಿರುವ ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿ ಕುಡ್ಯೋಳಂಡ ಕಪ್‌ ಲೋಗೋ ೩೧ರಂದು ಅನಾವರಣಗೊಳ್ಳಲಿದೆ.

ನಾಪೋಕ್ಲು: ಏಪ್ರಿಲ್ 2024ರಲ್ಲಿ ಜರುಗಲಿರುವ ಕುಂಡ್ಯೋಳಂಡ ಕಪ್ ಹಾಕಿ ಉತ್ಸವದ ಲಾಂಛನ ಲೋಕಾರ್ಪಣೆ ಸಮಾರಂಭ ಡಿ.31ರಂದು ಬೆಳಗ್ಗೆ 9.30ಕ್ಕೆ ನಡೆಯಲಿದೆ.

ನಾಪೋಕ್ಲು ಕೊಡವ ಸಮಾಜದ ಅಪ್ಪಚ್ಚಕವಿ ಸಭಾಂಗಣದಲ್ಲಿ ಕುಂಡ್ಯೋಳಂಡ ಕುಟುಂಬದ ಪಟ್ಟೆದಾರ ನಾಣಿ ನಾಣಯ್ಯ ಹಾಗೂ ಹಾಕಿ ಉತ್ಸವದ ಅಧ್ಯಕ್ಷ ಕುಂಡ್ಯೋಳಂಡ ರಮೇಶ್ ಮುದ್ದಯ್ಯ ಅವರ ಮುಂದಾಳತ್ವದಲ್ಲಿ ಕಾರ್ಯಕ್ರಮ ನಡೆಯಲಿದೆ.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸಂಸದ ಪ್ರತಾಪ್ ಸಿಂಹ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಮತ್ತು ಶಾಸಕ ಎ.ಎಸ್. ಪೊನ್ನಣ್ಣ, ವಿಧಾನ ಪರಿಷತ್ ಸದಸ್ಯ ಮಂಡೆಪಂಡ ಸುಜಾ ಕುಶಾಲಪ್ಪ, ಒಲಂಪಿಯನ್, ಹಾಕಿ ಕರ್ನಾಟಕ ಸೆಕ್ರೆಟರಿ ಜನರಲ್ ಡಾ .ಅಂಜಪರವಂಡ ಬಿ. ಸುಬ್ಬಯ್ಯ, ಕೊಡವ ಹಾಕಿ ಅಕಾಡೆಮಿ ಅಧ್ಯಕ್ಷ ಪಾಂಡಂಡ ಕೆ. ಬೋಪಣ್ಣ, ವೆಸ್ಟ್ ಕೊಳಕೇರಿ ಗ್ರಾಮಾಭಿವೃದ್ಧಿ ಸಂಘದ ಅಧ್ಯಕ್ಷ ಕೆಟೋಳಿರ ಎಸ್. ಕುಟ್ಟಪ್ಪ ಪಾಲ್ಗೊಳ್ಳಲಿದ್ದಾರೆ ಎಂದು ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.