ಉಳ್ಳಾಲ: ತಾಲೂಕಿನ ಕುರ್ನಾಡು ಶ್ರೀ ದತ್ತಾತ್ರೇಯ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಹಳೆವಿದ್ಯಾರ್ಥಿಗಳ ಮಹಾಸಂಗಮ ಕಾರ್ಯಕ್ರಮ ಭಾನುವಾರ ನಡೆಯಿತು.
ಸಾಂಪ್ರದಾಯಿಕವಾಗಿ ದೀಪ ಪ್ರಜಲನೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ನಿವೃತ್ತ ಮುಖ್ಯೋಪಾದ್ಯಾಯ ಪಿ. ಶಿವರಾಮ ಶೆಟ್ಟಿ ಅವರನ್ನು ಸಮಾರಂಭದಲ್ಲಿ ಸನ್ಮಾನಿಸಲಾಯಿತು.ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ವಿಶೇಷ ಶ್ರೇಣಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ವಿವಿಧ ಮನರಂಜನಾ ಕಾರ್ಯಕ್ರಮಗಳು ನಡೆದವು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ದೇವದಾಸ ಭಂಡಾರಿ ಅಧ್ಯಕ್ಷತೆ ವಹಿಸಿದ್ದರು.ಶಾಲಾ ಸಂಚಾಲಕ ಗಣೇಶ್ ನಾಯ್ಕ್, ಶಾಲಾ ಮುಖ್ಯೋಪಾದ್ಯಾಯಿನಿ ವಸಂತಿ, ಶ್ರೀ ದತ್ತಾತ್ರೇಯ ಯಕ್ಷಗಾನ ಮತ್ತು ಭಜನಾ ಮಂಡಳಿ ಅಧ್ಯಕ್ಷ ನಾಗರಾಜ ಭಟ್, ಹಾಪ್ ಕಾಮ್ಸ್ ಅಧ್ಯಕ್ಷ ಪ್ರಶಾಂತ ಗಟ್ಟಿ, ಹಿರಿಯ ವಿದ್ಯಾರ್ಥಿ ಮೊಯಿದಿನ್ ಹಾಜಿ, ಮದ್ಯನಡ್ಕತ್ವಾಹಾ ಜುಮಾ ಮಸೀದಿ ಅಧ್ಯಕ್ಷ ಅಬೂಬಕ್ಕರ್ ಮತ್ತಿತರರು ಸಮಾರಂಭದಲ್ಲಿ ಹಾಜರಿದ್ದರು.ದೀಕ್ಷಾ ತೃಷಾ ಪ್ರಾರ್ಥಿಸಿದರು. ಭಾರತಿ ಶೆಟ್ಟಿ ಸ್ವಾಗತಿಸಿದರು. ಆಲ್ವಿನ್ ಪಿಂಟೋ ವಂದಿಸಿದರು. ರೇಖಾ ಪ್ರಶಾಂತ್ ಕಾರ್ಯಕ್ರಮ ನಿರೂಪಿಸಿದರು.