ಭವಿಷ್ಯದ ಪ್ರಜೆಗಳನ್ನು ಉತ್ತಮವಾದ ರೀತಿ ಬೆಳೆಸುವ ಹಾಗೂ ಅವರ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ ಕನಕೋತ್ಸವ ನಡೆಸಲಾಗುತ್ತಿದೆ ಎಂದು ಮಾಜಿ ಸಂಸದ ಡಿ ಕೆ ಸುರೇಶ್ ತಿಳಿಸಿದರು.
ಕನ್ನಡಪ್ರಭ ವಾರ್ತೆ ಕುಣಿಗಲ್ ಭವಿಷ್ಯದ ಪ್ರಜೆಗಳನ್ನು ಉತ್ತಮವಾದ ರೀತಿ ಬೆಳೆಸುವ ಹಾಗೂ ಅವರ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ ಕನಕೋತ್ಸವ ನಡೆಸಲಾಗುತ್ತಿದೆ ಎಂದು ಮಾಜಿ ಸಂಸದ ಡಿ ಕೆ ಸುರೇಶ್ ತಿಳಿಸಿದರು. ಪಟ್ಟಣದ ಜಿಕೆ ಬಿಎಮ್ಎಸ್ ಮೈದಾನದಲ್ಲಿ ಏರ್ಪಡಿಸಿದ್ದ ಕುಣಿಗಲ್ ಉತ್ಸವದ ಪ್ರಯುಕ್ತ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ವಿದ್ಯಾರ್ಥಿಗಳನ್ನು ಅಭಿನಂದಿಸಿ ಮಾತನಾಡಿದರು.
ತಾಲೂಕಿನ ವಿವಿಧ ಭಾಗಗಳಲ್ಲಿನ ಹಲವಾರು ವಿಶೇಷ ಸಾಂಸ್ಕೃತಿಕ ಧಾರ್ಮಿಕ ಹಾಗೂ ಕ್ರೀಡೆ ಕಾರ್ಯಕ್ರಮ ಸೇರಿದಂತೆ ಹಲವಾರು ರಂಗಗಳಲ್ಲಿ ಪ್ರತಿಭಾವಂತರನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸವನ್ನು ಡಿಕೆಎಸ್ ಚಾರಿ ಟಬಲ್ ಟ್ರಸ್ಟ್ ವತಿಯಿಂದ ಕುಣಿಗಲ್ ಶಾಸಕರ ನೇತೃತ್ವದಲ್ಲಿ ಮಾಡಲಾಗುತ್ತಿದೆ. ಇದು ನಿಮ್ಮ ಗ್ರಾಮದಂತೆ ಪ್ರತಿ ಗ್ರಾಮದಲ್ಲಿ ಆಚರಿಸುವ ಹಬ್ಬ ಅಲ್ಲ ಕುಣಿಗಲ್ ತಾಲೂಕಿನ ಎಲ್ಲಾ ಜನಾಂಗದವರು ವಿದ್ಯಾರ್ಥಿಗಳು ಸೇರಿದಂತೆ ಪ್ರತಿಯೊಬ್ಬರೂ ಕೂಡ ಈ ಆಚರಣೆಯನ್ನು ಆಚರಿಸುವ ಕಾರ್ಯಕ್ರಮ ಆಗಿದೆ. ರೈತರ ಮಕ್ಕಳು ಆತ್ಮವಿಶ್ವಾಸವನ್ನು ಕಳೆದುಕೊಳ್ಳಬಾರದು ಉತ್ತಮ ಸಾಧನೆ ಹಾಗೂ ಬುದ್ಧಿವಂತಿಕೆಯಿಂದ ತಮ್ಮ ಕ್ಷೇತ್ರದಲ್ಲಿ ಸ್ಪರ್ಧಾತ್ಮಕ ಪರಿಣಾಮಗಳನ್ನು ಎದುರಿಸುವ ಪ್ರಯತ್ನ ಆಗಬೇಕು ಎಂದರು. ಸಚಿವ ರಾಮಲಿಂಗಾರೆಡ್ಡಿ ಮಾತನಾಡಿ ಡಿ ಕೆ ಸೋದರರು ಉತ್ತಮವಾದ ಕಾರ್ಯಕ್ರಮವನ್ನು ಮಾಡುತ್ತಿದ್ದಾರೆ ಶಾಸಕ ಡಾ ರಂಗನಾಥ್ ಕೂಡ ಅವರ ಹಾದಿಯಲ್ಲಿ ರಾಜಕೀಯ ಕ್ಷೇತ್ರದ ಜೊತೆಗೆ ಸೇವೆಯನ್ನು ಕೂಡ ತೊಡಗಿಸಿಕೊಂಡು ಉತ್ತಮ ರಾಜಕಾರಣಿ ಎಂಬುದನ್ನ ಪ್ರತಿಬಿಂಬಿಸಿದ್ದಾರೆ ಅವರ ಭವಿಷ್ಯ ಉತ್ತಮವಾಗಿರಲಿ ಎಂದು ಹಾರೈಸಿದರು. ಕಾರ್ಯಕ್ರಮದಲ್ಲಿ ಶಾಸಕ ಡಾ. ರಂಗನಾಥ್ ಸೇರಿದಂತೆ ಅನೇಕರಿದ್ದರು.