ಕುಪ್ಮಾ ಉಡುಪಿ ಜಿಲ್ಲಾ ಸಮಿತಿ ರಚಿಸಲಾಗಿದ್ದು, ಅದರ ಪದಗ್ರಹಣ ಕಾರ್ಯಕ್ರಮ ಗುರುವಾರ ಇಲ್ಲಿನ ಹೊಟೇಲ್ ಓಶಿಯನ್ ಪರ್ಲ್ಸ್ ಕಡಿಯಾಳಿಯಲ್ಲಿ ನಡೆಯಲಿದೆ.

ಉಡುಪಿ: ಕುಪ್ಮಾ (ಕರ್ನಾಟಕ ಅನುದಾನ ರಹಿತ ಪಪೂ ಕಾಲೇಜು ಆಡಳಿತ ಮಂಡಳಿಗಳ ಸಂಘ) ರಾಜ್ಯ ಸಮಿತಿಯ ನಿರ್ದೇಶನದಂತೆ ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಮೈಸೂರು, ಹಾವೇರಿ, ದಾವಣಗೆರೆ ಜಿಲ್ಲೆಗಳಲ್ಲಿ ಈಗಾಗಲೇ ಕುಪ್ಮಾ ಜಿಲ್ಲಾ ಸಮಿತಿಗಳನ್ನು ರಚಿಸಿ ಕಾರ್ಯಪ್ರವೃತ್ತವಾಗಿವೆ. ಇದೀಗ ಉಡುಪಿ ಜಿಲ್ಲಾ ಸಮಿತಿ ರಚಿಸಲಾಗಿದ್ದು, ಅದರ ಪದಗ್ರಹಣ ಕಾರ್ಯಕ್ರಮ ಗುರುವಾರ ಇಲ್ಲಿನ ಹೊಟೇಲ್ ಓಶಿಯನ್ ಪರ್ಲ್ಸ್ ಕಡಿಯಾಳಿಯಲ್ಲಿ ನಡೆಯಲಿದೆ.

ಅತಿಥಿಗಳಾಗಿ ರಾಜ್ಯ ಕುಪ್ಮಾ ಸಮಿತಿ ಅಧ್ಯಕ್ಷ ಡಾ.ಎಂ ಮೋಹನ್‌ ಆಳ್ವ, ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ (ಪಪೂ) ಉಪನಿರ್ದೇಶಕ ಮಾರುತಿ ಆಗಮಿಸಲಿದ್ದಾರೆ. ರಾಜ್ಯ ಸಮಿತಿಯ ಗೌರವಾಧ್ಯಕ್ಷ ಕೆ.ರಾಧಾಕೃಷ್ಣ ಶೆಣೈ, ಡಾ.ಎಂ.ಬಿ ಪುರಾಣಿಕ್, ಡಾ.ಕೆ.ಸಿ. ನಾಯ್ಕ ಭಾಗವಹಿಸಲಿದ್ದಾರೆ. ಕುಪ್ಮಾ ಉಡುಪಿ ಜಿಲ್ಲಾ ಸಮಿತಿಯ ಗೌರವಾಧ್ಯಕ್ಷ ಡಾ. ಪ್ರಶಾಂತ್ ಶೆಟ್ಟಿ ಅಧ್ಯಕ್ಷತೆ ವಹಿಸುವರು ಎಂದು ಉಡುಪಿ ಕುಪ್ಮಾ ಸಮಿತಿ ನಿಯೋಜಿತ ಅಧ್ಯಕ್ಷ ಸಿಎ ಗೋಪಾಲಕೃಷ್ಣ ಭಟ್ ಮತ್ತು ಪ್ರಧಾನ ಕಾರ್ಯದರ್ಶಿ ಅಶ್ವತ್ ಎಸ್. ಎಲ್. ತಿಳಿಸಿದ್ದಾರೆ.2022ರ ಡಿ. 9 ರಂದು ಕುಪ್ಮಾ ಸಂಘವು ಉದ್ಘಾಟನೆಗೊಂಡು ಹಲವಾರು ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಕಾರ್ಯತತ್ಪರವಾಗಿದೆ. ಪದವಿ ಪೂರ್ವ ಶಿಕ್ಷಣ ವ್ಯವಸ್ಥೆಯಲ್ಲಿ ಕಳೆದ 3 ವರ್ಷಗಳಲ್ಲಿ ಹಲವಾರು ಮಾರ್ಪಾಡುಗಳು ಮತ್ತು ಬದಲಾವಣೆಗಳನ್ನು ಸರ್ಕಾರದೊಂದಿಗೆ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಕುಪ್ಮಾ ಕಾರ್ಯಪ್ರವೃತ್ತವಾಗಿದೆ. ಸಂಘಟನೆಯು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರಂಭಗೊಂಡು ಇದೀಗ ರಾಜ್ಯವ್ಯಾಪಿ ತನ್ನ ಸದಸ್ಯತ್ವ ವಿಸ್ತರಿಸಿಕೊಂಡಿದೆ. ಬೇರೆಬೇರೆ ಕಾಲೇಜುಗಳ ಸಾರ್ವತ್ರಿಕ ಸಮಸ್ಯೆಗಳು ಎದುರಾದಾಗ ಸರ್ಕಾರದೊಂದಿಗೆ ಆರೋಗ್ಯಕರ ಚರ್ಚೆ, ಸಲಹೆ, ಸೂಚನೆಗಳೊಂದಿಗೆ ಆ ಸಮಸ್ಯೆಗಳನ್ನು ಬಗೆ ಹರಿಸುವಲ್ಲಿ ಯಶಸ್ವಿಯಾಗಿರುತ್ತದೆ.